ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಜವಾಬ್ದಾರಿ ಅಧಿಕಾರಿಗಳಿಗೆ ಸೂಚನೆ : ಡಾ.ಯತೀಂದ್ರ ಸಿದ್ದರಾಮಯ್ಯ
ವಿಜಯ ದರ್ಪಣ ನ್ಯೂಸ್……
ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಜವಾಬ್ದಾರಿ ಅಧಿಕಾರಿಗಳಿಗೆ ಸೂಚನೆ : ಡಾ.ಯತೀಂದ್ರ ಸಿದ್ದರಾಮಯ್ಯ

ತಾಂಡವಪುರ ಫೆಬ್ರುವರಿ 27 ನಾವು ನೀವು ಎಲ್ಲಾ ಸಾರ್ವಜನಿಕರ ಸೇವೆ ಮಾಡುವ ಸೇವಕರು ಅವರು ಹೇಳುವ ಸಮಸ್ಯೆಗಳಿಗೆ ಸ್ಪಂದಿಸುವುದೇ ನಮ್ಮ ಜವಾಬ್ದಾರಿ ಎಂದು ಸರ್ಕಾರಿ ಅಧಿಕಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ರಾಮಯ್ಯನವರು ಅಧಿಕಾರಿಗಳಿಗೆ ಪಾಠ ಹೇಳುವ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಕೂಡಲೆ ಸ್ಪಂದಿಸಿ ಎಂದು ಸೂಚನೆ ನೀಡಿದರು
ಅವರು ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ರಾಂಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಾದ ಬಿದರಗೋಡು ಕೆಂಬಾಲು ಅಹಲ್ಯ ಗೌಡರಹುಂಡಿ ಸೇರಿದಂತೆ ಕೆಂಬಾಲು ಗ್ರಾಮದಲ್ಲಿ ಸುಮಾರು 20 ಲಕ್ಷ ರೂಗಳ ವೆಚ್ಚದ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಭೂಮಿ ಪೂಜೆ ನೆರವೇರಿಸಿಹಾಗೂ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ ಸಾರ್ವಜನಿಕರ ಕುಂದು ಕೊರತೆ ಸಮಸ್ಯೆಗಳನ್ನು ಆಲಿಸಿದರು.
ಇದೆ ವೇಳೆ ಗ್ರಾಮಸ್ಥರು ನಮ್ಮ ಗ್ರಾಮದಲ್ಲಿ ವಿದ್ಯುತ್ ಕಂಬ ಸೇರದಂತೆ ಕುಡಿಯುವ ನೀರು ಸ್ಮಶಾನ ಹಾಗೂ ಚಿರತೆ ಅವಳು ಹೆಚ್ಚಾಗಿದ್ದು ಈ ಎಲ್ಲ ವಿಚಾರಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರೆ ಅವರು ಬೇಜವಾಬ್ದಾರಿ ಉತ್ತರ ನೀಡುವ ಮೂಲಕ ನಮಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯನವರಲ್ಲಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ದೂರು ನೀಡಿದರು
ಸಾರ್ವಜನಿಕರ ದೂರನ್ನು ಸ್ವೀಕರಿಸಿ ಮಾತನಾಡಿದ ಯತೀದ್ರ ಸಿದ್ರಾಮಯ್ಯನವರು ಸ್ಥಳದಲ್ಲಿ ಇದ್ದ ಅಧಿಕಾರಿಗಳನ್ನು ಕರೆದು ನಾವು ನೀವು ಎಲ್ಲರೂ ಸಾರ್ವಜನಿಕ ಸೇವೆ ಮಾಡುವ ಜನಸೇವಕರು ಅವರ ಸಮಸ್ಯೆಗಳಿಗೆ ಸ್ಪಂದಿಸುವುದೇ ನಮ್ಮ ಜವಾಬ್ದಾರಿ ಕೂಡಲೇ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಇನ್ನು ಮುಂದೆ ಇಂಥ ಬೇಜವಾಬ್ದಾರಿ ತನದಿಂದ ವರ್ತಿಸಬೇಡಿ, ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಅಧಿಕಾರಿಗಳಿಗೆ ಪಾಠ ಹೇಳುವ ಮೂಲಕ ನಾವು ನೀವು ಎಲ್ಲ ಜನಸೇವಕರು ಎಂದು ಅಧಿಕಾರಿಗಳಿಗೆ ಮನವರಿಕೆ ಮಾಡಿದರು
