ಜೀತ ಪದ್ದತಿ ನಿರ್ಮೂಲನೆ ಎಲ್ಲರ ಸಹಕಾರದಿಂದ ಸಾಧ್ಯ: ಎಡಿಸಿ ಸೈಯಿದಾ ಆಯಿಷಾ
ವಿಜಯ ದರ್ಪಣ ನ್ಯೂಸ್….
ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ
ಜೀತ ಪದ್ದತಿ ನಿರ್ಮೂಲನೆ ಎಲ್ಲರ ಸಹಕಾರದಿಂದ ಸಾಧ್ಯ :ಎಡಿಸಿ ಸೈಯಿದಾ ಆಯಿಷಾ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ.26 :
ಜೀತ ಪದ್ದತಿಯಂತಹ ಸಾಮಾಜಿಕ ಪಿಡುಗು ಕೆಲವು ಭಾಗಗಳಲ್ಲಿ ಇಂದಿಗೂ ಜೀವಂತವಾಗಿದೆ, ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಮನ್ವಯತೆಯಿಂದ ಜೀತ ಪದ್ದತಿಯ ನಿರ್ಮೂಲನೆ ಮಾಡಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಹೇಳಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ “ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ: ಒಂದು ದಿನದ ಕಾರ್ಯಾಗಾರ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದೆ ಜೀತ ಪದ್ಧತಿಯು ಹೆಚ್ಚಾಗಿ ಕಂಡುಬರುತ್ತಿತ್ತು, ಕಾಲಾ ಕ್ರಮೇಣ ಕಡಿಮೆ ಆಗುತ್ತಿದೆ. ಆದರೂ ಸಹ ಸಾಮಾಜಿಕ-ಆರ್ಥಿಕ ಅಸಮಾನತೆಗಳಿಂದಾಗಿ ಇಂದಿಗೂ ಜೀತ ಪದ್ಧತಿ ವ್ಯವಸ್ಥೆ ಜೀವಂತವಾಗಿದೆ ಎಂದರು.
ಶಿಕ್ಷಣ,ಕಾನೂನು, ಜಾಗೃತಿ, ಸಮಾನತೆಯಿಂದ ಜೀತ ಪದ್ಧತಿ ನಿರ್ಮೂಲನೆ ಮಾಡಲು ಸಾಧ್ಯ. ಜೀತ ಪದ್ಧತಿಯ ನಿರ್ಮೂಲನೆಗೆ ವಿವಿಧ ಇಲಾಖೆಗಳು, ಸ್ವಯಂ ಸೇವಕ ಸಂಘಗಳು, ಸಮುದಾಯಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜೀತ ಪದ್ದತಿಗೆ ಒತ್ತಾಯಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಎಲ್ಲಾದರೂ ಜೀತ ಪದ್ಧತಿ ವ್ಯವಸ್ಥೆ ಕಂಡುಬಂದಲ್ಲಿ ಅಥವಾ ಬಲವಂತವಾಗಿ ದುಡಿಸಿಕೊಳ್ಳುವ ಪರಿಸ್ಥಿತಿ ಕಂಡು ಬಂದಲ್ಲಿ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದರು.
ಶಾಶ್ವತ ಪುನರ್ವಸತಿ ಕಲ್ಪಿಸುವ ಸಂಬಂಧ ಜೀತ ವಿಮುಕ್ತರಿಗೆ ಎಕರೆ ಭೂಮಿಯನ್ನು ಉಚಿತವಾಗಿ ನೀಡಲು ಕೋರಿ ಜಿಲ್ಲಾಧಿಕಾರಿ ಪತ್ರ ಬರೆಯಲಾಗಿದೆ. ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ (ಫಲಾನುಭವಿ ಆಧಾರಿತ) ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ವಹಿಸುವಂತೆ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
157 ಜೀತದಾಳುಗಳಿಗೆ ಪುನರ್ವಸತಿ
ಜಿಲ್ಲೆಯನ್ನು 2020 ರಲ್ಲಿ ಜೀತ ಮುಕ್ತ ಎಂದು ಘೋಷಿಸಲಾಗಿದ್ದು, 164 ಜೀತದಾಳುಗಳನ್ನು ವಿಮುಕ್ತಿಗೊಳಿಸಲಾಗಿದೆ, ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ 157 ಜೀತ ದಾಳುಗಳಿಗೆ ತಲಾ 20,000 ರೂ.ಗಳಂತೆ 31.40 ಲಕ್ಷ ರೂ.ಗಳು ನೀಡಲಾಗಿದೆ. ಇಬ್ಬರಿಗೆ ನಿವೇಶನ ನೀಡಲಾಗಿದ್ದು, 43 ಜನರಿಗೆ ವಸತಿ ಒದಗಿಸಲಾಗಿದೆ. 54 ಜನರಿಗೆ ನರೇಗಾ ಜಾಬ್ ಕಾರ್ಡ್, 156 ಜನರಿಗೆ ಮತದಾನ ಗುರುತಿನ ಚೀಟಿ, 112 ಜನರಿಗೆ ಬ್ಯಾಂಕ್ ಗಳಿಂದ ಸಾಲ ಧನಸಹಾಯ ನೀಡಲಾಗಿದೆ.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಡಾ. ಕಿರಣ ಕಮಲ ಪ್ರಸಾದ ರವರು ಮಾತನಾಡಿ, ಜೀತ ಕಾರ್ಮಿಕ ಪದ್ಧತಿ (ರದ್ದತಿ) ಕಾಯ್ದೆ 1976 ಜೀತ ಪದ್ಧತಿ ವ್ಯಾಖ್ಯಾನ, ಜೀತ ಕಾರ್ಮಿಕ ಪದ್ದತಿಗೆ ಒತ್ತಾಯಿಸುವವರ ವಿರುದ್ಧ ಕಾಯ್ದೆಯಡಿ ನಿಗದಿಗೊಳಿಸಿರುವ ಕಾನೂನು ಶಿಕ್ಷೆ, ಜೀತ ವಿಮುಕ್ತರ ಪುನರ್ವಸತಿ ಯೋಜನೆ (RBL Scheme), ಜೀತ ಕಾರ್ಮಿಕರ ಗುರುತಿಸುವಿಕೆ, ರಕ್ಷಣೆ ಹಾಗೂ ಪುನರ್ವಸತಿ ಕುರಿತಂತೆ ಕೇಂದ್ರ ಸರ್ಕಾರವು ಹೊರಡಿಸಿರುವ ಮಾದರಿ ಕಾರ್ಯವಿಧಾನಗಳ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಜೀತ ಪದ್ಧತಿ ನಿರ್ಮೂಲನೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಾಗಾರದಲ್ಲಿ ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಜಿಲ್ಲಾ ಮೇಲುಸ್ತುವರಿ ಸಮಿತಿ ಸದಸ್ಯ ಮ್ಯಾತ್ಯು ಮುನಿಯಪ್ಪ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಫೆ.27 ರಂದು ದೊಡ್ಡಬಳ್ಳಾಪುರದಲ್ಲಿ ಉದ್ಯೋಗ ಮೇಳ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಫೆ.26:
