--Ads--

ಕೆಐಎಡಿಬಿಗೆ ಭೂಮಿ ವಶ ಖಂಡಿಸಿ ರೈತರಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ

On: April 6, 2026 2:15 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಕೆಐಎಡಿಬಿಗೆ ಭೂಮಿ ವಶ ಖಂಡಿಸಿ ರೈತರಿಂದ ರಾಷ್ಟ್ರೀಯ ಹೆದ್ದಾರಿ ಬಂದ್*ಮಾಡಿ ಪ್ರತಿಭಟನೆ

ತಾಂಡವಪುರ ಏಪ್ರಿಲ್ 6 ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಲೂಕಿನ ಮುದ್ದಳ್ಳಿ ಗ್ರಾಮದಲ್ಲಿ ಸುಮಾರು 448 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕೆಐಎಡಿಬಿ ಕೈಗಾರಿಕರಣಕ್ಕೆ ವಶಪಡಿಸಿಕೊಳ್ಳುವುದನ್ನು ಖಂಡಿಸಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಗ್ರಾಮದ ರೈತರೊಂದಿಗೆಸೋಮವಾರ ಕರ್ನಾಟಕ , ತಮಿಳುನಾಡು , ಕೇರಳ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಲಾಯಿತು.
ಕೆಲವು ಸಮಯದ ನಂತರ ರೈತರು ಹೆದ್ದಾರಿಯಿಂದ ಗ್ರಾಮದವರೆಗು ಕಾಲ್ನಡಿಗೆಯಲ್ಲಿ ತೆರಳಿ ಮುದ್ದಳ್ಳಿ ಗ್ರಾಮದಲ್ಲಿ ಅನಿರ್ದಿಷ್ಟಾವಧಿ ಹೋರಾಟಕ್ಕೆ ಚಾಲನೆ ನೀಡಲಾಯಿತು.
ಸ್ಥಳಕ್ಕೆ ಭೇಟಿ ನೀಡಿದ ನಂಜನಗೂಡಿನ ತಹಸೀಲ್ದಾರ್ ರೈತರ ಹಕ್ಕೊತ್ತಾಯ ಪತ್ರಗಳನ್ನು ಸ್ವೀಕರಿಸಿ ತ್ವರಿತವಾಗಿ ವಿಚಾರವನ್ನು ಸರ್ಕಾರಕ್ಕೆ ತಲುಪಿಸುವ ಕೆಲಸವನ್ನು ಮಾಡುತ್ತೇನೆ ಎಂದು ತಿಳಿಸಿದರು.
ಭೂಸ್ವಾಧೀನದ ವಿರುದ್ಧ ನಡೆಯುತ್ತಿರುವ ಹೋರಾಟವು ತಾರ್ಕಿಕ ಹಂತ ತಲುಪುವವರೆಗೂ ಯಾವುದೇ ಕಾರಣಕ್ಕೂ ಯಾವುದೇ ರೀತಿಯ ಹಸ್ತಕ್ಷೇಪಗಳು ಆಗಬಾರದು ಎಂದು ರೈತರು ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ತಲುಪಿಸಿದ್ದಾರೆ.
ಹೋರಾಟದಲ್ಲಿ ಹೊನ್ನೂರು ಪ್ರಕಾಶ್, ಮಂಜು ಕಿರಣ್ , ಶಿರಮಳ್ಳಿ ಮಂಜುನಾಥ, ಮುದ್ದಳ್ಳಿ ಗ್ರಾಮದ ವಿಜಯಲಕ್ಷ್ಮಿ, ಗುರುಸ್ವಾಮಿ ಮಲ್ಲಿಕಾರ್ಜುನ್ ಅವರನ್ನು ಒಳಗೊಂಡಂತೆ ಗ್ರಾಮದ ಹಿರಿಯರು ಮಹಿಳೆಯರು ಹಾಗೂ ಮಕ್ಕಳು ಹೋರಾಟದಲ್ಲಿ ಪಾಲ್ಗೊಂಡಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

ಮಲ್ಲುಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದಿಂದ ದೊರೆಯುವ ಸೌಲಭ್ಯಗಳನ್ನು ಸದಸ್ಯರು ಪಡೆದುಕೊಳ್ಳಬೇಕು.

ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ,  ಸಮಸ್ಯೆಗಳಿಗೆ ಸ್ಪಂದಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಡಾ. ಯತೀಂದ್ರ ಸಿದ್ದರಾಮಯ್ಯ ಶಾಸಕ ಕೆ ವೆಂಕಟೇಶ್ ರವರಿಂದ ಭೂಮಿ ಪೂಜೆ

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 5 ತಾಲ್ಲೂಕುಗಳು ತೀವ್ರ ಬರಪೀಡಿತ ; ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸಿ ಡಿಸಿಎಂ ಡಾ.ಜಿ. ಪರಮೇಶ್ವರ್ 

ಜಿಲ್ಲೆಯ ನಂಜನಗೂಡು ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಡಾ .ಜಿ. ಪರಮೇಶ್ವರ್  ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