--Ads--

ನವಿಲೂರು ಗ್ರಾಮ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ

On: April 2, 2026 2:18 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ನವಿಲೂರು ಗ್ರಾಮ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ

ತಾಂಡವಪುರ ಏಪ್ರಿಲ್ ಒಂದು ಗ್ರಾಮ ಪಂಚಾಯಿತಿ ಉತ್ತಮ ಆಡಳಿತ ಸಂಸ್ಥೆಯಾಗಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುವ ಗ್ರಾಮ ಪಂಚಾಯಿತಿಯನ್ನು ಗುರುತಿಸಿ ರಾಜ್ಯ ಸರ್ಕಾರವು ಕೂಡ ಮಾಡುವ 2024 ಮತ್ತು 2025 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕು, ನವಿಲೂರು ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ತವರು ಜಿಲ್ಲೆಯು ಆಗಿರುವ ನಂಜನಗೂಡು ತಾಲೂಕು ನವಿಲೂರು ಗ್ರಾಮ ಪಂಚಾಯಿತಿ ಸ್ಥಳೀಯ ಮಟ್ಟದಲ್ಲಿ ಸ್ವಯಂ ಆಡಳಿತ ಸಂಸ್ಥೆಯಾಗಿ ಪರಿಣಾಮಕಾರಿ ಯಾಗಿ ಉತ್ತಮ ಕಾರ್ಯ ನಿರ್ವಹಿಸುವುದರ ಜೊತೆಗೆ ಸರ್ಕಾರದ ಯೋಜನೆಗಳನ್ನು ಅತ್ಯುತ್ತಮವಾಗಿ ಅನುಷ್ಠಾನಗೊಳಿಸುವ ಗ್ರಾಮ ಪಂಚಾಯತಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರಕ್ಕೆ ನವಿಲೂರು ಗ್ರಾಮ ಪಂಚಾಯಿತಿ ಇದಾಗಿದೆ.

ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದ ಯೋಜನೆಗಳಾದ ಸ್ವಚ್ಛ ಭಾರತ ಮಿಷನ್ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಸತಿ ಯೋಜನೆ, ತೆರಿಗೆ ವಸೂಲಾತಿ ಶಾಲೆ ಮತ್ತು ಅಂಗನವಾಡಿಗಳ ಅಭಿವೃದ್ಧಿ ಶೌಚಾಲಯಗಳ ನಿರ್ಮಾಣ ಬೀದಿ ದೀಪ ಮತ್ತು ಮೂಲ ಸೌಕರ್ಯ ಸೇರಿದಂತೆ ಬಾಲ್ಯ ವಿವಾಹ ಮತ್ತು ಬಾಲಕಾರ್ಮಿಕರ ಪದ್ಧತಿ ನಿಷೇಧ ಮಾನವ ಅಭಿವೃದ್ಧಿ ಸೂಚ್ಯಂಕ ಸೇರದಂತೆ ಅಭಿವೃದ್ಧಿಯಲ್ಲಿ ನವಿಲೂರು ಗ್ರಾಮ ಪಂಚಾಯತಿಯು ಮುಂಚೂಣಿಯಲ್ಲಿದ್ದು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಸರ್ಕಾರದ ವತಿಯಿಂದ ಸುಮಾರು ನಾಲ್ಕು ಲಕ್ಷ ರೂಗಳ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು

