--Ads--

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಟ್ರೇಡ್ ಯೂನಿಯನ್ ಹಕ್ಕುಗಳನ್ನು ಉಳಿಸಿ: ಲಕ್ಷ್ಮೀದೇವಮ್ಮ 

On: February 12, 2026 8:42 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಟ್ರೇಡ್ ಯೂನಿಯನ್ ಹಕ್ಕುಗಳನ್ನು ಉಳಿಸಿ: ಲಕ್ಷ್ಮೀದೇವಮ್ಮ

ಶಿಡ್ಲಘಟ್ಟ : ನಾಲ್ಕು ಕಾರ್ಮಿಕ ಸಂಹಿತೆಗಳು ಮತ್ತು ನಿಯಮಗಳನ್ನು ರದ್ದುಗೊಳಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಟ್ರೇಡ್ ಯೂನಿಯನ್ ಹಕ್ಕುಗಳನ್ನು ಉಳಿಸಿ: ಎಂದು ಸಿಐಟಿಯು ಜಿಲ್ಲಾಧ್ಯಕ್ಷೆ ಲಕ್ಷ್ಮೀದೇವಮ್ಮ ತಿಳಿಸಿದರು.

ನಗರದಲ್ಲಿ ಸಿಐಟಿಯು ನೇತೃತ್ವದಲ್ಲಿ ಅಖಿಲ ಭಾರತ ಕೇಂದ್ರೀಯ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಕರೆಯ ಮೇರೆಗೆ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದಲ್ಲಿ ಬಾಗವಹಿಸಿಪ್ರತಿಭಟನಾ ಮೆರವಣಿಗೆ ನಡೆಸಿ ಅವರು ಮಾತನಾಡಿದರು.

ಮೂಲಭೂತ ಸೌಕರ್ಯ, ಉತ್ತಮ ಗುಣಮಟ್ಟದ ಆಹಾರ, ಸರಿಯಾದ ಶಾಲಾ ಪೂರ್ವ ಶಿಕ್ಷಣದೊಂದಿಗೆ ಯಶಸ್ವಿ ಐವತ್ತು ವರ್ಷಗಳನ್ನು ಪೂರೈಸಿದ ಐಸಿಡಿಎಸ್ ಅನ್ನು ಸಾಂಸ್ಥಿಕಗೊಳಿಸಿ, ಇಸಿಸಿಇ ಹಕ್ಕಿಗಾಗಿ ಕಾನೂನನ್ನು ಜಾರಿಗೊಳಿಸಿ ,ಕೇಂದ್ರ ಸರ್ಕಾರದ ನೂತನ ಕಾರ್ಮಿಕ ಸಂಹಿತೆಗಳು ಕಾರ್ಮಿಕ ವಿರೋಧಿಯಾಗಿವೆ ಮತ್ತು 29 ಕಾರ್ಮಿಕ ಕಾನೂನುಗಳನ್ನು 4 ಸಂಹಿತೆಗಳಾಗಿ ಬದಲಾಯಿಸುವುದರಿಂದ ಉದ್ಯೋಗ ಭದ್ರತೆ ಕಡಿಮೆಯಾಗುತ್ತದೆ ಎಂದು ಆರೋಪಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಗ್ರೇಡ್ 3 ಮತ್ತು 4 ಸರ್ಕಾರಿ ನೌಕರರನ್ನಾಗಿ ಕ್ರಮಬದ್ಧಗೊಳಿಸಿ. ಕನಿಷ್ಠ ವೇತನ, ಪಿಂಚಣಿ, ದೇಶಾದ್ಯಂತ ಏಕರೂಪಾ ಸೇವಾ ಷರತ್ತುಗಳು, ಗ್ರಾಚ್ಯುಟಿಗಾಗಿ ಸುಪ್ರಿಂ ಕೋರ್ಟ್ ಆದೇಶವನ್ನು ತಕ್ಷಣವೇ ಜಾರಿಗೊಳಿಸಿ ಮುಂತಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅವರು ಪ್ರತಿಭಟಿಸಿದರು.

ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ ನೀತಿಗಳು, ವಿದ್ಯುತ್ ತಿದ್ದುಪಡಿ ಮಸೂದೆ ಮತ್ತು ಖಾಸಗೀಕರಣದ ವಿರುದ್ಧ ಕಾರ್ಮಿಕರು ಧ್ವನಿ ಎತ್ತಬೇಕೆಂದು ಕರೆ ನೀಡಿದರು.

ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಬಸ್ ನಿಲ್ದಾಣದ ಬಳಿ ಕೆಲ ಕಾಲ ರಸ್ತೆ ತಡೆ ನಡೆಸಿದರು, ನಂತರ ತಹಶೀಲ್ದಾರ್ ಅವರಿಗೆ ಮನವಿಯನ್ನು ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಕುಂದಲಗುರ್ಕಿ ಪಾಪಣ್ಣ,ಫಯಾಜ್,
ಭಾಗ್ಯ ,ಮಂಜುಳಾ, ಅಶ್ವತ್ಥಮ್ಮ,ನಾಗರತ್ನ, ಹಂಸ, ಮುಂತಾದವರು ಪಾಲ್ಗೊಂಡಿದ್ದರು.

WhatsApp

Join Now

Telegram

Join Now

Instagram

Join Now