--Ads--

ರಾಜಕೀಯವಾಗಿ ಸೋಲು ಗೆಲುವು ಕಂಡಿದ್ದರು ಜನಸೇವೆಯನ್ನು ಮರೆಯಲಾರೆ : ಸಿ ಎಂ ಸಿದ್ದರಾಮಯ್ಯ

On: March 13, 2026 2:17 PM
Follow ಮಾಡಿ
--Ads--

Whatsapp Channel

Join Now

Telegram Group

Join Now
ವಿಜಯ ದರ್ಪಣ ನ್ಯೂಸ್….

ರಾಜಕೀಯವಾಗಿ ಸೋಲು ಗೆಲುವು ಕಂಡಿದ್ದರು ಜನಸೇವೆಯನ್ನು ಮರೆಯಲಾರೆ : ಸಿ ಎಂ ಸಿದ್ದರಾಮಯ್ಯ

ತಾಂಡವಪುರ ಮಾರ್ಚ್ 13 ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲು ಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ಮೈಸೂರು ಜಿಲ್ಲೆ, ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ವರಕೋಡು ಗಡಿ ಗುರುಮಠ ವರಕೂಡು ಗ್ರಾಮದ ಬಳಿ ಆಯೋಜಿಸಲಾಗಿದ್ದ ಇತಿಹಾಸ ಪ್ರಸಿದ್ಧಿ ಉಳ್ಳ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಕುಂಭ ಕಳಸ ಪುನರ್ ಪ್ರತಿಷ್ಠಾಪನೆ ಕುಂಭಾಭಿಷೇಕ ಹಾಗೂ ಮಹಾದ್ವಾರ ಪೂಜಾ ಮಹೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ ಮಾತನಾಡುತ್ತಾ ಭಕ್ತಿ ಪರಿಶುದ್ಧವಾಗಿರಬೇಕಲ್ಲದೇ, ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ. ದೇವರು ಸರ್ವಾಂತರ್ಯಾಮಿಯಾಗಿದ್ದಾನೆ.

ಎಲ್ಲಾ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ. ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಪೂಜಾ ಮಹೋತ್ಸವಗಳು, ಜಾತ್ರೆಗಳಲ್ಲಿ ಜನರು ಸಂತೋಷದಿಂದ ಭಾಗವಹಿಸಿದ್ದಾರೆ. ಶ್ರೀ ಬೀರೇಶ್ವರಸ್ವಾಮಿ , ನಾಡಿನ ಸಮಸ್ತ ಜನತೆಗೆ ಮಂಗಳವನ್ನುಂಟು ಮಾಡಲಿ ಚೆನ್ನಾಗಿ ಮಳೆ ಬೆಳೆಯಾಗಲಿಎಂದು ಬೀರೇಶ್ವರನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.

1978 ರಲ್ಲಿ ಈ ಪ್ರದೇಶದಿಂದಲೇ ನನ್ನ ರಾಜಕೀಯ ಜೀವನ ಪ್ರಾರಂಭವಾಗಿದ್ದು, ಅಪಾರ ಜನಬೆಂಬಲ ನನಗೆ ದೊರೆತಿದೆ. ಅಲ್ಲಿಂದ ಇಲ್ಲಿಯವರೆಗೆ ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದ ಜನರು ನನ್ನನ್ನು ಬೆಂಬಲಿಸುತ್ತಲೇ ಬಂದಿದ್ದಾರೆ. ಇಲ್ಲಿನ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ, ಆರ್ಥಿಕ ಸಚಿವನಾಗಿ 17 ಬಾರಿ ಆಯವ್ಯಯಗಳನ್ನು ಮಂಡಿಸುವ ಅವಕಾಶ ದೊರೆತಿದೆ. 13 ಬಾರಿ ಚುನಾವಣೆಗಳನ್ನು ಎದುರಿಸಿದ್ದು, ನಾಲ್ಕು ಬಾರಿ ಸೋತ ಸಂದರ್ಭದಲ್ಲಿಯೂ , ಈ ಭಾಗದ ಜನರು ನನ್ನನ್ನೇ ಬೆಂಬಲಿಸಿದ್ದೇನೆ.

ನನ್ನ ರಾಜಕೀಯ ಬದುಕಿಗೆ ಇಲ್ಲಿನ ಜನರ ಕೊಡುಗೆ ಅನನ್ಯವಾಗಿದೆ ಎಂದು ಹೇಳಿದ ಮುಖ್ಯಮಂತ್ರಿಗಳು
ನನ್ನ ಊರಿನ ಗುರುಗಳಾದ ರಾಜಪ್ಪನವರು ಇಲ್ಲದಿದ್ದರೆ ನಾನು ಇವತ್ತು ವಕೀಲನು ಆಗುತ್ತಿರಲಿಲ್ಲ, ರಾಜಕಾರಣಿಯು ಆಗುತಿರಲಿಲ್ಲ ,ಶಾಸಕನು ಆಗುತ್ತಿಲ್ಲ ಈ ರಾಜ್ಯದ ಮುಖ್ಯಮಂತ್ರಿ ಕೂಡ ಆಗುತ್ತಿರಲಿಲ್ಲ ಅವರ ಮಾರ್ಗದರ್ಶನದಲ್ಲಿ ಶಿಕ್ಷಣ ಪಡೆದು, ವಕೀಲನಾಗಿ, ರಾಜಕಾರಣಿಯಾಗಿ ಜನರ ಸೇವೆ ಮಾಡುವ ಅವಕಾಶ ದೊರೆತಿದೆ. ನನ್ನ ರಾಜಕೀಯ ಜೀವನ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ. ನನ್ನ ಕೊನೆ ಉಸಿರುವವರೆಗೆ ಜನ ಸೇವೆಯಲ್ಲಿ ಸದಾ ತೊಡಗಿರುತ್ತೇನೆ.

