--Ads--

ಹಾಸ್ಟೆಲ್ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಿ : ಸಚಿವ ಕೆ ಹೆಚ್ ಮುನಿಯಪ್ಪ

On: February 21, 2026 9:54 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ದೇವನಹಳ್ಳಿ ಟೌನ್ ನಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಉದ್ಘಾಟನೆ

ಹಾಸ್ಟೆಲ್ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಿ : ಸಚಿವ ಕೆ ಹೆಚ್ ಮುನಿಯಪ್ಪ

ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ .21:

ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಮೂಲಭೂತ ಸೌಕರ್ಯಗಳ ಜೊತೆಗೆ ಓದಲು ಒಳ್ಳೆಯ ವಾತಾವರಣ ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಗುಣಮಟ್ಟದ ವಿದ್ಯಾಭ್ಯಾಸ ಪಡೆದುಕೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯಡಿ ದೇವನಹಳ್ಳಿ ಟೌನ್ ನಲ್ಲಿ 7 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಿಸಿರುವ ಡಾ. ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನೆಯನ್ನು ಸಚಿವರು ನೆರವೇರಿಸಿದರು.

ಬಳಿಕ ನೂತನ ಕಟ್ಟಡ ಪರಿಶೀಲನೆ ನಡೆಸಿ ಮಾತನಾಡಿದ ಸಚಿವರು ಈ ಹಿಂದೆ ನಮ್ಮ ಸರ್ಕಾರ ಹೋಬಳಿಗೊಂದು ವಸತಿ ಶಾಲೆ ಸ್ಥಾಪಿಸಲು ತೀರ್ಮಾನಿಸಲಾಗಿತ್ತು, ಅದರಂತೆ ಈಗ ಎಲ್ಲಾ ಹೋಬಳಿಗಳಲ್ಲಿ ವಸತಿ ಶಾಲೆ ಜೊತೆಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಲಾಗಿದೆ.

ಹಾಸ್ಟೆಲ್ ಗುಣಮಟ್ಟದ ಆಹಾರ, ಊಟ ಒದಗಿಸಲಾಗುವುದು, ಜೊತೆಗೆ ಪರಿಣಿತ ಶಿಕ್ಷಕರು ಕೂಡ ಹಾಸ್ಟೆಲ್ಗೆ ಬಂದು ಭೋದನೆ ಮಾಡುತ್ತಾರೆ. ಹಾಗಾಗಿ ಇಲ್ಲಿ ಉತ್ತಮ ವಿದ್ಯಾಭ್ಯಾಸ ಪಡೆದುಕೊಳ್ಳುವ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿ.ಪಂ ಸಿಇಒ ಡಾ. ಕೆ.ಎನ್ ಅನುರಾಧ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ರಾಜಣ್ಣ, ಬಯಪ ಅಧ್ಯಕ್ಷ ಶಾಂತಕುಮಾರ್,  ಜಗನ್ನಾಥ, ಪುರಸಭೆ ಮಾಜಿ ಅಧ್ಯಕ್ಷ ಮುನಿಕೃಷ್ಣ, ಮಾಜಿ ಜಿ.ಪಂ ಸದಸ್ಯ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ, ಸಹಾಯಕ ನಿರ್ದೇಶಕ ಓಲೇಕಾರ್, ತಹಶೀಲ್ದಾರ್ ಅನಿಲ್, ಇಒ ಶ್ರೀನಾಥ್ ಗೌಡ ಸೇರಿದಂತೆ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕರ್ನಾಟಕ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಫೆ.20:

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ ಸ್ಥಾಪಿಸಲಾಗಿದ್ದು, ನಗರ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪುತ್ತೇವೆ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿದ್ದು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಎರಡು ಕರ್ನಾಟಕ ಒನ್ ಕೇಂದ್ರಗಳ ಸ್ಥಾಪನೆಗೆ ಆಸಕ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ವಿಜಯಪುರ ಪುರಸಭೆ (ಟಿ.ಎಮ್. ಸಿ) ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ (ಟಿಪಿ) ಇಲ್ಲಿ ಖಾಲಿಯಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 02, 2026 ಕೊನೆಯ ದಿನವಾಗಿದ್ದು, ಆಸಕ್ತರು https://www.karnatakaone.gov.in/Public/FranchiseeTerms ನಲ್ಲಿ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಇನ್ನಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now