ಹಸಿರುಮನೆ (ಗ್ರೀನ್ ಹೌಸ್) ಘಟಕ ನಿರ್ಮಾಣಕ್ಕೆ ಸಹಾಯಧನ.

ವಿಜಯ ದರ್ಪಣ ನ್ಯೂಸ್ 

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 13.                   ಅಟಲ್ ಭೂಜಲ ಯೋಜನೆಯು ಅಂತರ್ಜಲ ನಿರ್ವಹಣೆಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುತ್ತದೆ. ಕೇಂದ್ರ ಜಲಶಕ್ತಿ ಸಚಿವಾಲಯದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ 24 ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಟಾನಗೊಳಿಸಲು ಅನುಮೋದನೆಗೊಂಡಿರುತ್ತದೆ. ಒಂದು ಗ್ರಾಮ ಪಂಚಾಯಿತಿಯಲ್ಲಿ ಒಬ್ಬ ಫಲಾನುಭವಿಗೆ ಸವಲತ್ತನ್ನು ಮಿತಿಗೊಳಿಸಿದ್ದು, ಅನುದಾನವು ಲಭ್ಯವಿದ್ದಲ್ಲಿ ಒಂದಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಸವಲತ್ತನ್ನು ನೀಡಬಹುದಾಗಿರುತ್ತದೆ.

            2023-24ನೇ ಸಾಲಿಗೆ ಅಟಲ್ ಭೂಜಲ ಯೋಜನೆಯನ್ನು ವಿಶ್ವ ಬ್ಯಾಂಕ್ ನೆರವಿನೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನಕ್ಕೆ ಸೇರಿದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಆಯ್ಕೆಯಾದ 24 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದೆ.

ದೇವನಹಳ್ಳಿ ತಾಲ್ಲೂಕಿನ ಗೊಡ್ಲುಮುದ್ದೇನಹಳ್ಳಿ, ಯಲಿಯೂರು, ಕೊಯಿರಾ ಗ್ರಾಮ ಪಂಚಾಯಿತಿಗಳಲ್ಲಿ ನೆಲಮಂಗಲ ತಾಲೂಕಿನ ಶ್ರೀನಿವಾಸಪುರ, ಯಂಟಗಾನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ, ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ, ದೊಡ್ಡಗಟ್ಟಿಗನಬ್ಬೆ, ದೊಡ್ಡ ಅರಳಗೆರೆ, ಗಣಗಲೂರು, ಜಡಿಗೇನಹಳ್ಳಿ, ನಂದಗುಡಿ, ಸೂಲಿಬೆಲೆ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಅರುಳು ಮಲ್ಲಿಗೆ, ಆರೂಡಿ, ಚನ್ನಾದೇವಿ ಅಗ್ರಹಾರ, ಹಾಡೋನಹಳ್ಳಿ, ಹೊನ್ನಾವರ, ಹೊಸಹಳ್ಳಿ, ಹುಲಿಕುಂಟೆ, ಕನಸವಾಡಿ, ಕೆಸ್ತೂರು, ಕೊನ್ನಘಟ್ಟ, ಮಾಜರ ಹೊಸಹಳ್ಳಿ, ರಾಜಘಟ್ಟ ಗ್ರಾಮಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನುಷ್ಟಾನಗೊಳಿಸಲಾಗುತ್ತದೆ.

ಸಂರಕ್ಷಿತ ಬೇಸಾಯದ ತಾಂತ್ರಿಕತೆ ಅಳವಡಿಸಿಕೊಂಡು ಹಸಿರುಮನೆಯಲ್ಲಿ  ( ಗ್ರೀನ್ ಹೌಸ್ ) ಉತ್ತಮ ಗುಣಮಟ್ಟದ ತೋಟಗಾರಿಕೆ ಬೆಳೆಗಳ ಉತ್ಪನ್ನಗಳನ್ನು ಉತ್ಪಾದಿಸಲು ಹಾಗೂ ರೋಗ/ಕೀಟ ಬಾಧೆಯನ್ನು ನಿಯಂತ್ರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ. ತೋಟಗಾರಿಕೆ ಬೆಳೆಗಳಾದ ವಿವಿಧ ಪುಷ್ಪ ಹಾಗೂ ಅಧಿಕ ಮೌಲ್ಯದ ತರಕಾರಿ ಬೆಳೆಗಳನ್ನು ಹಸಿರುಮನೆಯಲ್ಲಿ ಬೆಳೆಯಲು ಎಲ್ಲಾ ವರ್ಗದ ರೈತರಿಗೆ ಶೇ. 50ರ ಸಹಾಯಧನ ನೀಡಲಾಗುವುದು.

ಹಸಿರುಮನೆ ನಿರ್ಮಾಣಕ್ಕೆ ಸಹಾಯಧನ ಪಡೆಯಲು ಆಸಕ್ತವಿರುವ ರೈತರು ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಫಲಾನುಭವಿಯ ಭಾವಚಿತ್ರ ಹಾಗೂ ಪ್ರಸಕ್ತ ಸಾಲಿನ ಪಹಣಿ (RTC)ಯೊಂದಿಗೆ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ರವರ ಕಛೇರಿಗೆ ದಿನಾಂಕ: 17.06.2023ರೊಳಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿ ಪಂ) ದೊಡ್ಡಬಳ್ಳಾಪುರ: 9880210892, ದೇವನಹಳ್ಳಿ: 9448825101, ಹೊಸಕೋಟೆ: 8217210320, ನೆಲಮಂಗಲ: 9880461607 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯಿತಿ ) ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.