ವಿಜಯ ದರ್ಪಣ ನ್ಯೂಸ್….
ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಜೆ.ಚೈತ್ರಶ್ರೀ: ಶಿಕ್ಷಕರು ಹಾಗೂ ಪೋಷಕರಿಂದ ಭಾರೀ ಮೆಚ್ಚುಗೆ

ಶಿಡ್ಲಘಟ್ಟ: ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಫಲಿತಾಂಶದಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದು, ಕಾಲೇಜಿನ ವಿದ್ಯಾರ್ಥಿನಿ ಜೆ.ಚೈತ್ರಶ್ರೀ ಅವರು ಒಟ್ಟು 600 ಅಂಕಗಳಿಗೆ 593 ಅಂಕಗಳನ್ನು ಗಳಿಸುವ ಮೂಲಕ ದ್ವಿತೀಯ ಪಿಯುಸಿಯಲ್ಲಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯಾಗಿ ಹೊರಹೊಮ್ಮಿದ್ದಾರೆ ಅವರ ಈ ಸಾಧನೆಗೆ ಶಿಕ್ಷಕರು ಹಾಗೂ ಪೋಷಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯವರು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿ ಚೈತ್ರಶ್ರೀ ಸೇರಿದಂತೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ಈ ವೇಳೆ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಮಾತನಾಡಿ, ನಮ್ಮ ಕಾಲೇಜಿನಲ್ಲಿ ಒಟ್ಟು 80 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 35 ಮಂದಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ದಾಖಲೆ ನಿರ್ಮಿಸಿದ್ದಾರೆ ,ಇನ್ನೂ 37 ಮಂದಿ ಪ್ರಥಮ ಶ್ರೇಣಿಯಲ್ಲಿ ಹಾಗೂ 5 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಜತೆಗೆ, 580ಕ್ಕಿಂತ ಹೆಚ್ಚು ಅಂಕಗಳನ್ನು ವಿದ್ಯಾರ್ಥಿಗಳು ಪಡೆಯುವ ಮೂಲಕ ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಶುಭ ಹಾರೈಸಿದರು.
ಕಾಲೇಜಿನ ಈ ಯಶಸ್ಸಿಗೆ ಪೋಷಕರ ನಂಬಿಕೆ, ವಿದ್ಯಾರ್ಥಿಗಳ ಪರಿಶ್ರಮ ಹಾಗೂ ಉಪನ್ಯಾಸಕರ ಶ್ರಮವೇ ಪ್ರಮುಖ ಕಾರಣ ಎಂದು ಆಡಳಿತ ಮಂಡಳಿ ವಿವರಿಸಿದರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ
ನೀಡುತ್ತಿರುವ ಉಪನ್ಯಾಸಕ ವೃಂದದ ಕೊಡುಗೆ ಅಮೂಲ್ಯವಾಗಿದೆ ಎಂದು ಪ್ರಶಂಸಿಸಲಾಯಿತು.
ಚೈತ್ರಶ್ರೀ ಅವರ ಸಾಧನೆಗೆ ಕಾರಣ ಭಾಷಾ ವಿಷಯಗಳನ್ನು ಹೊರತುಪಡಿಸಿ ಉಳಿದ ಪ್ರಮುಖ ನಾಲ್ಕು ವಿಷಯಗಳಾದ ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ ಮತ್ತು ಗಣಕ ವಿಜ್ಞಾನದಲ್ಲಿ ಶತಕ್ಕೆ ಶತ (100/100) ಅಂಕಗಳನ್ನು ಪಡೆದು ಅಪೂರ್ವ ಪ್ರತಿಭೆಯನ್ನು ಮೆರೆದಿದ್ದಾರೆ.
ಈ ಸಂದರ್ಭದಲ್ಲಿ ಕನ್ನಡ ಉಪನ್ಯಾಸಕಿ ಶುಭ, ಅರ್ಥಶಾಸ್ತ್ರ ಉಪನ್ಯಾಸಕ ಪ್ರಕಾಶ್,ಇಂಗ್ಲಿಷ್ ಉಪನ್ಯಾಸಕ ರಾಕೇಶ್, ಗಣಕ ವಿಜ್ಞಾನ ಉಪನ್ಯಾಸಕ ರಾಜೇಶ್ , ಲೆಕ್ಕಶಾಸ್ತ್ರ ಉಪನ್ಯಾಸಕ ಚಂದ್ರಶೇಖರ್, ಹಾಗೂ ವ್ಯವಹಾರ ಅಧ್ಯಯನ ಉಪನ್ಯಾಸಕಿ ಕಮಲಾ ಇನ್ನೀತರರು ಹಾಜರಿದ್ದರು.