ಇದೇ ವೇಳೆ ಇಡೀ ವರುಣ ವಿಧಾನಸಭಾ ಕ್ಷೇತ್ರಕ್ಕೆ ಎಲ್ಲೆಲ್ಲಿ ವಿದ್ಯುತ್ ಮಗಳು ಶಿಥಿಲ ವ್ಯವಸ್ಥೆ ಹಾಗೂ ಗ್ರಾಮಸ್ಥರ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಕಂಬ ಅಳವಡಿಸಲು ಕ್ರಮ ಕೈಗೊಳ್ಳಲಾಗಿದ್ದು ಅಧಿಕಾರಿಗಳು ಅಂತ ಸಮಸ್ಯೆಗಳು ಇರುವ ಜಾಗದಲ್ಲಿ ವಿದ್ಯುತ್ ಕಂಬ ಅಳವಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಿ ಎಂದು ಸೂಚನೆ ನೀಡಿದರು
ಅಲ್ಲದೆ ಇನ್ನು ಹಲವಾರು ಸಮಸ್ಯೆಗಳನ್ನು ಗ್ರಾಮಸ್ಥರು ಡಾಕ್ಟರ್ ಯತೀಂದ್ರ ಸಿದ್ರಾಮಯ್ಯನವರ ಗಮನಕ್ಕೆ ಸುರುವ ಮೂಲಕ ಎಲ್ಲ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ ಎಂದು ಮನವಿ ಮಾಡಿದರು ನಿಮ್ಮ ಈ ಎಲ್ಲ ಸಮಸ್ಯೆಗಳನ್ನು ನಾನು ಗಮನಿಸಿದ್ದೇನೆ ಈ ಸಮಸ್ಯೆಗಳಿಗೆ ಅಂತ ಹಂತವಾಗಿ ಪರಿಹಾರವನ್ನು ಕಂಡುಕೊಳ್ಳುವ ಮೂಲಕ ಬಗೆಹರಿಸುವುದಾಗಿ ಭರವಸೆ ನೀಡಿದರು
ಈ ಸಂದರ್ಭದಲ್ಲಿ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್ ಸಿ ಬಸವರಾಜು ರಾಜ್ಯ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ರೇವಮ್ಮ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಲಕ್ಷ್ಮಿ ಬಿಪಿ ಮಹದೇವ್ ಕಾಂಗ್ರೆಸ್ ಪಕ್ಷದ ಕಾನೂನು ಘಟಕದ ಎಂ ಸಿ ಹುಂಡಿ ಶಿವಪ್ರಸಾದ್ ಎಮ್ ದಕ್ಷಿಣ ಮೂರ್ತಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕೆ ಎಸ್ ರವಿ ನಂಜಯ್ಯ ಜಿ ಮರಳಿ ರಂಗಸ್ವಾಮಿದೇವನೂರು ಮಹದೇವಮ್ಮ ಬಿದರಗೂಡು ಗ್ರಾಮದ ಮುಖಂಡರಾದ ಕೆವಿ ಮಹದೇವ್ ಮಹೇಶ್ ಸಿದ್ದಪ್ಪ ಚಿಕ್ಕಣ್ಣ ಚಂದ್ರ ಮಂಜು ಅಭಿಷೇಕ್ ಸಿದ್ದರಾಜು ಮಹೇಶ ಮಹದೇವಸ್ವಾಮಿ ರಾಂಪುರ ಗ್ರಾಮದ ಮುದ್ರಾಮು ಅಹಲ್ಯಾ ಅಂದಾನಿ ಗೌಡ ಕಾಳಿಂಗಪ್ಪ ಅರುಣ್ ಪ್ರಭುಸ್ವಾಮಿ ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿ ವಿಜಯಕುಮಾರ ಆಪ್ತ ಸಹಾಯಕರಾದ ಶಿವಸ್ವಾಮಿ ಪ್ರದೀಪ್ ಮಹೇಶ್ ಸಿಟಿ ಕುಮಾರ್
ತಾಲೂಕು ದಂಡಾಧಿಕಾರಿ ಸ್ಮಿತಾ ರಾಮು ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಜರಾಳ್ ರಾಜೇಶ್ ನಿರ್ಮಿತಿ ಕೇಂದ್ರದ ಅಧಿಕಾರಿ ಸಿದ್ದಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರು ಹಾಜರಿದ್ದರು
