ವಿಜಯ ದರ್ಪಣ ನ್ಯೂಸ್….
ದೇವನಹಳ್ಳಿ ತಹಸೀಲ್ದಾರ್ ಜನಸ್ನೇಹಿ ಅಧಿಕಾರಿ : ಡಿ.ಕೆ. ಮಹೇಂದ್ರ ಕುಮಾರ್

ದೇವನಹಳ್ಳಿ : ತಾಲ್ಲೂಕು ದಂಡಾಧಿಕಾರಿ ಅನಿಲ್ ಕುಮಾರ್ ಮೇಲೆ ಕೆಲವು ಸಂಘಟನೆಗಳು ಇಲ್ಲಸಲ್ಲದ ಆರೋಪಗಳು ಮಾಡುತ್ತಿವೆ, ಸರಿಯಾದ ಸಮಯದಲ್ಲಿ ಕಚೇರಿಯಲ್ಲಿ ಲಭ್ಯವಿಲ್ಲ ಹಾಗೂ ಸರಿಯಾಗಿ ಸಾರ್ವಜನಿಕರಿಗೆ ಸ್ವಂದಿಸುವುದಿಲ್ಲ ,ಈ ಆರೋಪ ಸತ್ಯಕ್ಕೆ ದೂರವಾಗಿದೆ ಅನಿಲ್ ಕುಮಾರ್ ಅಧಿಕಾರಕ್ಕೆ ಬಂದ ನಂತರ ಇತ್ಯರ್ಥವಾಗದ ಸಾಕಷ್ಟು ಕೇಸುಗಳು ಪೂರ್ಣಗೊಂಡಿದೆ ಎಂದು ರಾಜ್ಯ ಮಾನವ ಹಕ್ಕುಗಳ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಹೇಳಿದರು.
ಸಾರ್ವಜನಿಕರು ಆದರೂ ನೇರವಾಗಿ ತಹಸೀಲ್ದಾರ್ ರವರನ್ನು ಭೇಟಿ ಮಾಡಬಹುದು ಅಷ್ಟು ಜನಸ್ನೇಹಿ ಅಧಿಕಾರಿಯಾಗಿದ್ದು, ಸಂಘಟನೆಗಳ ಪದಾಧಿಕಾರಿಗಳು ಇಲ್ಲಸಲ್ಲದ ಆರೋಪ ಮಾಡಿ ಕೆಲಸಕ್ಕೆ ಅಡ್ಡಿ ಮಾಡಬಾರದು. ಯಾವುದೇ ದೂರುಗಳು ಇದ್ದರೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅಥವಾ ಸಚಿವರಿಗೆ ದೂರು ನೀಡಿ ಎಂದರು
ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ ಏಪ್ರಿಲ್ 12ಕ್ಕೆ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಬೆಂ.ಗ್ರಾ.ಜಿಲ್ಲೆ ಮಾ.27 (ಕ.ವಾ):
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾಗುವ ರಾಜ್ಯಮಟ್ಟದ ಸಾಮಾನ್ಯ ಪ್ರವೇಶ ಪರೀಕ್ಷೆಯು ಏಪ್ರಿಲ್ 12 ರಂದು ನಡೆಯಲಿದೆ.
ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ (CBSE) ಪ್ರವೇಶ ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಬೇಕಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭ್ಯರ್ಥಿಗಳಿಗೆ ಮೌಲಾನಾ ಆಜಾದ್ ಮಾದರಿ ಶಾಲೆ, ಉರ್ದು ಶಾಲಾ ಆವರಣ ಮತ್ತು ಸರ್ಕಾರಿ ಹೆಣ್ಣು ಮಕ್ಕಳ ಪ್ರೌಢಶಾಲೆ (ಜೂನಿಯರ್ ಕಾಲೇಜು ಹತ್ತಿರ), ವಿಜಯಪುರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ.
ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಕುಂದುಕೊರತೆಗಳಿದ್ದಲ್ಲಿ ಅಥವಾ ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳು https://dom.karnataka.gov.in/en ವೆಬ್ಸೈಟ್ ಹಾಗೂ ಹತ್ತಿರದ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ, MDRS/Dr APJKRS ಶಾಲೆಗಳು ಅಥವಾ ತಾಲ್ಲೂಕು ಮಾಹಿತಿ ಕೇಂದ್ರಗಳು. ವಾಟ್ಸಾಪ್ ಸಂಖ್ಯೆ: 8277799990, ದೂರವಾಣಿ ಸಂಖ್ಯೆಗಳು (ಬೆಳಿಗ್ಗೆ 9.30 ರಿಂದ ಸಂಜೆ 6.00 ರವರೆಗೆ): 9742298287, 9731017483, 9066296080, 8861926851, 9845622337, 9986874875, 9916578413, 8904491033, 7676905779, 8310103980, 8660971267, 9632249214 ಗೆ ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










