--Ads--

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಸೌಲಭ್ಯಗಳನ್ನು ಕಲ್ಪಿಸಲು ಸಿದ್ಧ: ಜಿ ಪಂ ಸಿಇಒ 

On: April 18, 2026 5:24 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಸೌಲಭ್ಯಗಳನ್ನು ಕಲ್ಪಿಸಲು ಸಿದ್ಧ: ಜಿ ಪಂ ಸಿಇಒ 

ಶಿಡ್ಲಘಟ್ಟ : ಶಾಲೆಗಳಲ್ಲಿ ದಾಖಲಾತಿಯನ್ನು ಹೆಚ್ಚಿಸಿಕೊಳ್ಳಲು ಈಗಾಗಲೇ ಜಿಲ್ಲೆಯಾದ್ಯಂತ ಬೇಸಿಗೆ ಶಿಬಿರಗಳನ್ನು ನಡೆಸಲಾಗುತ್ತಿದೆ ತಾಲ್ಲೂಕಿನಲ್ಲಿ ಈಗ ಕೆವಲ ಮೂರು ಶಾಲೆಗಳಲ್ಲಿ ಮಾತ್ರ ಬೇಸಿಗೆ ಶಿಬಿರವನ್ನು ನಡೆಸಲಾಗುತ್ತಿದ್ದು ಇನ್ನೂ ಹೆಚ್ಚಿನ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಶೀಘ್ರವೇ ಬೇಸಿಗೆ ಶಿಬಿರಗಳನ್ನು ಆರಂಭಿಸಬೇಕು ಎಂದು ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ನವೀನ್‌ಭಟ್ ತಿಳಿಸಿದರು.

ತಾಲ್ಲೂಕಿನ ಸುಗಟೂರು ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರಕ್ಕೆ ಅನಿರೀಕ್ಷಿತ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುವುದು, ಉತ್ತಮ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಬಲೀಕರಣ ಮಾಡುವಲ್ಲಿ ಇಲಾಖೆಯು ಸದಾ ಸನ್ನದ್ಧವಾಗಿದೆ ಈಗಾಗಲೇ ಅನೇಕ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ, ದ್ವಿಭಾಷಾ ಮಾಧ್ಯಮದಲ್ಲಿ ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು.

ಇದೇ ತಿಂಗಳ ೨೨ ರಂದು ಜಿಲ್ಲೆಯಾದ್ಯಂತ ದಾಖಲಾತಿ ಆಂದೋಲನ ಮಾಡಲಾಗುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾತಿ ಮಾಡಿಕೊಳ್ಳಲು ಶಾಲೆಗಳಿಗೆ ಸೂಚಿಸಲಾಗಿದೆ ,
ಸುಗಟೂರು ಶಾಲೆಯಲ್ಲಿನ ಭೌತಿಕ ಸೌಲಭ್ಯಗಳನ್ನು ಖುದ್ದು ವೀಕ್ಷಿಸಿ, ಶೈಕ್ಷಣಿಕ ಚಟುವಟಿಕೆಗಳೆಲ್ಲದರ ಮಾಹಿತಿ ಪಡೆದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಸ್ತುತ ಶೈಕ್ಷಣಿಕ ವರ್ಷಾರಂಭದಿಂದಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಅನುಮತಿ ಕೊಡಿಸುವ ಭರವಸೆ ನೀಡಿದರು ,ಶಾಲೆಯಲ್ಲಿ ಉತ್ತಮ ಗುಣಮಟ್ಟದ ಆಕರ್ಷಕ ಜಿರಾಫೆ ಡೆಸ್ಕ್, ಪ್ರಯೋಗಾಲಯನ್ನು ನೋಡಿ ಸಂತಸ ವ್ಯಕ್ತಪಡಿಸಿ ಮುಂದಿನ ಶೈಕ್ಷಣಿಕ ವರ್ಷದಿಂದ ಟಿವಿ, ಇಂಟರಾಕ್ಟೀವ್ ಬೋರ್ಡ್ ಗಳ ಮೂಲಕ ಬೋಧಿಸುವ ಶಿಕ್ಷಕರಿಗೆ ಒಂದೇರೀತಿಯ ವೀಡಿಯೋ, ವಿಷಯ ಬೋಧನೆಗೆ ಒಂದು ಸಾಮಾನ್ಯ ವೇಳಾಪಟ್ಟಿ ತಯಾರಿಸಲಾಗುವುದು ಎಂದರು.

