--Ads--

ವಸ್ತ್ರ ಚಿತ್ರಕಲಾ ಉದ್ಯಮಿ ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

On: June 3, 2023 12:34 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಣಣ ನ್ಯೂಸ್ . ಜೂನ್ 03 .                    ದೇವನಹಳ್ಳಿ , ಬೆಂಗಳೂರು ಗ್ರಾಮಾಂತರ ಜಿಲ್ಲೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ವಸ್ತ್ರ ಚಿತ್ರಕಲಾ ಉದ್ಯಮಿ(ಎಂಬ್ರಾಯಡರಿ) ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನ ದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಜೂನ್‌ 12 ಕೊನೆಯ ದಿನವಾಗಿದೆ.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.


ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‌ ಸಂಖ್ಯೆ: 9113880324, 9740982585, 8884554510, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ಜೆ.ಆನಂದ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now