--Ads--

ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ಆಹಾರ ಕಿಟ್‌ ವಿತರಿಸಿದ ಸಂಸದ ಸುನೀಲ್ ಬೋಸ್ 

On: March 6, 2026 4:24 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ಆಹಾರ ಕಿಟ್‌ ವಿತರಿಸಿದ ಸಂಸದ ಸುನೀಲ್ ಬೋಸ್ 

ತಾಂಡವಪುರ ಮಾರ್ಚ್ 6 ಚಾಮರಾಜನಗರ ಲೋಕಸಭಾ ವ್ಯಾಪ್ತಿಗೆ ಬರುವ ಟಿ ನರಸೀಪರ ಕಾಂಗ್ರೆಸ್ ಕಚೇರಿಯಲ್ಲಿ ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಅಗತ್ಯವಿರುವ ಮುಸ್ಲಿಂ ಸಮುದಾಯದ ಕುಟುಂಬಗಳಿಗೆ ಚಾಮರಾಜನಗರ ಲೋಕಸಭಾ ಸದಸ್ಯ ಸುನಿಲ್ ಬೋಸ್ ರವರು 100 ಆಹಾರ ಕಿಟ್ಟಿ ಗಳನ್ನು ವಿತರಿಸಿ ಶುಭಾಶಯ ವಿನಿಮಯ ಮಾಡಿಕೊಂಡರು.

ಈ ಸರಳ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಅಕ್ಕಿ, ಸಕ್ಕರೆ, ಎಣ್ಣೆ ಸೇರಿದಂತೆ ದಿನನಿತ್ಯ ಬಳಕೆಗೆ ಅಗತ್ಯವಿರುವ ಆಹಾರ ಪದಾರ್ಥಗಳನ್ನು ಒಳಗೊಂಡ ಕಿಟ್‌ಗಳನ್ನು ವಿತರಿಸಲಾಯಿತು.

ಬಳಿಕ ಸಂಸದ ಸುನಿಲ್ ಬೋಸ್ ಮಾತನಾಡಿ, ರಂಜಾನ್ ಹಬ್ಬವು ಸಹೋದರತ್ವ, ಮಾನವೀಯತೆ ಹಾಗೂ ಪರಸ್ಪರ ಸಹಕಾರದ ಸಂದೇಶ ಸಾರುವ ಪವಿತ್ರ ಹಬ್ಬವಾಗಿದೆ. ಹಬ್ಬದ ಸಂದರ್ಭದಲ್ಲಿ ಎಲ್ಲರೂ ಸಂತೋಷದಿಂದ ರಂಜಾನ್ ಆಚರಿಸಬೇಕು ಎಂದು ತಿಳಿಸಿದರು..

ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಸ್ಥಳೀಯರು ಸಂಸದರಿಗೆ ಅಭಿನಂದನೆ ಸಲ್ಲಿಸಿ ಕೃತಜ್ಞತೆ ವ್ಯಕ್ತಪಡಿಸಿದರು. ಅಗತ್ಯವಿರುವ ಕುಟುಂಬಗಳಿಗೆ ನೆರವಾಗುವ ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಒಗ್ಗಟ್ಟು ಹಾಗೂ ಮಾನವೀಯತೆಯನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹ್ಯಾಕನೂರು ಉಮೇಶ್, ಸಾಮಾಜಿಕ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಕುಕ್ಕೂರು ಗಣೇಶ್, ಮಾಜಿ ಸದಸ್ಯ ರಾಮಲಿಂಗಯ್ಯ, ಪುರಸಭೆ ಮಾಜಿ ಸದಸ್ಯ ಸಬಿಲ್ ಖಾನ್, ರಾಘವೇಂದ್ರ, ಕೆಪಿಸಿಸಿ ಸದಸ್ಯ ಸುಂದರ ನಾಯಕ, ಸಂಸದರ ಆಪ್ತ ಸಹಾಯಕ ಬಿ.ಬಸವರಾಜು, ಕಲಿಯೂರು ಶಿವಣ್ಣ, ಸೇರಿದಂತೆ ಮತ್ತಿತರರು ಹಾಜರಿದ್ದರು.

ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಬಡವರ ಪರವಾಗಿದೆ: ಬಿ ಎಂ ರಾಮ

ತಾಂಡವಪುರ ಮಾರ್ಚ್ 6 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ದಾಖಲೆಯ ೧೭ನೇ ಬಜೆಟ್ ಬಡವರ ಪರವಾಗಿದೆ. ಎಂದು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿ ಎಂ ರಾಮು ರವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಅವರು ಪತ್ರಿಕಾ ಹೇಳಿಕೆ ಒಂದನ್ನು ನೀಡಿ ಈ ಮೂಲಕ ಬಡವರ ಪರ ತಮ್ಮ ಕಾಳಜಿಯನ್ನು ಮುಂದುವರಿಸಿದ್ದಾರೆ. ಮೈಸೂರು ಭಾಗಕ್ಕಂತೂ ಈಬಾರಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ಜಯದೇವ ಆಸ್ಪತ್ರೆ ಉನ್ನತೀಕರಣಕ್ಕೆ ೧೮೦ ಕೋಟಿ ಅನುದಾನ, ಶಾಲೆಗಳ‌ ಅಭಿವೃದ್ಧಿ, ಶೌಚಾಲಯ ನಿರ್ಮಾಣ, ಸಿಲ್ಕ್ ಪಾರ್ಕ್, ಇ ಕೋರ್ಟ್, ಪ್ರವಾಸೋದ್ಯಮಕ್ಕೆ ಪೂರಕವಾದ ಕೊಡುಗೆಗಳನ್ನು ನೀಡಿದ್ದಾರೆ. ಇದರ ಜೊತೆಗೆ ಮೈಸೂರು ಭಾಗದ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ಅನುದಾನ ಒದಗಿಸಿದ್ದಾರೆ. ಒಟ್ಟಾರೆ ಇದು ರಾಜ್ಯದ, ಬಡವರ ಅಭಿವೃದ್ಧಿಗೆ ಪೂರಕವಾದ ದೂರದೃಷ್ಟಿಯ ಸುಸ್ಥಿರ ಬಜೆಟ್ ಎಂದು ಹೇಳಿದರು .

WhatsApp

Join Now

Telegram

Join Now

Instagram

Join Now