--Ads--

ವಿತರಕರ ಸಂಘದ ಅಧ್ಯಕ್ಷ ಶಂಭುಲಿಂಗ ಅವರಿಗೆ 5ಲಕ್ಷ ರೂ ನೆರವು ನೀಡಿದ ಸಿಎಂ ಸಿದ್ದರಾಮಯ್ಯ 

On: March 30, 2026 3:02 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ವಿತರಕರ ಸಂಘದ ಅಧ್ಯಕ್ಷ ಶಂಭುಲಿಂಗ ಅವರಿಗೆ 5ಲಕ್ಷ ರೂ ನೆರವು ನೀಡಿದ ಸಿಎಂ ಸಿದ್ದರಾಮಯ್ಯ 

ಬೆಂಗಳೂರು: ರಾಜ್ಯ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಕೆ.ಶಂಭುಲಿಂಗ ಅವರ ತುರ್ತು ಚಿಕಿತ್ಸೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವಿನ ಹಸ್ತ ಚಾಚಿದ್ದಾರೆ.

ಪತ್ರಿಕಾ ವಿತರಕರ ಸಂಘಟನೆಗಾಗಿ ಅವಿರತವಾಗಿ ದುಡಿದ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ತೀವ್ರ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿದ್ದಾರೆ.

ಈಗಾಗಲೇ 16ಲಕ್ಷಕ್ಕೂ ಹೆಚ್ಚು ವೆಚ್ಚವಾಗಿದ್ದು, ಇನ್ನೂ 20 ಲಕ್ಷ ಅಗತ್ಯವಿದೆ. ಈ ಸಂಕಷ್ಟದ ಹೊತ್ತಿನಲ್ಲಿ ಚಿಕಿತ್ಸಾವೆಚ್ಚಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಯುಕ್ತಿಕವಾಗಿ 5ಲಕ್ಷ ರೂ ನೆರವು ನೀಡಿದ್ದು, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಆಸ್ಪತ್ರೆಗೆ ತಲುಪಿಸಿದ್ದಾರೆ.

ನಮ್ಮಗಳ ಮನವಿಗೆ ಸ್ಪಂದಿಸಿ ನೆರವು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಲ್ಲ ರೀತಿಯ ಸಹಕಾರ ನೀಡಿದ ಕೆ.ವಿ.ಪ್ರಭಾಕರ್ ಅವರಿಗೆ ವಿತರಕರು ಮತ್ತು ಪತ್ರಕರ್ತರ ಪರವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಡಿಸಿಎಂ ಡಿ.ಕೆ.ಶಿವಕುಮಾರ್  ಯುವಕರಿಗೆ ಸ್ಪೂರ್ತಿ, ಪ್ರೇರಣೆಯಾಗಿದ್ದಾರೆ: ಮಂಜುನಾಥಗೌಡ 

ಸ್ತ್ರೀ ಶಕ್ತಿಯ ಮತ ಒಲಿಸಿಕೊಂಡರೆ ಗೆಲುವು ಸುಲಭ: ಡಾ.ಬೈರಮಂಗಲ ರಾಮೇಗೌಡ

ಆಸ್ಟ್ರೇಲಿಯಾದ ಗ್ರಿಫಿತ್ ವಿಶ್ವವಿದ್ಯಾಲಯ ಮತ್ತು ಮಾಹೆಯ ಡ್ಯುಯಲ್ ಪಿಎಚ್ಡಿ ಕಾರ್ಯಕ್ರಮ ಮತ್ತು ಸಂಶೋಧನಾ ಶ್ರೇಷ್ಠತೆಯ ಉಪಕ್ರಮದೊಂದಿಗೆ ಭಾರತ-ಆಸ್ಟ್ರೇಲಿಯಾ ಶೈಕ್ಷಣಿಕ

Samsung ತನ್ನ ಪ್ರಮುಖ ಹೊಸತನ ಮತ್ತು ಶಿಕ್ಷಣ ಕಾರ್ಯಕ್ರಮವಾದ Samsung Solve for Tomorrow ಐದನೇ ಆವೃತ್ತಿಯನ್ನು ಘೋಷಿಸಿದೆ. 

ಬಿಟ್‌ಡೆಲ್ಟಾ ಇಂಡಿಯಾ ವಿಶ್ವದ ಅತಿದೊಡ್ಡ ಕ್ರಿಪ್ಟೋ ಮಾರುಕಟ್ಟೆಗಾಗಿ ಸಾಂಸ್ಥಿಕ ದರ್ಜೆಯ ವರ್ಚುವಲ್ ಡಿಜಿಟಲ್ ಅಸೆಟ್ (VDA) ಮೂಲಸೌಕರ್ಯವನ್ನು ಪ್ರಾರಂಭಿಸಿದೆ.

ಭಾರತದಲ್ಲಿನ ಸ್ಯಾಮ್ಸಂಗ್ ಆರ್ & ಡಿ ಸಂಸ್ಥೆಗಳು ಮೊಬೈಲ್ ನಾವೀನ್ಯತೆಯ ಭವಿಷ್ಯವನ್ನು ಸಹ-ಸೃಷ್ಟಿಸಲು ಸ್ಟಾರ್ಟ್ಅಪ್ಗಳನ್ನು ಆಹ್ವಾನಿಸುತ್ತವೆ.