ವಿಜಯ ದರ್ಪಣ ನ್ಯೂಸ್….
ಭಕ್ತರ ಜಯ ಘೋಷಣೆಯೊಂದಿಗೆ ನಡೆದ ಶ್ರೀ ವೀರಾಂಜನೇಯಸ್ವಾಮಿ ರಥೋತ್ಸವ, ಸೀತಾರಾಮ ಕಲ್ಯಾಣೋತ್ಸವ

ಶಿಡ್ಲಘಟ್ಟ : ತಾಲ್ಲೂಕಿನ ಮುತ್ತೂರು ಗ್ರಾಮದ ಶ್ರೀವೀರಾಂಜನೇಯಸ್ವಾಮಿ ರಥೋತ್ಸವ ಪ್ರಯುಕ್ತ ನಡೆದ ಸೀತಾರಾಮ ಕಲ್ಯಾಣೋತ್ಸವವು ಸಾವಿರಾರು ಭಕ್ತರ ಜಯ ಘೋಷಣೆಯೊಂದಿಗೆ ನಡೆಯಿತು.
ಕಲ್ಯಾಣೋತ್ಸವಕ್ಕೆ ದೇವಾಲಯದ ಅರ್ಚಕರ ವೃಂದ ಸಕಲ ಸಿದ್ಧತೆ ಮಾಡಿಕೊಂಡಿತ್ತು ,ಬೆಳಿಗ್ಗೆಯಿಂದಲೇ ಶ್ರೀವೀರಾಂಜನೇಯಸ್ವಾಮಿ ದೇವಾಲಯದ ಪ್ರಾಂಗಣದಲ್ಲಿ ಕಲ್ಯಾಣೋತ್ಸವಕ್ಕಾಗಿ ನಿರ್ಮಾಣ ಮಾಡಲಾಗಿದ್ದ ವೇದಿಕೆಯನ್ನು ಅರ್ಚಕರು ಹೂವಿನಿಂದ ಅಲಂಕಾರ ಮಾಡಿ ಹಸಿರು ತೋರಣವನ್ನು ಕಟ್ಟಿದ್ದರು ,ಧಾರ್ಮಿಕ ಸಂಪ್ರದಾಯದಂತೆ ಸಂಜೆಯಿಂದ ಮುಖ್ಯ ಪೂಜಾ ಕೈಂಕರ್ಯಗಳು ನಡೆದವು.
ಅರ್ಚಕರ ಮಾರ್ಗದರ್ಶನದಂತೆ ವರ ಮತ್ತು ವಧುವಿನ ಮೂರ್ತಿಯನ್ನು ಕಲ್ಯಾಣ ಮಂಟಪಕ್ಕೆ ತರಲಾಯಿತು. ಮಾಂಗಲ್ಯಧಾರಣಿ ಮಾಡಲಾಯಿತು, ಕಲ್ಯಾಣೋತ್ಸವದಲ್ಲಿ ಕಂಕಣ ಭಾಗ್ಯ ಸಿಗದ ಬಹುತೇಕ ಮಂದಿ ಯುವಕ, ಯುವತಿಯರು ಭಾಗವಹಿಸಿದ್ದು ವಿಶೇಷವಾಗಿತ್ತು ಭಕ್ತರಿಗೆ ಶ್ರೀವೀರಾಂಜನೇಯಸ್ವಾಮಿ ಗೆಳೆಯರ ಬಳಗ ಮತ್ತು ಮುತ್ತೂರು ಗ್ರಾಮಸ್ಥರಿಂದ ಅನ್ನದಾಸೋಹ ಏರ್ಪಡಿಸಲಾಗಿತ್ತು.
ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾ.10:
ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Enterprenuership (EP) ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲು ಸಹ ಉದ್ದೇಶಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 2026 ರ ಮಾರ್ಚ್. 13 ರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ನಂ.09, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಕಛೇರಿ ಸಮಯದಲ್ಲಿ ಅರ್ಜಿಗಳನ್ನು ಸಲ್ಲಿಸಲು ಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.









