--Ads--

2026ನೇ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರ

On: March 25, 2026 4:49 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

2026ನೇ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ
ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರ

ತಾಂಡವಪುರ ಮೈಸೂರು ಮಾರ್ಚ್ 25 :            ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಇಲಾಖೆ ಮತ್ತು ಜಿಲ್ಲಾ ಹಜ್ ಸಮಿತಿಯ ಸಹಯೋಗದೊಂದಿಗೆ ದಿನಾಂಕ:25.03.2026 ರಂದು ಜಿಲ್ಲಾ ಆಸ್ಪತ್ರೆ ಮೈಸೂರು ಇಲ್ಲಿ 2026ನೇ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ಮತ್ತು ಲಸಿಕಾಕರಣ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಸದರಿ ಹಜ್ ಯಾತ್ರೆಗೆ ಸರ್ಕಾರಿ ಸಹಭಾಗಿತ್ವದಲ್ಲಿ 620 ಜನ ಹಾಗೂ ಖಾಸಗಿಯಾಗಿ 64 ಜನ ಒಟ್ಟು 684 ನೋಂದಣಿಯಾಗಿದ್ದು, ಸದರಿ ಎಲ್ಲಾ ಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣೆಯನ್ನು ಪೂರ್ಣಗೊಳಿಸಲಾಗಿದೆ.

ಮುಂಜಾಗ್ರತ ಕ್ರಮವಾಗಿ ಲಸಿಕೆಯನ್ನು ನೀಡಬೇಕಾಗಿದ್ದು, ಒಟ್ಟು 684 ಹಜ್ ಯಾತ್ರಾರ್ಥಿಗಳ ಪೈಕಿ ದಿನಾಂಕ :25.03.2026 ರಂದು ಮುನ್ನೆಚ್ಚರಿಕೆಯ ಕ್ರಮವಾಗಿ ಆರೋಗ್ಯ ತಪಾಸಣೆ ಮತ್ತು ಲಸಿಕೆಯನ್ನು ನೀಡಲಾಯಿತು.

ಡಾ.ಕುಮಾರಸ್ವಾಮಿ ಪಿ.ಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಫಲಾನುಭವಿಗೆ ಲಸಿಕೆಯನ್ನು ನೀಡವುದರ ಮೂಲಕ ಹಜ್ ಲಸಿಕಾ ಶಿಬಿರಕ್ಕೆ ಚಾಲನೆ ನೀಡಿದರು .

ಸದರಿ ಹಜ್ ಲಸಿಕಾ ಕಾರ್ಯಕ್ರಮದಲ್ಲಿ ಡಾ. ಮಹಮ್ಮದ್ ಸಿರಾಜ್ ಅಹಮದ್ ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿಗಳು, ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಮತ್ತು ಆರೋಗ್ಯ ಸಿಬ್ಬಂದಿಗಳು ಹಾಗೂ ಜಿಲ್ಲಾ ಹಜ್ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.

WhatsApp

Join Now

Telegram

Join Now

Instagram

Join Now