--Ads--

ಸ್ಟಾಲಿನ್ ನಿಲುವು ದಕ್ಷಿಣ ಭಾರತದ ಅಭಿಪ್ರಾಯವಲ್ಲ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

On: April 18, 2026 3:22 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಸ್ಟಾಲಿನ್ ನಿಲುವು ದಕ್ಷಿಣ ಭಾರತದ ಅಭಿಪ್ರಾಯವಲ್ಲ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

ನವದೆಹಲಿ: ಲೋಕಸಭೆ ಮತ್ತು ವಿಧಾನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಮೀಸಲಾತಿ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇರಿಸಿರುವ ಹೆಜ್ಜೆ ಐತಿಹಾಸಿಕ ಎಂದು ಬಣ್ಣಿಸಿದ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ, ‘ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಡಿಎಂಕೆ ಪಕ್ಷಗಳ ವಾದಗಳು ಭಯ ಹುಟ್ಟಿಸುವ ರೀತಿಯ ಲ್ಲಿವೆ’ಎಂದು ಕಳವಳ ವ್ಯಕ್ತಪಡಿಸಿದರು.

ಲೋಕಸಭೆಯಲ್ಲಿ ಶುಕ್ರವಾರ ಮಹಿಳಾ ಮೀಸಲು ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸುಧಾರಣೆಗಳಿಗೆ ವ್ಯವಸ್ಥಿತವಾಗಿ ತಡೆಯೊಡ್ಡುತ್ತಿದೆ. ಈ ಮಸೂದೆಯನ್ನು ಬೆಂಬಲಿಸುವುದನ್ನು ಬಿಟ್ಟು ಜನರನ್ನು ದಾರಿತಪ್ಪಿಸುವ ಸಂಕಥನಗಳನ್ನು ಸೃಷ್ಟಿಸುತ್ತಿದೆ. ಕಾಂಗ್ರೆಸ್ ಸೃಷ್ಟಿಸುತ್ತಿರುವ ಗೊಂದಲಗಳಿಗೆ ಅರ್ಥವಿಲ್ಲ. ಅವುಗಳನ್ನು ಜನರು ನಂಬುವುದಿಲ್ಲ’ ಎಂದರು.

ಮಸೂದೆಯ ಬಗ್ಗೆ ತಮಿಳುನಾಡು ಎಂ.ಕೆ ಸ್ಟಾಲಿನ್ ಮುಖ್ಯಮಂತ್ರಿ ತೆಗೆದುಕೊಂಡ ನಿಲುವು ದಕ್ಷಿಣದ ಎಲ್ಲ ರಾಜ್ಯಗಳ ಅಭಿಪ್ರಾಯವಲ್ಲ ಎಂದು ಅವರು ಹೇಳಿದರು

ಕಾಂಗ್ರೆಸ್ ಮತ್ತು ಡಿಎಂಕೆ ಗುರಿಯಾಗಿಸಿಕೊಂಡು ಮೈತ್ರಿಯನ್ನು ವಾಗ್ದಾಳಿ ನಡೆಸಿದ ಅವರು, ‘ರಾಹುಲ್ ಗಾಂಧಿ ಅವರು ಕೆಲ ದಿನಗಳ ಹಿಂದೆ, ತಾವು ಸ್ಟಾಲಿನ್ ಅವರ ಕಿರಿಯ ಸಹೋದರ ಎಂದು ಹೇಳಿಕೊಂಡಿದ್ದರು. ಆದರೆ, ವಿಧಾನಸಭೆ ಕ್ಷೇತ್ರಗಳ ಹಂಚಿಕೆ ನಂತರ ಹಿರಿಯ ಸಹೋದರ ಕಿರಿಯ ಹಿರಿಯ ಸಹೋದರನ ಮೇಲೆ ಮುನಿಸಿಕೊಂಡಂತೆ ಕಾಣುತ್ತಿದೆ. ಆದರೂ ಕಿರಿಯ ಸಹೋದರ ಈಗಲೂ ಹಿರಿಯ ಸಹೋದರನಿಂದ ಪ್ರೀತಿಯನ್ನು ನಿರೀಕ್ಷೆ ಮಾಡುತ್ತಿರುವಂತೆ ತೋರುತ್ತಿದೆ’ ಎಂದು ವ್ಯಂಗ್ಯವಾಡಿದರು.

1995ರಲ್ಲಿ ಎಚ್.ಡಿ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ಆಶಯವನ್ನು ಪ್ರಪ್ರಥಮ ಬಾರಿಗೆ ಪ್ರಸ್ತಾಪಿಸಿದ್ದರು ಎಂಬುದನ್ನು ಈ ಸ್ಮರಿಸಿದ ಅವರು, ದೇವೇಗೌಡರು ಆ ನಂತರ 1996ರಲ್ಲಿ ಪ್ರಧಾನಿಯಾಗಿ ಸಂಸತ್ತಿನಲ್ಲಿ ಈ ಮಹಿಳಾ ಮೀಸಲು ಮಸೂದೆಯನ್ನು ಮಂಡಿಸಿದ್ದರು.ಆದರೆ, ರಾಜಕೀಯ ಬೆಂಬಲದ ಕೊರತೆಯಿಂದಾಗಿ ಮಸೂದೆಗೆ ಅಂಗೀಕಾರ ಸಿಗಲಿಲ್ಲ’ ಎಂದರು.

WhatsApp

Join Now

Telegram

Join Now

Instagram

Join Now