ಯತೀಂದ್ರ ಸಿದ್ದರಾಮಯ್ಯ ಈ ಕ್ಷೇತ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತಿದ್ದು, ಜನರು ಅವರನ್ನು ಬೆಂಬಲಿಸಬೇಕು ಎಂದರು.ರಾಜ್ಯದ ವಿವಿಧ ಜಾತಿ, ಧರ್ಮ, ವರ್ಗಗಳ ಬಡಜನರಿಗೆ ಅನೇಕ ಭಾಗ್ಯಗಳು ಹಾಗೂ ಗ್ಯಾರಂಟಿ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದ್ದೇನೆ ಎಂದು ಹಿಂದಿನ ತಮ್ಮ ಜೀವನದ ನೆನಪುಗಳನ್ನು ಮಾಡುವ ಮೂಲಕ ನಾನು ಸದಾ ನಿಮ್ಮ ಜೊತೆಯಲ್ಲೇ ಇರುತ್ತೇನೆ ಅದೇ ರೀತಿ ಇನ್ನು ಮುಂದಿನ ಕೂಡ ಈ ಕ್ಷೇತ್ರದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿರುವ  ಯತೀಂದ್ರ ಸಿದ್ದರಾಮಯ್ಯ ಅವರನ್ನು ಕೂಡ ನೋಡಿಕೊಳ್ಳಿ ಎಂದು ಜನತೆಯಲ್ಲಿ ಮನವಿ ಮಾಡಿದರು

ಇದೇ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ತೆರೆದ ವಾಹನದ ಮೂಲಕ ಹೂಮಳೆ ಸುರಿಯೋ ಮೂಲಕ ಅದ್ದೂರಿಯಾಗಿ ಸ್ವಾಗತಿಸಿ ಗೌರವಿಸಿದರು ಅಲ್ಲದೆ ವೇದಿಕೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಿ ಬೆಳ್ಳಿ ಗದೆ ನೀಡಿ ಅಭಿನಯಿಸಿದರು

ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಕನಕ ಗುರು ಪೀಠ ಮೈಸೂರು ಸಾಕಾಮಠದ ಶ್ರೀ ಶಿವಾನಂದಪುರಿ ಮಹಾ ಸ್ವಾಮೀಜಿ ಅವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ ಯತೀಂದ್ರ ಸಿದ್ದರಾಮಯ್ಯ ಮಾಜಿ ಶಾಸಕ ಎಂ ಕೆ ಸೋಮಶೇಖರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾಕ್ಟರ್ ಬಿ ಜೆ ವಿಜಯ್ ಕುಮಾರ್ ಮುಖ್ಯಮಂತ್ರಿ ವಿಶೇಷ ಅಧಿಕಾರಗಳಾದ ವಿಜಯಕುಮಾರ್ ಎಂ ರಾಮಯ್ಯ ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಮುದ್ದು ರಾಮೇಗೌಡ ಎಂ ಟಿ ರವಿಕುಮಾರ್ ಮಂಜುಳಾ ಮಂಜುನಾಥ್ ನಾಡನಹಳ್ಳಿ ರವಿ ವಕೀಲರಾದ ಎಂ ಸಿ ಹುಂಡಿ ಶಿವಪ್ರಸಾದ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಣ್ಣ ಮುಖಂಡರಾದ ಬಸವರಾಜು ಉಮೇಶ್ ಸೇರಿದಂತೆ ವರಕೋಡು ಗಡಿಭಾಗದ ಯಜಮಾನರುಗಳು ದೇವಾಲಯದ ಸಮಿತಿಯ ಪದಾಧಿಕಾರಿಗಳು ಮುಖಂಡರು ಸೇರಿದಂತೆ ಮುಂತಾದವರು ಸಮಾರಂಭದಲ್ಲಿ ಭಾಗಿಯಾಗಿದ್ದು ಬಂದಂತ ಲಕ್ಷಾದಿ ಭಕ್ತಾದಿಗಳಿಗೆ ಇದೇ ಸಂದರ್ಭದಲ್ಲಿ ದೇವಾಲಯದ ಮುಂಭಾಗ ಅನ್ನ ಸಂತರ್ಪಣ ಪ್ರಸಾದ ವಿನಿಯೋಗ ಹಮ್ಮಿಕೊಳ್ಳಲಾಗಿತ್ತು

ನಿಧನ ವಾರ್ತೆ

ತಾಂಡವಪುರ ಮಾರ್ಚ್ 13 ಮೈಸೂರ್ ತಾಲೂಕು ಬಿಜಿ ಹುಂಡಿ ( ಕಡಕೊಳ )ಗ್ರಾಮದ ಹಿರಿಯ ಯಜಮಾನರಾದ ಶ್ರೀ ಕಾಳೇಗೌಡರು ವಯಸ್ಸು 80 ಇಂದು ಬೆಳಗಿನ ಜಾವ ನಿಧನ ಹೊಂದಿದರು ಮೃತರು ಪತ್ನಿ ಇಬ್ಬರು ಪುತ್ರರು ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದು ಮೃತರ ಅಂತ್ಯಕ್ರಿಯೆಯನ್ನು ಗ್ರಾಮದ ಬೀರೇಶ್ವರ ದೇವಾಲಯ ಬಳಿ ಇರುವ ರುದ್ರ ಭೂಮಿಯಲ್ಲಿ ನೆರವೇರಿಸಲಾಯಿತು

WhatsApp

Join Now

Telegram

Join Now

Instagram

Join Now