--Ads--

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ: ಜಿಲ್ಲಾಧಿಕಾರಿ ಡಾ.ಕೆಎನ್ ಅನುರಾಧ 

On: March 16, 2026 2:27 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ: ಜಿಲ್ಲಾಧಿಕಾರಿ ಡಾ.ಕೆಎನ್ ಅನುರಾಧ 

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾ16:

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ‌.

ಪ್ರಸ್ತುತ ಕೊಲ್ಲಿ ರಾಷ್ಟ್ರದ ಯುದ್ದದ ಪರಿಣಾಮವಾಗಿ ಉದ್ಬವಿಸಿರುವ ಎಲ್ಪಿಜಿ ಸರಬರಾಜು ಬಗೆಗಿನ ಗೊಂದಲ ಬಗೆಹರಿಸಲು ರಾಜ್ಯ ಸರ್ಕಾರವು ತೈಲ ಕಂಪನಿ ಅಧಿಕಾರಿಗಳೊಂದಿಗೆ IOC/BPC/HPC ಸಭೆ ನಡೆಸಿ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಲಭ್ಯತೆ ಬಗ್ಗೆ ಮಾಹಿತಿ ಪಡೆದು ಸಮಸ್ಯೆ ಇಲ್ಲದ ಬಗ್ಗೆ ತೈಲ ಕಂಪನಿಗಳಿಂದ ಖಾತ್ರಿ ಪಡಿಸಿಕೊಂಡಿದೆ.

ಆಯಿಲ್ ಕಂಪನಿಗಳಿಂದ ಜಿಲ್ಲೆಗೆ ಅಡುಗೆ ಅನಿಲ ಸರಬರಾಜು ಪರಿಸ್ಥಿತಿಗನುಗುಣವಾಗಿ ಅಡುಗೆ ಅನಿಲ ಬಳಕೆ ಮಿತಿಗೊಳಿಸುವ ಬಗ್ಗೆ ಸಾರ್ವಜನಿಕರು, ಗ್ರಾಹಕರು,ಸಂಘ ಸಂಸ್ಥೆಗಳು ಇರತರಿಗೆ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಈ ಮೂಲಕ ಸಾರ್ವಜನಿಕರಿಗೆ ತಿಳಿಯಪಡಿಸುವುದೆನೆಂದರೆ ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸರಬರಾಜು ಸಮರ್ಪಕವಾಗಿ ನಡೆಯುತ್ತಿದೆ. ಗೃಹ ಬಳಕೆ ಸಿಲಿಂಡರ್ರನ್ನು 25 ದಿನಗಳ ಬಳಿಕವೇ ಬುಕ್ ಮಾಡಲು ಅವಕಾಶಕಲ್ಪಿಸಲಾಗಿದೆ. ಆದ್ದರಿಂದ ಗ್ರಾಹಕರು ಅಡುಗೆ ಅನಿಲವನ್ನು ಮಿತಬಳಕೆ ಮಾಡುವಂತೆ ಡಿಸಿ ಕೋರಿದ್ದಾರೆ.

ಗ್ಯಾಸ್ ಸರಬರಾಜುನಲ್ಲಿ ಏನಾದರೂ ಸಮಸ್ಯೆ ಉಂಟಾದಲ್ಲಿ ಆಹಾರ ನೀರಿಕ್ಷಕರು/ಶಿರಸ್ತೇದಾರ್ ಅವರ ದೂರವಾಣಿ ಸಂಖ್ಯೆಗಳು ದೇವನಹಳ್ಳಿ-9449269001, ದೊಡ್ಡಬಳ್ಳಾಪುರ-9483482766, ನೆಲಮಂಗಲ-9036434552, ಹೊಸಕೋಟೆ-9902805563 ಸಂಪರ್ಕಿಸಬಹುದಾಗಿದೆ.

ಸಮರ್ಪಕ ಪೂರೈಕೆಗಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಲ್ಪಿಜಿ ವಿತರಕರೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಗೃಹಬಳಕೆ ಗ್ಯಾಸ್ ಸಿಲಿಂಡರ್ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ಧೃಡಪಡಿಸಿ ಎಂದಿನಂತೆ ಎಲ್ಪಿಜಿ ವಿತರಕರು ಗ್ರಾಹಕರಿಗೆ ಮನೆಬಾಗಿಲಿಗೆ ಸರಬರಾಜು ಮಾಡುತ್ತಾರೆ.

ಅಲ್ಲದೇ ಜಿಲ್ಲೆಯ ಎಲ್ಲಾ ಎಲ್ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿರುತ್ತದೆ. ಆದುದರಿಂದ ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ, ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಗ್ಯಾಸ್ ಸಿಲಿಂಡರ್ ಪಡೆಯುವಂತೆ ವಿನಂತಿಸಲಾಗಿದೆ.

ಯಾವುದೇ ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ ಅಥವಾ ಅಕ್ರಮ ಮಾರಾಟ ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ ಹಾಗೂ 1955 Petroleum Products(Maintenace of Production, Storage and Supply) Order 1999 and LPG Control Order 2000  2000 ಸಂಬAಧಿತ ನಿಯಂತ್ರಣ ಆದೇಶಗಳಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೊಬೈಲ್ ಕ್ಯಾಂಟೀನ್ ಸಹಾಯಧನ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾ.16:

ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ
ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 30 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Enterprenuership (EP) ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ನೀಡಲಾಗುತ್ತದೆ.

ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲು ಸಹ ಉದ್ದೇಶಿಸಲಾಗಿದೆ.

ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ನಂ.09, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಕಛೇರಿ ಸಮಯದಲ್ಲಿ ಮಾರ್ಚ್ 30 ರೊಳಗೆ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now