--Ads--

ಎಸ್.ಎಸ್.ಎಲ್.ಸಿ ಪರೀಕ್ಷೆ -01: ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

On: March 18, 2026 2:07 AM
Follow ಮಾಡಿ
--Ads--

Whatsapp Channel

Join Now

Telegram Group

Join Now
ವಿಜಯ ದರ್ಪಣ ನ್ಯೂಸ್…

ಎಸ್.ಎಸ್.ಎಲ್.ಸಿ ಪರೀಕ್ಷೆ -01: ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಮಾ.17:

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ 01:45 ಗಂಟೆಯ ವರೆಗೆ ನಡೆಯಲಿದ್ದು ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-01 ಕ್ಕೆ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರಗಳು ದೇವನಹಳ್ಳಿ ತಾಲ್ಲೂಕಿನಲ್ಲಿ 13, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 14, ಹೊಸಕೋಟೆ ತಾಲ್ಲೂಕಿನಲ್ಲಿ 12, ನೆಲಮಂಗಲ ತಾಲ್ಲೂಕಿನಲ್ಲಿ 13 ಸೇರಿ ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುತ್ತಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಕ್ಕೆ ನೋಂದಣಿ ವಿವರ ನೋಡುವುದಾದರೆ ಗಂಡು ಮಕ್ಕಳ ಸಂಖ್ಯೆ 7070, ಹೆಣ್ಣು ಮಕ್ಕಳ ಸಂಖ್ಯೆ 7244 ಸೇರಿ ಒಟ್ಟು 14,314 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ.

ಅದರಲ್ಲಿ ಮೊದಲ(ಪ್ರಥಮ) ಬಾರಿ ಪರೀಕ್ಷೆ ಬರೆಯುವವರ ಸಂಖ್ಯೆ 13,418, ಪುನರಾವರ್ತಿತ ಅಭ್ಯರ್ಥಿಗಳು 896 ಮಂದಿ ಪರೀಕ್ಷೆಗೆ ಹಾಜರಾಗಲಿದ್ದಾರೆ.

ಪರೀಕ್ಷೆಗಳು ಪಾರದರ್ಶಕತೆ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಮತ್ತು ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯ ನಾಲ್ಕು ತಾಲ್ಲೂಕಿನ 52 ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಪರೀಕ್ಷಾ ಕೇಂದ್ರ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಗಮವಾಗಿ, ಸುಲಲಿತವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಯಾವುದೇ ಭಯ-ಭೀತಿ ಇಲ್ಲದೇ ಧೈರ್ಯದಿಂದ ಪರೀಕ್ಷೆ ಎದರುರಿಸಬೇಕು. ಪರೀಕ್ಷೆ ಬರೆಯಲಿರುವ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಿ, ಒತ್ತಡ ರಹಿತವಾಗಿ ಪರೀಕ್ಷೆಯನ್ನು ಬರೆಯಲು ಪೂರಕವಾದ ವಾತಾವರಣವನ್ನು ಪೋಷಕರು ನೀಡಬೇಕು.


– ಡಾ. ಕೆ.ಎನ್. ಅನುರಾಧ (ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ)*

ಬೇಸಿಗೆ: ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿ ಆರಂಭ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಮಾ. 17 :

ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಪರ್ಕಿಸಿ ಮಾಹಿತಿ ನೀಡಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಡಾ. ಕೆ.ಎನ್. ಅನುರಾಧ ಅವರು ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯುಂಟಾಗುವ ಗ್ರಾಮಗಳಲ್ಲಿ ತುರ್ತಾಗಿ ಕುಡಿಯುವ ನೀರನ್ನು ಒದಗಿಸಿ, ಪರಿಹಾರ ನೀಡುವ ನಿಟ್ಟಿನಲ್ಲಿ ಬೆಳಿಗ್ಗೆ 6:00 ಗಂಟೆಯಿಂದ ರಾತ್ರಿ 8:00 ಗಂಟೆಯವರೆಗೆ ವಾರದ 7 ದಿನಗಳಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ. ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ ಸಾರ್ವಜನಿಕರು (*ದೂರವಾಣಿ ಸಂಖ್ಯೆ 080-22221050*) ಕರೆ ಮಾಡಿ ತಿಳಿಸಬಹುದಾಗಿದ್ದು, ಕಂಟ್ರೋಲ್ ರೂಂನಲ್ಲಿ ‌ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ತಕ್ಷಣವೇ ಕುಡಿಯುವ‌ ನೀರಿನ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಕರೆಗಳನ್ನು ಸ್ವೀಕರಿಸಿ ದೂರುಗಳನ್ನು ದಾಖಲಿಸಿಕೊಂಡು, ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಸ್ಯೆಯನ್ನು ಪರಿಹರಿಸಲು ಕ್ರಮವಹಿಸಲಿದ್ದಾರೆ.

ಮುಂದಿನ ಮೂರು ತಿಂಗಳಲ್ಲಿ ಜಿಲ್ಲೆಯ ಸುಮಾರು 101 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ಅಂತಹ ಪರಿಸ್ಥಿತಿಯಲ್ಲಿ ಖಾಸಗಿ ಬೋರ್‌ವೆಲ್‌ಗಳು ಹಾಗೂ ಖಾಸಗಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕುಡಿಯುವ ನೀರಿನ ಮೂಲಗಳನ್ನು ಕಾಲಕಾಲಕ್ಕೆ ಪರೀಕ್ಷೆಗೊಳಪಡಿಸಿ, ಶುದ್ಧತೆ ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now