--Ads--

ಫಲಾನುಭವಿಗಳಿಗೆ ಆಶ್ರಯ ಮನೆ ಮಂಜೂರಾತಿ ಪತ್ರ ವಿತರಿಸಿದ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ರಾಮಯ್ಯ

On: March 4, 2026 3:44 PM
Follow ಮಾಡಿ
--Ads--

Whatsapp Channel

Join Now

Telegram Group

Join Now

.ವಿಜಯ ದರ್ಪಣ ನ್ಯೂಸ್…..

 ಫಲಾನುಭವಿಗಳಿಗೆ ಆಶ್ರಯ ಮನೆ ಮಂಜೂರಾತಿ ಪತ್ರ ವಿತರಿಸಿದ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ರಾಮಯ್ಯ

ತಾಂಡವಪುರ ಮಾರ್ಚ್ 4 ಮೈಸೂರು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹಾರೋಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಆಶ್ರಯ ಮನೆ ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರಗಳನ್ನು  ವಿಧಾನ ಪರಿಷತ್ ಸದಸ್ಯ ಡಾ. ಯತಿಂದ್ರ ಸಿದ್ರಾಮಯ್ಯನವರು ವಿತರಿಸಿದರು

ತಾಲೂಕು ಆಡಳಿತ ಗ್ರಾಮ ಪಂಚಾಯಿತಿ ವತಿಯಿಂದ ಏರ್ಪಡಿಸಿದ ಜನಸಂಪರ್ಕ ಸಭೆಯಲ್ಲಿ ಗ್ರಾಮಸ್ಥರು ಇದೆ ವೇಳೆ ನಮಗೆ ನಿವೇಶನದ ಸಮಸ್ಯೆ ಇದ್ದು ನಾವು ತುಂಬಾ ಬಡವರಾಗಿದ್ದು ನಿವೇಶನ ಪಡೆದು ಮನೆ ನಿರ್ಮಿಸಿಕೊಳ್ಳಲು ಸಾಧ್ಯವಿಲ್ಲ ಆದ್ದರಿಂದ ತಾವು ನಮಗೆ ಎಲ್ಲಿಯಾದರೂ ಸರ್ಕಾರಿ ಭೂಮಿಯನ್ನು ಗುರುತಿಸಿ ನಿಮಗೆ ನಿವೇಶನವನ್ನು ಮುಂಜೂರು ಮಾಡಿಕೊಡಬೇಕೆಂದು ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷ ಡಾ ಯತೀಂದ್ರ ಸಿದ್ರಾಮಯ್ಯನವರಲ್ಲಿ ಮನವಿ ಮಾಡಿದರು

ಮನಮಿ ಸ್ವೀಕರಿಸಿ ಮಾತನಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ ರವರು ಸ್ಥಳದಲ್ಲಿ ಇದ್ದ ಕಂದಾಯ ಇಲಾಖೆ ಅಧಿಕಾರಿಗಳನ್ನು ಕರೆದು ಸುಮಾರು 80 ರಿಂದ 90ಕ್ಕೂ ಹೆಚ್ಚು ನಿವೇಶನ ಇಲ್ಲದ ಕಡುಬಡವರು ನಮಗೆ ನಿವೇಶನ ದೊರಕಿಸಿಕೊಡಿ ಎಂದು ಮನವಿ ಮಾಡಿದ್ದಾರೆ ಅವರಿಗೆ ಈ ಭಾಗದಲ್ಲಿ ಎಲ್ಲಿಯಾದರೂ ಸರ್ಕಾರಿ ಭೂಮಿ ಇದ್ದರೆ ಅದನ್ನು ಗುರುತಿಸಿ ನಿವೇಶನ ನೀಡಲು ಕ್ರಮ ಕೈಗೊಳ್ಳಿ ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ಹಾಗೂ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಸೂಚನೆ ನೀಡಿದರು

ಅಲ್ಲದೆ ಈ ಭಾಗದಲ್ಲಿ ಸಾರಿಗೆ ಸಂಸ್ಥೆ ವಿದ್ಯುತ್ ಸಮಸ್ಯೆ ಕುಡಿಯುವ ನೀರಿನ ಸಮಸ್ಯೆ ರಸ್ತೆ ಸ್ಮಶಾನ ಅಭಿವೃದ್ಧಿ ಸೇರಿದಂತೆ ಇನ್ನೂ ಹಲವಾರು ಸಮಸ್ಯೆಗಳನ್ನ ನನ್ನ ಗಮನಕ್ಕೆ ತಂದಿದ್ದೀರಿ ಆ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಕೂಡಲೇ ಕ್ರಮ ಕೈಗೊಳ್ಳುತ್ತದೆ ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು

