--Ads--

೧೫ ದಿನದಲ್ಲಿ ಅಂಡರ್‌ ಪಾಸ್‌ ಕಾಮಗಾರಿಗೆ ಆರಂಭಕ್ಕೆ ಸಂಸದ ಯದುವೀರ್ ಸೂಚನೆ

On: April 8, 2026 6:17 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

೧೫ ದಿನದಲ್ಲಿ ಅಂಡರ್‌ ಪಾಸ್‌ ಕಾಮಗಾರಿಗೆ ಆರಂಭಕ್ಕೆ ಸಂಸದ ಯದುವೀರ್ ಸೂಚನೆ

ತಾಂಡವಪುರ ಏಪ್ರಿಲ್ 8 ಮೈಸೂರು ವಿಶ್ವವಿದ್ಯಾಲಯದ ಕ್ರಾರ್ಯಸೌಧ ಮತ್ತು ಕುಕ್ಕರಹಳ್ಳಿ‌ ಕೆರೆ ನಡುವಿನ ಜಂಕನ್ ನಲ್ಲಿ ರೈಲ್ವೆ ಅಂಡರ್ ಪಾಸ್ ನಿರ್ಮಾಣ‌ ಕಾಮಗಾರಿಯನ್ನು ೧೫ದಿನಗಳಲ್ಲಿ ಆರಂಭಿಸುವಂತೆ ಸಂಸದ ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದರು.

ಈ ಸಂಬಂಧ ಕುಕ್ಕರಹಳ್ಳಿ ಕೆರೆಯ ರೈಲ್ವೆ ಗೇಟ್ ಬಳಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿ, ಮುಂದಿನ 15 ದಿನಗಳಲ್ಲಿ ಕಾಮಗಾರಿ ಆರಂಭಿಸಿ ಆದಷ್ಟು ಬೇಗನೆ ಮುಗಿಸಿ ವಾಹನಗಳ ಸಂಚಾರಕ್ಕೆ ರೈಲ್ವೆ ಅಂಡರ್ ಪಾಸ್ ಅನ್ನು ಮುಕ್ತಗೊಳಿಸುವುದಾಗಿ ಹೇಳಿದರು.

ಚಾಮುಂಡಿ ಬೆಟ್ಟದಲ್ಲಿ ಅಧಿಕಾರಿಗಳ ದರ್ಬಾರು ನಡೆಯುತ್ತಿದೆ. ಸ್ಥಳೀಯ ನಿವಾಸಿಗಳ ಭಾವನೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ವಿಚಾರ ನ್ಯಾಯಾಲಯದಲ್ಲಿದೆ. ಚಾಮುಂಡಿ ಬೆಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಯಾರ ಮಾತಿಗೂ ಬೆಲೆ‌ ಕೊಡುತ್ತಿಲ್ಲ. ಈ ಬಗ್ಗೆ ವ್ಯಾಪಕ ದೂರುಗಳು‌ ಕೇಳಿ ಬಂದಿವೆ. ಸ್ಥಳೀಯ ಆಡಳಿತ ಹಾಗೂ ಅಲ್ಲಿನ ನಿವಾಸಿಗಳ ಮಾತಿಗೂ ಪ್ರಾಧಿಕಾರದ ಅಧಿಕಾರಿಗಳು ಬೆಲೆ ಕೊಡುತ್ತಿಲ್ಲ. ಸ್ಥಳೀಯ ನಿವಾಸಿಗಳ ಸಮಸ್ಯೆಗೂ ಸ್ಪಂದಿಸುತ್ತಿಲ್ಲ ಎಂದು ಕಿಡಿಕಾರಿದರು.

ನಗರದ ಹಲವೆಡೆ ಎಲ್ಲೆಂದರಲ್ಲಿ ಸಿಗ್ನಲ್ ಲೈಟ್ ಅಳವಡಿಸಿರುವುದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಈ ರೀತಿ ಅವೈಜ್ಞಾನಿಕವಾಗಿ ಸಿಗ್ನಲ್ ಲೈಟ್ ಅಳವಡಿಸಲು ಯಾರು ಅನುನತಿ ನೀಡಿದರೋ ಗೊತ್ತಿಲ್ಲ. ಕೆಲವೇ ಮೀಟರ್ ಅಂತರದಲ್ಲಿ ಸಿಗ್ನಲ್ ಲೈಟ್ ಅಳವಡಿಸಿರುವ ಕಾರಣ ವಾಹ‌ನ ಸವಾರರಿಗೆ ತೊಂದರೆ ಆಗ್ತಿದೆ. ರಸ್ತೆಯಲ್ಲಿ ಸಂಚರಿಸಲು ಅನಗತ್ಯವಾಗಿ ವಿಳಂಬ ಆಗುತ್ತಿದೆ. ಸಿಗ್ನಲ್‌ ಲೈಟ್ ಅಳವಡಿಕೆಯಿಂದ ಜನ ಸಾಮಾನ್ಯರಿಗೆ ತೊಂದರೆಯಾಗಿದೆ.

– ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌, ಸಂಸದ

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

GFF 2026ರಲ್ಲಿ ಹಣಕಾಸು ಒಳಗೊಳ್ಳುವಿಕೆಯನ್ನು ಉತ್ತೇಜಿಸಲು DFS ಕಾರ್ಯದರ್ಶಿಯವರು ನವೀನ ಉಪಕ್ರಮಗಳನ್ನು ಅನಾವರಣ

ಕಾಲೇಜಿನ ಅಭಿವೃದ್ಧಿ ಕಾರ್ಯಗಳು ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಮಗ್ರ ಸಮಾಲೋಚನೆ ಸಭೆ ನಡೆಸಿದ ಶಾಸಕ ದರ್ಶನ್ ಧ್ರುವನಾರಾಯಣ್ 

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ (ರಿ.), ಕರ್ನಾಟಕ ವತಿಯಿಂದ  ರಾಷ್ಟ್ರಕವಿ ಕುವೆಂಪು ಪ್ರಶಸ್ತಿಗೆ ಆನಂದ್ ಸಿ. ತಿರುಮಲ  ಆಯ್ಕೆ 

ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಾರ್ವಜನಿಕರ ಸಹಕಾರ. ಶಾಸಕ ದರ್ಶನ್ ದ್ರುವ ನಾರಾಯಣ್

ನಿರುದ್ಯೋಗಿ ಯುವಕರು ಯುವತಿಯರು  ಉದ್ಯೋಗ ಮೇಳಗಳಲ್ಲಿ ಭಾಗವಹಿಸಿ ಉದ್ಯೋಗ ಮೇಳದ ಪ್ರಯೋಜನವನ್ನು ಪಡೆದುಕೊಳ್ಳಿ: ಸಚಿವ ಡಾ. ಯತೀಂದ್ರ ಸಿದ್ರಾಮಯ್ಯ ಕರೆ

ಅಹವಾಲು ನಿಮ್ಮದು, ಪರಿಹಾರ ನಮ್ಮದು. ಮೈಸೂರಿನ ಪ್ರಜಾ ಸೇವ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