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದೊಡ್ಡಬಳ್ಳಾಪುರ ತಾಲೂಕು ಆಡಳಿತ ಹಾಗೂ ದೊಡ್ಡಬಳ್ಳಾಪುರ ಕೈಗಾರಿಕೆಗಳ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ ದೊಡ್ಡಬಳ್ಳಾಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ದೊಡ್ಡಬಳ್ಳಾಪುರ ಟೌನ್ ನ ಮಾದಗೊಂಡನಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 27 ರಂದು ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.
ಉದ್ಯೋಗಮೇಳದ ಉದ್ಘಾಟನೆಯನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ನೆರವೇರಿಸಲಿದ್ದಾರೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್, 5ನೇ ಹಣಕಾಸು ಆಯೋಗದ ಅಧ್ಯಕ್ಷ ಶ್ರೀ ಸಿ. ನಾರಾಯಣಸ್ವಾಮಿ, ರಾಜ್ಯ ವಿದ್ಯುನ್ಮಾನಾಭಿವೃದ್ಧಿ ನಿಗಮ ನಿಯಮಿತ ಹಾಗೂ ಹೊಸಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಶ್ರೀ ಶರತ್ ಕುಮಾರ್ ಬಚ್ಚೇಗೌಡ ಅವರು ಉಪಸ್ಥಿತಿ ಇರಲಿದೆ.
ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ.ಸುಧಾಕರ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ರವಿ, ಪುಟ್ಟಣ್ಣ, ಎನ್.ನಾಗರಾಜು(ಎಂ.ಟಿ.ಬಿ), ರಾಮೋಜಿ ಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಬಿ.ರಾಜಣ್ಣ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ದೊಡ್ಡಬಳ್ಳಾಪುರ ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ವಿಶ್ವನಾಥ ರೆಡ್ಡಿ, ದೊಡ್ಡಬಳ್ಳಾಪುರದ ನಗರಸಭೆ ಅಧ್ಯಕ್ಷರು ಶ್ರೀಮತಿ ಸುಮಿತ್ರ ಕೆ.ಆನಂದ್, ನಗರಸಭೆ ಉಪಾಧ್ಯಕ್ಷ ಎಂ ಮಲ್ಲೇಶ್ , ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಪಿ.ಸಿ.ಜಾಫರ್ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಎ.ಬಿ.ಬಸವರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಚಂದ್ರಕಾಂತ್, ತಾಲೂಕಿನ ಎಲ್ಲಾ ಚುನಾಯಿತ ಪ್ರತಿನಿಧಿಗಳು, ನಾಮ ನಿರ್ದೇಶಿತ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿರುತ್ತಾರೆ.
ದೊಡ್ಡಬಳ್ಳಾಪುರದ ಉಪವಿಭಾಗಾಧಿಕಾರಿ ಎನ್, ದುರ್ಗಾಶ್ರೀ, ಆರಕ್ಷಕ ಉಪ ಅಧೀಕ್ಷಕ ಪಾಂಡುರಂಗ ಎಸ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಿ. ಜಗನ್ನಾಥ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಂಟಿ ನಿರ್ದೇಶಕರು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ನರೇಂದ್ರ ಬಾಬು ಎನ್, ದೊಡ್ಡಬಳ್ಳಾಪುರ ತಾಲ್ಲೂಕಿನ ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿ ಮಲ್ಲಪ್ಪ ಕೆ. ಯಾರಗೋಳ, ದೊಡ್ಡಬಳ್ಳಾಪುರ ಕಾರ್ಯ ನಿರ್ವಹಣಾಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಮಂಜುನಾಥ ಹರ್ತಿ, ದೊಡ್ಡಬಳ್ಳಾಪುರದ ನಗರಸಭೆ ಪೌರಾಯುಕ್ತ ಆರ್. ಕಾರ್ತಿಕೇಶ್ವರ ಉಪಸ್ಥಿತರಿರುವರು.
