ಆಡಳಿತ ನ್ಯಾಯಾಧಿಕರಣ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ.

ವಿಜಯ ದರ್ಪಣ ನ್ಯೂಸ್.                                   ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 07

  ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿ ನೀಡುವ ಸಲುವಾಗಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

 

ಅರ್ಹ ಅಭ್ಯರ್ಥಿಗಳು, ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2023ರ ಜೂನ್ 15 ರಿಂದ ಪ್ರಾರಂಭವಾಗಿ ಜುಲೈ 15 ಕೊನೆಯ ದಿನಾಂಕವಾಗಿರುತ್ತದೆ.

ಷರತ್ತುಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ನಂ.217, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು-562110. ದೂರವಾಣಿ ಸಂಖ್ಯೆ; 29787447 ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ-ದೂ.ಸಂ.; 27681784, ದೊಡ್ಡಬಳ್ಳಾಪುರ-ದೂ.ಸಂ.; 27623681, ಹೊಸಕೋಟೆ-ದೂ.ಸಂ.; 27931528 ಮತ್ತು ನೆಲಮಂಗಲ-ದೂ.ಸಂ.; 27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕಿ ಪ್ರೇಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.