--Ads--

ಪಾರದರ್ಶಕ ಸೇವೆಗೆ ತಂತ್ರಜ್ಞಾನ ಬಳಕೆಯ ಅರಿವು ಅವಶ್ಯಕ: ನಿವೃತ್ತ ನ್ಯಾಯಾಧೀಶ ಎಸ್.ಆರ್ ಸೋಮಶೇಖರ್

On: February 21, 2026 11:51 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಭೂಮಿ@25 ಜಿಲ್ಲಾ ಮಟ್ಟದ ಕಂದಾಯ ಇಲಾಖೆಯ ಕಾರ್ಯಗಾರ

ಪಾರದರ್ಶಕ ಸೇವೆಗೆ ತಂತ್ರಜ್ಞಾನ ಬಳಕೆಯ ಅರಿವು ಅವಶ್ಯಕ: ನಿವೃತ್ತ ನ್ಯಾಯಾಧೀಶ ಎಸ್.ಆರ್ ಸೋಮಶೇಖರ್

ಬಿಜಿಎಸ್ ನಗರ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ. 21:

ಕಂದಾಯ ಸೇವೆಗಳನ್ನು ಪಾರದರ್ಶಕವಾಗಿ ಸಾರ್ವಜನಿಕರಿಗೆ ತಲುಪಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೊಸ ಕಾನೂನುಗಳು, ನಿಯಮಗಳು ಮತ್ತು ತಾಂತ್ರಿಕ ಬದಲಾವಣೆಗಳ ಕುರಿತು ತಿಳಿದುಕೊಳ್ಳುವುದು ಅವಶ್ಯವಾಗಿದೆ ಎಂದು ನಿವೃತ್ತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಆರ್ ಸೋಮಶೇಖರ್ ಅವರು ಹೇದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ “ಭೂಮಿ@25” ಕುರಿತು ಜಿಲ್ಲಾ ಮಟ್ಟದ ಕಂದಾಯ ಇಲಾಖೆಯ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಂದಾಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನ್ಯಾಯಾಲಯ ವ್ಯಾಪ್ತಿಯಲ್ಲಿ ಬರುವ ಪ್ರಕರಣಗಳಲ್ಲಿ ಪ್ರವೇಶಿಸಬಾರದು. ಸಂವಿಧಾನ ಹಾಗೂ ಕಾನೂನುಗಳ ಕುರಿತು ಅರಿತುಕೊಳ್ಳಬೇಕು. ಜಮೀನು, ಆಸ್ತಿ ವರ್ಗಾವಣೆಯಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸುವವರ ಬಗ್ಗೆ ಗಮನ ಹರಿಸಿ ಅವುಗಳಿಗೆ ಕಡಿವಾಣ ಹಾಕಬೇಕು ಎಂದರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಮಾತನಾಡಿ, ಕಂದಾಯ ಇಲಾಖೆಯ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೆ ತರಲು ತರಬೇತಿ ಕಾರ್ಯಗಾರ ಬಹಳಷ್ಟು ಉಪಯುಕ್ತವಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಿಬ್ಬಂದಿಗಳಿಗೆ ತಿಳಿಸಿದರು.

ಇಂದಿನ ತಂತ್ರಜ್ಞಾನ ಯುಗದಲ್ಲಿ ತಂತ್ರಾಂಶ ಬಳಕೆ ಮಾಡಿಕೊಂಡು ಭೂಮಿಗಳ ಸರ್ವೆ ಕಾರ್ಯವನ್ನು ತ್ವರಿತವಾಗಿ ಮಾಡಬಹುದಾಗಿದೆ ಎಂದು ಹೇಳಿದರು.

ಆಸ್ತಿ ಮಾಲೀಕರು ತೀರಿ ಹೋದಲ್ಲಿ ಸೂಕ್ತ ದಾಖಲೆಗಳೊಂದಿಗೆ ಸ್ಥಳ ಮಹಜರು ಮಾಡಿ ವಾರಸುದಾರರಿಗೆ ಫವತಿ ಖಾತೆ ಮಾಡಬೇಕು. ಸರ್ಕಾರಿ ಆಸ್ತಿಗಳನ್ನು ಅಕ್ರಮಕ್ಕೆ ಆಸ್ಪದ ನೀಡದೇ ಸಂರಕ್ಷಿಸುವಲ್ಲಿ ಕಾರ್ಯನಿರ್ವಹಿಸಬೇಕು ಎಂದರು.

ಕಾರ್ಯಗಾರದಲ್ಲಿ ಭೂ ದಾಖಲೆಗಳ ನಿರ್ವಹಣೆ, ಭೂ ಪರಿವರ್ತನೆ, ಪೋಡಿ, ಫವತಿ ಖಾತೆ, ಕಂದಾಯ ವಸೂಲಿ, ಮತ್ತು ನಾಗರಿಕ ಸೇವೆಗಳ ದಕ್ಷತೆಯನ್ನು ಹೆಚ್ಚಿಸಲು ತರಬೇತಿ ಕಾರ್ಯಕ್ರಮ ಆಯೋಜಿಸಿತ್ತು.

ಕಾರ್ಯಗಾರದಲ್ಲಿ ಅಪರ ಜಿಲ್ಲಾಧಿಕಾರಿ ಆಯಿಶಾ ಸೈಯದ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ ಸೇರಿದಂತೆ ಕಂದಾಯ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now