--Ads--

ಪತ್ರಕರ್ತರ ಸಂಘಟನೆಗೆ ಹೊಸ ಸ್ವರೂಪ: ಶಿವಾನಂದ ತಗಡೂರು

On: March 2, 2026 3:19 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಕೆಯುಡಬ್ಲೂಜೆ: ಮುಂಬಯಿ ಘಟಕ ಪದಾಧಿಕಾರಿಗಳ ಪದಗ್ರಹಣ

ಪತ್ರಕರ್ತರ ಸಂಘಟನೆಗೆ ಹೊಸ ಸ್ವರೂಪ: ಶಿವಾನಂದ ತಗಡೂರು

ಮುಂಬಯಿ:
ಪತ್ರಕರ್ತರ ವೃತ್ತಿಯೇ ಸವಾಲಿನದ್ದು. ಅದನ್ನು ಧೈರ್ಯ ಮತ್ತು ನಿಷ್ಠೆಯಿಂದ ಎದುರಿಸುವ ಶಕ್ತಿಯನ್ನು ರೂಢಿಸಿಕೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ ನೀಡಿದರು.

ಮುಂಬಯಿ ಅಂಧೇರಿ ಪೂರ್ವದ ಕ್ಲಬ್ ಹೌಸ್‌ನ ಸಭಾಗೃಹದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮಹಾರಾಷ್ಟ್ರ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪತ್ರಕರ್ತರ ಸಂಘಟನೆ ಕ್ರೀಯಾಶೀಲಗೊಳಿಸಲು ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಸಂಘಟಿತ ಶಕ್ತಿಯ ಮೂಲಕ ಮಾತ್ರ ಪತ್ರಕರ್ತರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎನ್ನುವ ನಂಬಿಕೆ ನಮ್ಮದು. ಹೋರಾಟದ ಮೂಲಕವೇ ಹಲವು ಬೇಡಿಕೆಗಳನ್ನು ಈಡೇರಿಸಿಕೊಳ್ಳಲಾಗಿದ್ದು, ಸರ್ಕಾರವೂ ಅದಕ್ಕೆ ಸ್ಪಂಧಿಸಿದೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗ ಪತ್ರಕರ್ತರು ಒಗ್ಗೂಡಿ ಕೆಲಸ ಮಾಡಬೇಕು. ನಿಮ್ಮ ಜೊತೆಗೆ ಸದಾ ನಾವಿರುತ್ತೇವೆ ಎಂದು ಹೇಳಿದರು.

ಪತ್ರಕರ್ತರ ಹಕ್ಕುಗಳು, ಭದ್ರತೆ, ಕಲ್ಯಾಣ ಯೋಜನೆಗಳಿಗಾಗಿ ಸಂಘ ಬದ್ಧವಾಗಿ ಕೆಲಸ ಮಾಡುತ್ತಿದೆ. ಹೊರ ನಾಡಿಗೂ ಕೆಯುಡಬ್ಲೂೃಜೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿದೆ. ಎಲ್ಲರೂ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.

ನಮ್ಮ ಸೇವೆ ಮೂಲಕ ಎಷ್ಟು ಜನರ ಮನಸ್ಸನ್ನ ಗೆಲುತ್ತೇವೆ ಎನ್ನುವುದು ಮುಖ್ಯ. ಜನರ ಹೃದಯಗಳನ್ನು ತಲುಪುವುದು, ಸಾಧ್ಯವಾದಷ್ಟು ಜನರ ಕಣ್ಣೀರು ಒರೆಸುವುದು ಮುಖ್ಯ ಆ ಮೂಲಕ ನಮ್ಮ ಬದಕನ್ನು ಸಾರ್ಥಕಗೊಳಿಸಿಕೊಳ್ಳೋಣ. ಸಂಘಟನೆಯ ಮೂಲಕ ಪತ್ರಕರ್ತರಲ್ಲಿನ ಸಂಬಂಧಗಳು ಅನ್ನೋನ್ಯವಾಗಿ ಸಾಂಕವಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದರು.

ಡೈರಿ ಬಿಡುಗಡೆ:
ಕೆಯುಡಬ್ಲ್ಯೂಜೆ ಮಹಾರಾಷ್ಟ್ರ-2026ನೇ ಸಾಲಿನ ಡೈರಿ ಬಿಡುಗಡೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಕೆಯುಡಬ್ಲೂಜೆ ಮಹಾರಾಷ್ಟ್ರ ರಾಜ್ಯ ಘಟಕದ ನೂತನ ಪದಾಧಿಕಾರಿಗಳಿಗೆ ಚುನಾವಣಾ ಪ್ರಮಾಣ ಪತ್ರವನ್ನು ನೀಡಲಾಯಿತು.

ಅಧಿಕಾರ ಹಸ್ತಾಂತರ:
ಮಹಾರಾಷ್ಟ್ರ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಡಾ.ಶಿವ ಮೂಡಿಗೆರೆ ಹಾಗೂ ಕೋಶಾಧಿಕಾರಿ ಸದರಾಮ ಎನ್.ಶೆಟ್ಟಿ ಸಂಪದ ಮನೆ ಅವರಿಗೆ ನಿಕಟಪೂರ್ವ ಅಧ್ಯಕ್ಷ ರೋನ್ಸ್ ಬಂಟ್ವಾಳ ಅವರು ಅಧಿಕಾರ ಹಸ್ತಾಂತರಿಸಿದರು.

ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಮಹಾರಾಷ್ಟ್ರ ಘಟಕದ ಚುನಾವಣಾ ಅಧಿಕಾರಿ ಸಿಎಂ ಜಗದೀಶ್ ಬಿ.ಶೆಟ್ಟಿ, ಡಾ.ಜಿ.ಪಿ ಕುಸುಮ, ಕೆಯುಡಬ್ಲ್ಯೂಜೆ ಮಹಾರಾಷ್ಟ್ರ ಘಟಕದ ಸಂಸ್ಥಾಪಕ ಅಧ್ಯಕ್ಷ ರೋನ್ಸ್ ಬಂಟ್ವಾಳ ಮಾತನಾಡಿದರು.

ಮಹಾರಾಷ್ಟ್ರ ಉಪಾಧ್ಯಕ್ಷ ಶ್ಯಾಮ್ ಎಂ.ಹಂದೆ, ಗೋಪಾಲ ಪೂಜಾರಿ ತ್ರಾಸಿ, ಕಾರ್ಯಕಾರಿ ಸಮಿತಿ ಸದಸ್ಯ ಡಾ.ದಿನೇಶ್ ಎನ್.ಶೆಟ್ಟಿ ರೆಂಜಾಳ ತನ್ನ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಸವಿತಾ ಎಸ್.ಶೆಟ್ಟಿ ಪ್ರಾರ್ಥಿಸಿದರು. ಅನಿತಾ ಪೂಜಾರಿ ತಾಕೋಡೆ ನಿರೂಪಿಸಿದರು.

WhatsApp

Join Now

Telegram

Join Now

Instagram

Join Now