--Ads--

ರೈತರು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಬಳಸಿಕೊಂಡು ಕೃಷಿ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಬೇಕು:  ಶಾಸಕ ಬಿ.ಎನ್.ರವಿಕುಮಾ‌ರ್ 

On: February 24, 2026 2:00 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ರೈತರು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಬಳಸಿಕೊಂಡು ಕೃಷಿ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಬೇಕು:  ಶಾಸಕ ಬಿ.ಎನ್.ರವಿಕುಮಾ‌ರ್

ಶಿಡ್ಲಘಟ್ಟ : ಸರ್ಕಾರದಿಂದ ಸಿಗುವ ಈ ಸವಲತ್ತುಗಳ ಸದುಪಯೋಗ ಪಡಿಸಿಕೊಂಡು ರೈತರು ಕೃಷಿ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಬೇಕು ಆ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ಬಿ.ಎನ್.ರವಿಕುಮಾ‌ರ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಡಾ.ಬಿ.ಆ‌ರ್.ಅಂಬೇಡ್ಕರ್, ಆದಿ ಜಾಂಬವ ಹಾಗೂ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯ 24 ಅರ್ಹ ಫಲಾನುಭವಿಗಳಿಗೆ ಪಂಪು ಮೋಟ‌ರ್ ವಿತರಿಸಿ ಅವರು ಮಾತನಾಡಿದರು.

ಸರ್ಕಾರದಿಂದ ಸಿಗುವ ವಿವಿಧ ರೀತಿಯ ಸೌಲಭ್ಯಗಳು ಹಾಗೂ ಅನುದಾನಗಳು ನೇರವಾಗಿ ಅರ್ಹ ಫಲಾನುಭವಿಗೆ ಸಿಗುವಂತಾಗಬೇಕು ರಾಜ್ಯದ ಜನತೆ ಕಟ್ಟುವ ತೆರಿಗೆ ಹಣದಿಂದ ಸರ್ಕಾರ ರೂಪಿಸುವ ಯಾವುದೇ ಯೋಜನೆಯಾಗಲಿ ಅದು ಯಶಸ್ವಿಯಾಗಬೇಕಾದರೆ ಅರ್ಹ ಫಲಾನುಭವಿಗೆ ಆ ಯೋಜನೆ ತಲುಪಬೇಕು ಎಂದು ಹೇಳಿದರು.

ದುರ್ಬಲರು ಆರ್ಥಿಕವಾಗಿ ಮುಂದುವರೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಸವಲತ್ತುಗಳನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಮನವಿ ಮಾಡಿದರು.

ಡಾ.ಬಿ.ಆರ್.ಅಂಬೇಡ್ಕರ್, ಆದಿ ಜಾಂಬವ ಹಾಗೂ ಭೋವಿ ಅಭಿವೃದ್ಧಿ ನಿಗಮಗಳು ಪರಿಶಿಷ್ಟ ಜಾತಿ/ಪಂಗಡದ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಸಹಾಯಧನ ಮತ್ತು ಸಾಲದೊಂದಿಗೆ ಪಂಪ್‌ ಸೆಟ್‌, ಬೋರ್‌ವೆಲ್ ಕೊರೆತ ಹಾಗೂ ವಿದ್ಯುದ್ದೀಕರಣ (ಗಂಗಾ ಕಲ್ಯಾಣ ಯೋಜನೆ) ಸೌಲಭ್ಯ ಒದಗಿಸುತ್ತವೆ ಎಂದರು.

ಈ ವೇಳೆ 24 ಫಲಾನುಭವಿಗಳಿಗೆ ಟೆಟ್ರೋ ಕಂಪನಿಯ ಪಂಪು ಮೋಟರ್ ಕೇಬಲ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪಿ.ಎಲ್‌.ಡಿ ಬ್ಯಾಂಕ್ ಅಧ್ಯಕ್ಷ ಹಾಗೂ ಕೋಚಿಮುಲ್ ನಿರ್ದೇಶಕ ಬಂಕ್‌ ಮುನಿಯಪ್ಪ, ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್ ಮುಂತಾದವರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now