ಸರ್ಕಾರದ ವಿವಿಧ ಯೋಜನೆಗಳು ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಾಗಿದೆ ಗ್ರಾಮದ ಅಭಿವೃದ್ಧಿ ಕೆಲಸಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದ್ದು ಪಂಚಾಯತಿಯಲ್ಲಿ ತೆರಿಗೆ ಸಂಗ್ರಹಣೆಯಲ್ಲಿ ನೂರಕ್ಕ ನೂರರಷ್ಟು ಪ್ರಗತಿ ಸಾಧಿಸಿದ್ದೇವೆ ತಾಲೂಕಿನಲ್ಲಿ ಅಗ್ರಸ್ಥಾನದಲ್ಲಿರುವಂತೆ ಎಲ್ಲಾ ರೀತಿಯ ಕ್ರಮ ವೈಸಲಾಗಿದೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಕೆಲಸ ಮಾಡಲು ಪ್ರಶಸ್ತಿ ಪ್ರೇರಣೆಯಾಗಿದೆ ಹಾಗೂ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ದೊರಕಲು ಕಾರಣಕರ್ತರಾದ ಗ್ರಾಮ ಪಂಚಾಯತಿಯ ಎಲ್ಲಾ ಮಾಜಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳು ಅಂಗನವಾಡಿ ಕಾರ್ಯಕರ್ತರು ಗ್ರಂಥ ಪಾಲಕರು ಹಾಗೂ ಎಆರ್ ಯು ಮಲ್ಲೇಶ್ ಹಾಗೂ ಪಂಚಾಯತಿ ಸಿಬ್ಬಂದಿ ವರ್ಗದವರು ಗ್ರಾಮಸ್ಥರಿಗೆ ಅಭಿನಂದನೆ ತಿಳಿಸುತ್ತೇವೆ.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್ಎಸ್ ಮಂಜುನಾಥ್

ನಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಅಭಿವೃದ್ಧಿ ಸೇರದಂತೆ ಮೂಲಭೂತ ಸೌಲಭ್ಯಗಳಿಗೆ ಹಾಗೂ ಸರ್ಕಾರದ ವಿವಿಧ ಯೋಜನೆಗಳನ್ನು ಜನತೆಗೆ ತಲುಪಿಸುವ ಮೂಲಕ ಗ್ರಾಮ ಪಂಚಾಯತಿ ಸಮಗ್ರ ಅಭಿವೃದ್ಧಿಗೆ ಹೆಚ್ಚು ಒತ್ತು ಒತ್ತು ಕೊಟ್ಟು ಶ್ರಮವಹಿಸಿದ್ದೇವೆ ನಮ್ಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ದೊರೆತಿರುವುದಕ್ಕೆ ಸರ್ಕಾರವನ್ನು ಅಭಿನಯಿಸುತ್ತೇವೆ ಗಾಂಧಿ ಗ್ರಾಮ ಪುರಸ್ಕಾರ ಬರಲು ಎಲ್ಲಾ ರೀತಿಯಲ್ಲೂ ಸಹಕಾರ ನೀಡಿದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಪಂಚಾಯತಿಯ ಎಲ್ಲಾ ಸದಸ್ಯರು ಸಿಬ್ಬಂದಿ ವರ್ಗದವರಿಗೂ ನಾವು ಅಭಿನಂದನೆ ಸಲ್ಲಿಸುತ್ತೇವೆ.

ನವಿಲೂರು ಗ್ರಾಮ ಪಂಚಾಯತಿ ಅಧ್ಯಕ್ಷರು ಎಸ್ ಮಹದೇವ್

ನಮ್ಮ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ದೊರೆತಿರುವುದು ತುಂಬಾ ಸಂತೋಷವಾಗಿದೆ ಗಾಂಧಿ ಗ್ರಾಮ ಪುರಸ್ಕಾರ ದೊರಕಲು ನಮ್ಮ ಗ್ರಾಮ ಪಂಚಾಯತಿಯಲ್ಲಿ ಶ್ರಮವಹಿಸಿದ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಪಂಚಾಯತಿಯ ಎಲ್ಲಾ ಎಲ್ಲ ಸದಸ್ಯರು ಗ್ರಾಮಸ್ಥರು ಹಾಗೂ ಸಿಬ್ಬಂದಿ ವರ್ಗದವರಿಗೆ ನಾವು ತುಂಬು ಹೃದಯದ ಧನ್ಯವಾದಗಳು ತಿಳಿಸುವ ಮೂಲಕ ಗಾಂಧಿ ಗ್ರಾಮ ಪುರಸ್ಕಾರ ನೀಡಿದ ರಾಜ್ಯ ಸರ್ಕಾರವನ್ನು ನಾವು ತುಂಬು ಹೃದಯದ ಧನ್ಯವಾದಗಳು ಅರ್ಪಿಸುತ್ತೇವೆ.

ಗ್ರಾಮ ಪಂಚಾಯತಿ ಉಪಾಧ್ಯಕ್ಷರು ಬಿ ಎಸ್ ನಿರ್ಮಲ

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