ವಿಜಯ ದರ್ಪಣ ನ್ಯೂಸ್….
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡ ಭೇಟಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾ. 20:
ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮ ಪಂಚಾಯಿತಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಪಂಚಾಯತ್ ರಾಜ್ ಹಾಗೂ ಸ್ಥಳೀಯ ಸರ್ಕಾರದ ವಿಶೇಷ ಮಾನಿಟರ್ ಆಗಿರುವ ಉಮಾಕಾಂತ್ ಅವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಹಾಗೂ ದೇವನಹಳ್ಳಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಇವರ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಗಳ ಆಡಳಿತ ವೈಖರಿ, ಯೋಜನೆಗಳ ಅನುಷ್ಠಾನ, ಸ್ಥಳೀಯ ಸರ್ಕಾರದ ಮುಖೇನ ಸಂವಿಧಾನದ ಧೇಯೋದ್ದೇಶಗಳನ್ನು ಸಾಕಾರಗೊಳಿಸುವಲ್ಲಿ ಎದುರಾಗುತ್ತಿರುವ ಸವಾಲುಗಳು ಹಾಗೂ ಇತ್ಯಾದಿಗಳ ಕುರಿತು ಅಧ್ಯಯನವನ್ನು ನಡೆಸಿದರು.

ಈ ವೇಳೆ ಬೆಂಗಳೂರು ನಗರ ಯೋಜನಾ ನಿರ್ದೇಶಕರಾದ ಮೋಹನ್ ಕುಮಾರ್, ನೋಮೇಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಗ್ರಾಮ ಪಂಚಾಯತ್ ಕಾರ್ಯದರ್ಶಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ :
ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Enterprenuership (EP) ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲು ಸಹ ಉದ್ದೇಶಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 2026 ರ ಮಾರ್ಚ್. 30 ರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ನಂ.09, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಕಛೇರಿ ಸಮಯದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









