ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಚುನಾವಣೆ: ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸಿ ಪ್ರಕಾಶ್ ಆಯ್ಕೆ
ತಾಂಡವಪುರ ಮಾ.26: ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಚುನಾವಣೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ನಂಜನಗೂಡು ತಾಲ್ಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಕೆಂಪಿ ಸಿದ್ದನ ಹುಂಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ.ಪ್ರಕಾಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ .
ಖಜಾಂಚಿಯಾಗಿ ಕೆ.ಜಿ.ಮಹದೇವನಾಯಕ ಅವರು ಆಯ್ಕೆಗೊಂಡರು. ಮೈಸೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ಗುರುವಾರ ಅಧ್ಯಕ್ಷ ಹಾಗೂ ಖಚಾಂಚಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಹುಮತ ಪಡೆಯುವ ಮೂಲಕ ಆಯ್ಕೆಯಾದ ಸಿ.ಪ್ರಕಾಶ್ ಹಾಗೂ ಕೆ.ಜಿ.ಮಹಾದೇವನಾಯಕ ಅವರ ಹೆಸರನ್ನು ಸಹಾಯಕ ಚುನಾವಣಾಧಿಕಾರಿ ಬಿ.ಎಸ್.ಶಿವಕುಮಾರ್ ಅವರು ಘೋಷಿಸಿದರು.
9 ಸ್ಥಾನಕ್ಕೆ ನಡೆದ ಈ ಚುನಾವಣೆಯಲ್ಲಿ ಅಧ್ಯಕ್ಷರು ಹಾಗೂ ಖಜಾಂಚಿ ಅವರಿಗೆ ಚುನಾವಣೆ ನಡೆಯಿತು ಉಳಿದ ಏಳು ಮಂದಿ ಅವಿರೋಧವಾಗಿ ಆಯ್ಕೆಯಾದರೂ ಸಂಘದ ಉಪಾಧ್ಯಕ್ಷರಾಗಿ ಟಿ.ಎಸ್.ಚಿದಾನಂದ, ಟಿ.ಸೌಮ್ಯಲತಾ, ರಾಜ್ಯ ಪರಿಷತ್ ಸದಸ್ಯರಾಗಿ ಡಿ.ಸಿ.ಶಿವಣ್ಣ, ಸಂಘಟನಾ ಕಾರ್ಯದರ್ಶಿಯಾಗಿ ಮೊಹಮ್ಮದ್ ಇಸ್ಹಾಕ್, ಪುಷ್ಪಬಾಯಿ, ಕ್ರೀಡಾ ಕಾರ್ಯದರ್ಶಿಯಾಗಿ ಆರ್.ಕೆ.ಚಿದಾನಂದಸ್ವಾಮಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಜೆ.ಸಿ.ಆಶಾ ಅವರು ಅವಿರೋಧವಾಗಿ ಆಯ್ಕೆಯಾದರು.
ಇದೆ ವೇಳೆ ಮಿಥುನವಾಗಿ ಆಯ್ಕೆಯಾದ ಅಧ್ಯಕ್ಷರು ಖಜಾಂಚಿ ಹಾಗೂ ಸದಸ್ಯರುಗಳನ್ನು ಸನ್ಮಾನಿಸಿ ಗೌರವಿಸಿ ಮಾತನಾಡಿದ ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಕೃಷ್ಣರವರು ನಿಮ್ಮನ್ನು ಆಯ್ಕೆ ಮಾಡಿದ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪಂಚಾಯ್ತಿಯ ಕಾರ್ಯದರ್ಶಿಗಳು ಸಿಬ್ಬಂದಿ ವರ್ಗದವರನ್ನು ನಿಮ್ಮ ಜೊತೆಯಲ್ಲೇ ಕೊಂಡೊಯ್ಯುವ ಮೂಲಕ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಜೊತೆಗೆ ಸಾರ್ವಜನಿಕರ ಸೇವೆಯನ್ನು ಸಹ ಉತ್ತಮವಾಗಿ ಕಾರ್ಯನಿರ್ವಹಿಸಿ ಎಂದು ಸಲಹೆ ನೀಡಿದರು.
ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಸಿಪ್ರಕಾಶ್ ಹಾಗೂ ಖಜಂಚಿಯಾಗಿ ಆಯ್ಕೆಯಾದ ಮಹದೇವ ನಾಯಕರವರು ಮಾತನಾಡುತ್ತಾ ಪಿಡಿಒಗಳ ಸಮಸ್ಯೆಗೆ ಸ್ಪಂದಿಸುವೆ: ನನ್ನ ಮೇಲೆ ನಂಬಿಕೆಯನ್ನಿಟ್ಟು ಅಮೂಲ್ಯವಾದ ಮತ ನೀಡಿ ಜಯಶೀಲರನ್ನಾಗಿಸಿದ ಎಲ್ಲಾ ಪಿಡಿಒ ಅವರಿಗೆ ಧನ್ಯವಾದಗಳು.
ಜಿಲ್ಲೆಯ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಮಸ್ಯೆಗೆ ಸ್ಪಂದಿಸುವ ಮೂಲಕ ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯುವ ಕೆಲಸ ಮಾಡುವೆ ಜೊತೆಗೆ ನಮ್ಮ ಸಹೋದ್ಯೋಗಿಗಳ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ಮೂಲಕ ಸಾರ್ವಜನಿಕರ ಸೇವೆ ಜೊತೆಗೆ ಸಂಘದ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಗ್ರಾಮ ಪಂಚಾಯಿತಿಯಲ್ಲಿ ಸಾಕಷ್ಟು ಸವಾಲುಗಳೊಡನೆ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳ ಹಿತ ಕಾಪಾಡುಲಾಗುವುದು. ಕಾಲ ಕಾಲಕ್ಕೆ ಸಭೆ ನಡೆಸಿ ಬೇಡಿಕೆಗಳನ್ನು ಈಡೇರಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ ಅವರು, ಸಂಘದ ನಿಕಟಪೂರ್ವ ಅಧ್ಯಕ್ಷ ಕೆ.ರುಕ್ಮಾಂಗದ ಅವರು, ರಾಜ್ಯ ಪರಿಷತ್ ಸದಸ್ಯ ಟಿ.ಎಸ್. ಶ್ರೀನಿವಾಸ್, ಬಸವರಾಜು, ಮಾಯಪ್ಪ, ಚದ್ರಕಾಂತ್ ಸೇರಿದಂತೆ ಜಿಲ್ಲೆಯ ಎಲ್ಲಾ ಪಿಡಿಒಗಳು ಉಪಸ್ಥಿತರಿದ್ದರು.