ವಿಜಯ ದರ್ಪಣ ನ್ಯೂಸ್……
ಫೆ.28 ಕ್ಕೆ ಮೆಳೇಕೋಟೆಯಲ್ಲಿ ಸಿರಿಧಾನ್ಯ ಹಬ್ಬ ಮತ್ತು ಕಿಸಾನ್ ಮೇಳ- 2026


ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆ.27 :
ಮುಂದಿನ ಪೀಳಿಗೆಗೆ ಸಿರಿಧಾನ್ಯ ಬೆಳೆಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಸಿರಿಧಾನ್ಯ ಬೆಳೆಯುವ ರೈತರನ್ನು ಪ್ರೋತ್ಸಾಹಿಸಲು ಮತ್ತು ರೈತರು ತಯಾರಿಸುವ ಸಿರಿಧಾನ್ಯದ ಉತ್ಪನ್ನಗಳ ಮೌಲ್ಯವರ್ಧಿತ ಪದಾರ್ಥಗಳ ಕುರಿತು ಜನಸಾಮಾನ್ಯರ ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ-2026 ರ ಅಂಗವಾಗಿ “ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಫರ್ಧೆ”ಯನ್ನು ಫೆಬ್ರವರಿ 28 ರಂದು ಬೆಳಿಗ್ಗೆ 11 ಗಂಟೆಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೇಕೋಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದೆ.
ಸಿರಿಧಾನ್ಯ ಹಬ್ಬ ಮತ್ತು ಕಿಸಾನ್ ಮೇಳದ ಉದ್ಘಾಟನೆಯನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ನೆರವೇರಿಸಲಿದ್ದಾರೆ.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ, ರಾಜ್ಯ ವಿದ್ಯುನ್ಮಾನಾಭಿವೃದ್ಧಿ ನಿಗಮ ನಿಯಮಿತ ಹಾಗೂ ಹೊಸಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರು ಉಪಸ್ಥಿತಿ ಇರಲಿದೆ.
ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ರವಿ, ಪುಟ್ಟಣ್ಣ, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ನೆಲಮಂಗಲ ಶಾಸಕ ಎನ್. ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಎನ್.ನಾಗರಾಜು(ಎಂ.ಟಿ.ಬಿ), ರಾಮೋಜಿ ಗೌಡ, ಮತ್ತು ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಪಿ.ಸಿ.ಜಾಫರ್ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಚಂದ್ರಕಾಂತ್, ಉಪಸ್ಥಿತರಿರುತ್ತಾರೆ.
ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷರು ರವಿಕುಮಾರ್. ಆರ್, ದೊಡ್ಡಬಳ್ಳಾಪುರ ತಾಲ್ಲೂಕು ಕೃಷಿಕ ಸಮಾಜ ಅಧ್ಯಕ್ಷ ಮುರುಳಿಧರ. ಆರ್, ದೇವನಹಳ್ಳಿ ತಾಲ್ಲೂಕು ಕೃಷಿಕ ಸಮಾಜ ಅಧ್ಯಕ್ಷ ಚನ್ನೇಗೌಡ.ಕೆ.ಆರ್, ಹೊಸಕೋಟೆ ತಾಲ್ಲೂಕು ಕೃಷಿಕ ಸಮಾಜ ಅಧ್ಯಕ್ಷ ಹರೀಶ್ ಕುಮಾರ್.ವಿ, ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥ ಡಾ. ಹನುಮಂತರಾಯ ವಿಶೇಷ ಆಹ್ವಾನಿತರು.
ಜಿಲ್ಲಾ ಉಪ ಕೃಷಿ ನಿರ್ದೇಶಕ ಪಂಕಜ ಹೆಚ್, ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಬಿ.ಜಿ. ಕಲಾವತಿ , ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಿಗಮ ಮಂಡಳಿಗಳ ಅಧ್ಯಕ್ಷರು ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಎಲ್ಲಾ ತಾಲ್ಲೂಕಿನ ಕೃಷಿಕ ಸಮಾಜದ ಉಪಾಧ್ಯಕ್ಷರು, ಮತ್ತು ನಿರ್ದೇಶಕರು, ಪತ್ರಿಕಾ ಮತ್ತು ಮಾಧ್ಯಮ ಪ್ರತಿನಿಧಿಗಳು, ರೈತ ಸಂಘದ ಅಧ್ಯಕ್ಷರು ಹಾಘೂ ಪದಾಧಿಕಾರಿಗಳು, ಜಿಲ್ಲೆಯ ಎಲ್ಲಾ ಕೃಷಿ ಇಲಾಖೆ ಮತ್ತು ಕೃಷಿ ಸಂಬಂದಿತ ಇಲಾಖೆಗಳ ಅಧಿಕಾರಿಗಳು, ರೈತ ಬಾಂಧವರು ಉಪಸ್ಥಿತರಿರುತ್ತಾರೆ.