ಮುಖ್ಯಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ಮಾತನಾಡಿ, ಬೇಸಿಗೆ ಶಿಬಿರದ ವೇಳೆ ಮಕ್ಕಳಲ್ಲಿ ಮೌಲ್ಯಗಳು, ವ್ಯಕ್ತಿತ್ವ ನಿರ್ಮಾಣ, ದೇಶಭಕ್ತಿ, ದೇಶಾಬಿಮಾನ ಮೂಡಿಸಲು ಪೂರಕವಾದ ಅನೇಕ ಚಟುವಟಿಕೆಗಳನ್ನು ರೂಪಿಸಿಕೊಳ್ಳಲಾಗಿದೆ ಎಂದರು.

ಇದೇ ವೇಳೆ ಶಿಬಿರದಲ್ಲಿ ಪಾಲ್ಗೊಂಡಿದ್ದ ಮಕ್ಕಳೊಂದಿಗೆ ಜಿ.ಪಂ.ಸಿಇಒ.ನವೀನ್ ಭಟ್ ಅವರು ಸಂವಾದ ನಡೆಸಿದರು, ಇಂಗ್ಲೀಷ್‌ನಲ್ಲಿ ಭಾಷಣ, ವೇದಗಣಿತದ ಲೆಕ್ಕಗಳನ್ನು ಮಾಡಿಸಿದರು ,ಕರ್ನಾಟಕ ಭೂಪಟದಲ್ಲಿ ವಿವಿಧ ಸ್ಥಳಗಳನ್ನು ಗುರುತಿಸಲು ಹೇಳಿದರು,ಮಕ್ಕಳಿಗೆ ಉಚಿತ ನೋಟ್‌ಪುಸ್ತಕ, ಮೌಲ್ಯಶಿಕ್ಷಣದ ಕಿರು ಹೊತ್ತಿಗೆ, ಕರ್ನಾಟಕ ಮ್ಯಾಪ್‌ಗಳನ್ನು ವಿತರಿಸಲಾಯಿತು ನಂತರ ಗ್ರಾಮದ ವಿವಿದೆಡೆ ಯೋಜನೆಗಳನ್ನು ಪರಿಶೀಲಿಸಿದರು ಹಾಗು ಜೆ.ವೆಂಕಟಾಪುರ ಮತ್ತು ತೈಬಾನಗರ ಶಾಲೆಗಳಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರಗಳಿಗೆ ಬೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆರ್.ಹೇಮಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ಕೆ.ಎಚ್.ಪ್ರಸನ್ನಕುಮಾರ್, ಬಿಆರ್‌ಪಿ ವೇಣುಮಾಧವಿ, ಸಂಪನ್ಮೂಲ ವ್ಯಕ್ತಿ, ಭರತನಾಟ್ಯ ಕಲಾವಿದೆ ಅನನ್ಯ, ಪಿಡಿಒ ಮಮತಾ, ಎಸ್‌ಡಿಎಂಸಿ ಅಧ್ಯಕ್ಷ ವೆಂಕಟೇಶ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸತೀಶ್, ಶಿವಶಂಕರಪ್ಪ,ನಾರಾಯಣಸ್ವಾಮಿ,ದೇವರಾಜು, ಮುಖಂಡ ಅಶೋಕ್, ನಾಗೇಶ್‌ಗೌಡ, ಶಿಕ್ಷಕ ಎ.ಬಿ.ನಾಗರಾಜ, ಮಧು ಹಾಗು ಇಂಜಿನಿಯರಿಂಗ್ ವಿಭಾಗ, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

WhatsApp

Join Now

Telegram

Join Now

Instagram

Join Now