--Ads--

ಜಾನುವಾರುಗಳಿಗೆ 9ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ:ಅಪರ ಜಿಲ್ಲಾಧಿಕಾರಿಗಳಿಂದ ಪೋಸ್ಟರ್ ಬಿಡುಗಡೆ

On: April 4, 2026 6:27 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಪಶುಪಾಲನಾ ಮತ್ತು ವಶುವೈದ್ಯಕೀಯ ಸೇವಾ ಇಲಾಖೆಯಿಂದ ಹಮ್ಮಿಕೊಳ್ಳಲಿರುವ ಕಾಲುಬಾಯಿ ಲಸಿಕಾ ಅಭಿಯಾನ

ಜಾನುವಾರುಗಳಿಗೆ 9ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ:ಅಪರ ಜಿಲ್ಲಾಧಿಕಾರಿಗಳಿಂದ ಪೋಸ್ಟರ್ ಬಿಡುಗಡೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಏ.04: ಏಪ್ರಿಲ್ 23 ರಿಂದ ಜಾನುವಾರುಗಳಿಗೆ ಉಚಿತ ಕಾಲು ಬಾಯಿ ಲಸಿಕೆ ಹಾಕುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ರೈತರು ತಪ್ಪದೇ ತಮ್ಮ ಜಾನುವಾರುಗಳಿಗೆ ಉಚಿತ ಕಾಲುಬಾಯಿ ಲಸಿಕೆ ಹಾಕಿಸಿ ಎಂದು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 9ನೇ ಸುತ್ತಿನ ಕಾಲುಬಾಯಿ ಲಸಿಕಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸ್ತುತ ಜಾನುವಾರು ಗಣತಿಯಂತೆ ಒಟ್ಟು 1.31.986 ದನ. 9,090 ಎಮ್ಮೆಗಳಿದ್ದು, ಒಟ್ಟು 1,41,076 ಜಾನುವಾರುಗಳಿಗೆ ದಿನಾಂಕ: 23.04.2026 ರಿಂದ 22.05.2026 ರವೆರೆಗೆ 9ನೇ ನುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ಬಮೂಲ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದು ಶೇಕಡ 100 ರಷ್ಟು ಗುರಿ ಸಾಧಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಒಟ್ಟು 1687 ಬ್ಲಾಕ್ಗಳನ್ನಾಗಿ ವಿಂಗಡಿಸಿದ್ದು, ಒಟ್ಟು 199ತಂಡಗಳಲ್ಲಿ ಇಲಾಖಾ ಅಧಿಕಾರಿ/ಸಿಬ್ಬಂದಿಗಳು ಮತ್ತು ಬಮೂಲ್ ಸಿಬ್ಬಂದಿಗಳು ಸೇರಿ ಒಟ್ಟು 333 ಲಸಿಕೆದಾರರು ಪ್ರತಿದಿನ ಬೆಳಿಗ್ಗೆ 5.30 ಯಿಂದ ಬೆಳಗ್ಗೆ 11.00 ಗಂಟೆಯವರೆಗೆ ನಿಗಧಿತ ವೇಳಾಪಟ್ಟಿಯಂತೆ ಗ್ರಾಮಗಳಿಗೆ ಭೇಟಿ ನೀಡಿ, ಜಾನುವಾರುಗಳಿಗೆ ಕಾಲು ಬಾಯಿ ಜ್ವರದ ಲಸಿಕೆಯನ್ನು ಉಚಿತವಾಗಿ ನೀಡಲಿದ್ದಾರೆ. ಈಗಾಗಲೇ ಪ್ರತೀ ಗ್ರಾಮವಾರು ಮೈಕೋಪ್ಲಾನ್ ಮಾಡಲಾಗಿದ್ದು, ಅದರನ್ವಯ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಮತ್ತು ಈ ಲಸಿಕಾ ಕಾರ್ಯಕ್ರಮದ ಕುರಿತು ರೈತರಿಗೆ ಮನವರಿಕೆ ಮಾಡಿ ಕೊಡುವ ಸಲುವಾಗಿ ಬ್ಯಾನರ್ಸ್, ಪೊಸ್ಟರ್ ತ್ತು ಕರಪತ್ರಗಳನ್ನು ಮುದ್ರಿಸಿ, ಜಿಲ್ಲೆಯ ಪ್ರತಿ ವಶುವೈದ್ಯಕೀಯ ಸಂಸ್ಥೆ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಆವರಣದಲ್ಲಿ ಪ್ರದರ್ಶಿಸಲಾಗಿದೆ ಎಂದರು.

ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 1,53,500 ಡೋಸಸ್ ಕಾಲುಬಾಯಿ ರೋಗ ಲಸಿಕೆ ಲಭ್ಯವಿರುತ್ತದೆ ಹಾಗೂ ಲಸಿಕಾ ಕಾರ್ಯಕ್ರಮಕ್ಕೆ ಅಗತ್ಯವಿರುವ ಸಿರಿಂಜ್ಗಳು ಸರಬರಾಜಾಗಿವೆ. ಬಮೂಲ್ ವತಿಯಿಂದ ಈ ಲಸಿಕಾ ಕಾರ್ಯಕ್ರಮಕ್ಕೆ 38 ಲಸಿಕೆದಾರರನ್ನು ಒದಗಿಸಲಾಗುತ್ತಿದೆ. ಪ್ರತಿ ರಾಸಿಗೆ 1 ರಂತೆ ಸಿರಿಂಜ್ ಮತ್ತು ನೀಡಲ್ಗಳನ್ನು ಬಳಸಿ ಲಸಿಕೆ ಹಾಕಲಾಗುವುದು. ರೈತ ಬಾಂಧವರು ತಮ್ಮ 03 ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ರೋಗ ಲಸಿಕೆ ಹಾಕಿಸಿ ಹಾಗೂ ಕರುಗಳಿಗೆ 21 ದಿನಗಳ ನಂತರ ಬೂಸ್ಟರ್ ಡೋಸ್ ಲಸಿಕೆ ಹಾಕಿಸಿ ಹಾಗೂ ಲಸಿಕೆ ಮಾಡಿದ ಅದರಂತೆ ರೈತ ಬಾಂಧವರು ಈ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ವಿನಂತಿಸಲಾಗಿದೆ- ಡಾ. ಜಗದೇಶ್‌ ಕುಮಾರ್, ಉಪನಿರ್ದೇಶಕರು, ಪಶುವೈದ್ಯಕೀಯ ಮತ್ತು ಸೇವಾ ಇಲಾಖೆ, ಬೆಂ.ಗ್ರಾ ಜಿಲ್ಲೆ

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರಮೇಶ್, ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸದಸ್ಯ ಕಾರ್ಯದರ್ಶಿಗಳು, ಮುಖ್ಯಪಶುವೈದ್ಯಾಧಿಕಾರಿ ಡಾ ನಾರಾಯಣಸ್ವಾಮಿ, ಡಾ ಸದಾಶಿವಮೂರ್ತಿ, ಡಾ ಮಂಜುನಾಥ್ ಎಂ.ಕೆ. ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now