ಮರಸೇ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಡಾ.ಯತೀಂದ್ರ ಸಿದ್ದರಾಮಯ್ಯಗೆ ಗ್ರಾಮಸ್ಥರ ಮನವಿ
ವಿಜಯ ದರ್ಪಣ ನ್ಯೂಸ್….
ಮರಸೇ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಡಾ.ಯತೀಂದ್ರ ಸಿದ್ದರಾಮಯ್ಯಗೆ ಗ್ರಾಮಸ್ಥರ ಮನವಿ

ತಾಂಡವಪುರ ಫೆಬ್ರವರಿ 25ಮರಸೇ ಗ್ರಾಮದ ಗ್ರಾಮ ಠಾಣಾ ಜಾಗ ಗುರುತಿಸಿ ಕ್ರಮ ಕೈಗೊಳ್ಳಿ ಗ್ರಾಮಕ್ಕೆ ಸರಿಯಾಗಿ ಸಾರಿಗೆ ಬಸ್ಸು ಬರುವಂತೆ ಗ್ರಾಮಗಳ ಸ್ಮಶಾಣ ಅಭಿವೃದ್ಧಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಡಾ. ಯತೀಂದ್ರ ಸಿದ್ದರಾಮಯ್ಯನವರಲ್ಲಿ ಗ್ರಾಮಸ್ಥರ ಮನವಿ ಮಾಡಿದರು.
ಅವರು ಇಂದು ಮೈಸೂರು ತಾಲೂಕು, ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಮರಸೇ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧಿ ಉಳ್ಳ ಪುರಾತನ ಕಾಲದ ನಾರಾಯಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಸಾರ್ವಜನಿಕರ ಕುಂದು ಕೊರತೆ ಸಮಸ್ಯೆಗಳನ್ನು ಆಲಿಸುವ ಕಾರ್ಯಕ್ರಮದಲ್ಲಿ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಯತಿಂದ್ರ ಸಿದ್ರಾಮಯ್ಯನವರು ಭಾಗವಹಿಸಿ ಸಾರ್ವಜನಿಕರ ಹವಾಲು ಸ್ವೀಕರಿಸಿ ಗ್ರಾಮದ ಗ್ರಾಮಗಳ ಜಾಗ ಸ್ಮಶಾನಾಭಿವೃದ್ಧಿ ಸಾರಿಗೆ ಸಂಸ್ಥೆ ಬಸ್ಸು ಗ್ರಾಮಕ್ಕೆ ಸರಿಯಾಗಿ ಸಾರಿಗೆ ಬಸ್ಸು ಬರುವಂತೆ ಕಮ ಕೈಗೊಳ್ಳುವಂತೆ ಸ್ಥಳದಲ್ಲಿ ಅಧಿಕಾರಿಗಳಿಗ ಡಾಕ್ಟರ್ ಯತೀಂದ್ರ ಸಿದ್ರಾಮಯ್ಯನವರು ಸೂಚನೆ ನೀಡಿದರು
ತಾಲೂಕು ಆಡಳಿತ ಕಡಕೋಳ ಪಟ್ಟಣ ಪಂಚಾಯ್ತಿ ವತಿಯಿಂದ ಏರ್ಪಡಿಸಿದ್ದ ಸಾರ್ವಜನಿಕರ ಕುಂದು ಕೊರತೆ ಸಮಸ್ಯೆಗಳ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಯತಿಂದ್ರ ಸಿದ್ರಾಮಯ್ಯನವರು ಭಾಗವಹಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಹಾಲಿಸಿದರು ನಿಮ್ಮ ಸಮಸ್ಯೆಗಳನ್ನು ಕೇಳಿ ನಿಮ್ಮ ಸಮಸ್ಯೆಗಳನ್ನು ಪರಿಹಾರ ಕಂಡುಕೊಳ್ಳಲು ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳನ್ನು ನಮ್ಮ ಜೊತೆಯಲ್ಲಿ ಕರೆದುಕೊಂಡು ಬಂದಿದ್ದೇವೆ ,ನಿಮ್ಮ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರವನ್ನು ಕಂಡುಕೊಳ್ಳುವಂತಹ ಕೆಲಸವನ್ನ ನಾವು ಮಾಡುತ್ತೇವೆ ಎಂದು ಭರವಸೆ ನೀಡಿದ ಅವರು ಸ್ಥಳದಲ್ಲಿ ಇದ್ದ ಕಂದಾಯ ಇಲಾಖೆ ಅಧಿಕಾರಿಗಳು ಸಾರಿಗೆ ಇಲಾಖೆ ಅಧಿಕಾರಿಗಳು ಮತ್ತು ಇತರೆ ಇಲಾಖೆಯ ಇತರೆ ಇಲಾಖೆಯ ಅಧಿಕಾರಿಗಳಿಗೆ ಅಧಿಕಾರಿಗಳಿಗೆ ಹೇಳುವ ಮೂಲಕ ಮತ್ತೆ ಇಂಥ ಸಮಸ್ಯೆಗಳು ಬಾರದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ವರುಣ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರವಿ ಕಾಂಗ್ರೆಸ್ ಮೈಸೂರು ಜಿಲ್ಲೆ ಕಾಂಗ್ರೆಸ್ ಪಕ್ಷದ ಕಾನೂನು ಘಟಕದ ಎಂ ಸಿ ಹುಂಡಿ ಶಿವಪ್ರಸಾದ್ ಸಕಳ್ಳಿ ಬಸವರಾಜು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಮಂಜುಳಾ ಮಂಜುನಾಥ್, ಅಹಿಂದ ಜವರಪ್ಪ ಚಿಕ್ಕಳ್ಳಿ ದೇವರಾಜು ತಾಲೂಕು ಪಂಚಾಯಿತಿ ದಂಡಾಧಿಕಾರಿ ಮಹೇಶ್ ಕುಮಾರ್ ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿ, ವಿಜಯಕುಮಾರ್, ತಾಲೂಕು ಪಂಚಾಯತಿ ಕಾರ್ಯನಿರ್ವಾಣಾಧಿಕಾರಿ ಕೃಷ್ಮ ಮರಸೇ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸಿದ್ದನಾಯಕ ಮಾದೇವಸ್ವಾಮಿಆಪ್ತ ಸಹಾಯಕ ಪ್ರದೀಪ್ ಶಿವಸ್ವಾಮಿ ಮಹೇಶ್ ಹಾಗೂ, ಉಪ ತಹಶೀಲ್ದಾರ್ ಲತಾ, ಪಟ್ಟಣ ಪಂಚಾಯಿತಿ ಅಧಿಕಾರಿ ದೀಪ ಮಾಕನ ಹುಂಡಿ ರವಿ ಪುಟ್ಟಸ್ವಾಮಿ ಶಿವಣ್ಣ ಕಿರಾಳು ಸಂತೋಷ ಚೆನ್ನಜಮ್ಮ ಕನಕ ಮೂರ್ತಿ ಸೇರಿದಂತೆ ಗ್ರಾಮ ಪಂಚಾಯತಿ ಎಲ್ಲಾ ಮುಖಂಡರು, ಗ್ರಾಮಸ್ಥರು ಹಾಜರಿದ್ದರು.
