--Ads--

ಜಿಲ್ಲಾಡಳಿತ ಭವನದಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಣೆ

On: March 23, 2026 3:51 PM
Follow ಮಾಡಿ
--Ads--

Whatsapp Channel

Join Now

Telegram Group

Join Now
ವಿಜಯ ದರ್ಪಣ ನ್ಯೂಸ್….

ಜಿಲ್ಲಾಡಳಿತ ಭವನದಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾ. 23 :

ವಚನಕಾರ ‘ದೇವರ ದಾಸಿಮಯ್ಯ ಅವರ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಯಂತಿ ಹಮ್ಮಿಕೊಳ್ಳಲಾಗಿತ್ತು.

ವೃತ್ತಿಯಲ್ಲಿ ನೇಯ್ಗೆಕಾರರಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ಶಿವನ ಅಪಾರ ಭಕ್ತರಾಗಿದ್ದು, ರಾಮನಾಥ ಇವರ ಅಂಕಿತನಾಮ. ಶಿವ ಜಗತ್ತನ್ನೇ ವ್ಯಾಪಿಸಿಕೊಂಡಂತೆ, ಜಗತ್ತೇ ಶಿವನ ರೂಪ ಎಂಬ ನಿಲುವಿನೊಂದಿಗೆ, “ಇಳೆ ನಿಮ್ಮ ದಾನ, ಬೆಳೆ ನಿಮ್ಮ ದಾನ, ಸುಳಿದು ಸೂಸುವ ಗಾಳಿ ನಿಮ್ಮ ದಾನವಯ್ಯ ಎಂದೆನ್ನುವ ದಾಸಿಮಯ್ಯನಲ್ಲಿ ಈ ಲೋಕವನ್ನು ನೋಡುವ ಕ್ರಮ ಹೊಸತನದಿಂದ ಕೂಡಿದೆ. ಅವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಶ್ರೀಕಾಂತ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮೋಹನ್, ಮುಜರಾಯಿ ತಹಶೀಲ್ದಾರ್ ಹೇಮಾವತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now