ಈ ಸಂದರ್ಭದಲ್ಲಿ ಬಗರ್ ಹುಕುಂ ಸಮಿತಿಯ ಸದಸ್ಯ ಪ್ರಸಾದ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಮುದ್ದೇಗೌಡ ಉಪಾಧ್ಯಕ್ಷ ರವಿ ಮಲೆಯ ಮಾದೇಶ್ವರ ಬೆಟ್ಟದ ನಿರ್ದೇಶಕ ಗಂಗ ತಿಮ್ಮಯ್ಯ ನಾಯಕ ಸಮಾಜದ ಮುಖಂಡ ನಾಗರಾಜು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೇ ಮಂಜುಳಾ ಮಂಜುನಾಥ್ ಎಂ ಟಿ ರವಿಕುಮಾರ್ ಮುಖಂಡರಾದ ಅವಿ ರಮೇಶ್ ರವಿ ಗೌಡ ಗ್ರಾಮ ಪಂಚಾಯತ್ ಸದಸ್ಯರಾದ ಕುಮಾರ್ ಪುಸ್ವ ತಾಲೂಕು ದಂಡಾಧಿಕಾರಿ ಮಹೇಶ್ ಕುಮಾರ್ ಇಒ ಕೃಷ್ಣ ಆರ್ ಐ ಯೋಗೇಂದ್ರ ಕುಮಾರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ದೇವರಾಜ್ ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿ, ವಿಜಯಕುಮಾರ ಆಪ್ತ ಸಹಾಯಕರಾದ ಶಿವ ಸ್ವಾಮಿ ಪ್ರದೀಪ್ ಮಹೇಶ ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯದರ್ಶಿ ಸಕಳ್ಳಿ ಬಸವರಾಜು ಕಾನೂನು ಘಟಕದ ಎಂ ಸಿ ಹುಂಡಿ ಶಿವಪ್ರಸಾದ್ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಮುಯಿನ್ ಖಾನ್ ಮರಸೆ ಸಿದ್ದನಾಯ್ಕ ಕೆ ಎಸ ಹುಂಡಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ನಂಜಯ್ಯ ಕೆಎಸ್ ರವಿ ಗ್ಯಾರಂಟಿ ಯೋಜನೆಗಳ ಸಮಿತಿಯ ರವಿ ಮೆಲ್ಲಳ್ಳಿ ಸಿದ್ದಯ್ಯ ಚಿಕ್ಕಳ್ಳಿ ವೆಂಕಟೇಶ್ ದೇವರಾಜು ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಕಾಂಗ್ರೆಸ್ ಪಕ್ಷದ ಮುಖಂಡರು ಗ್ರಾಮದ ಸಾರ್ವಜನಿಕರು ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ,  ಸಮಸ್ಯೆಗಳಿಗೆ ಸ್ಪಂದಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಡಾ. ಯತೀಂದ್ರ ಸಿದ್ದರಾಮಯ್ಯ ಶಾಸಕ ಕೆ ವೆಂಕಟೇಶ್ ರವರಿಂದ ಭೂಮಿ ಪೂಜೆ

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 5 ತಾಲ್ಲೂಕುಗಳು ತೀವ್ರ ಬರಪೀಡಿತ ; ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸಿ ಡಿಸಿಎಂ ಡಾ.ಜಿ. ಪರಮೇಶ್ವರ್ 

ಜಿಲ್ಲೆಯ ನಂಜನಗೂಡು ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಡಾ .ಜಿ. ಪರಮೇಶ್ವರ್  ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ

ವರುಣ ವಿಧಾನಸಭಾ ಕ್ಷೇತ್ರ ನಂಜನಗೂಡು ವಿಧಾನಸಭಾ ಕ್ಷೇತ್ರದ  ಕಾರ್ಯಕರ್ತರಿಂದ ಶ್ರೀಕಂಠೇಶ್ವರ ಸ್ವಾಮೀಗೆ ಪೂಜಿ ಸಲ್ಲಿಸಿ ಸಿಹಿ ವಿತರಿಸಿ ಸಂಸದ ಸುನಿಲ್ ಬೋಸ್ ಹುಟ್ಟುಹಬ್ಬ ಆಚರಣೆ

ನಗರಲೆ ಹಾಲು ಉತ್ಪಾದಕರ ಸಂಘದ 2025 -26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯಸಭೆ