--Ads--

ಕೆಎಂಎಫ್ ಚುನಾವಣೆ ಇನ್ನಷ್ಟು ವಿಳಂಬ ಸಾಧ್ಯತೆ 

On: April 20, 2026 3:51 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಕೆಎಂಎಫ್ ಚುನಾವಣೆ ಇನ್ನಷ್ಟು ವಿಳಂಬ ಸಾಧ್ಯತೆ 

ಬೆಂಗಳೂರು: ಕೆಎಂಎಫ್ ಮತ್ತು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹುದ್ದೆಗಳ ಚುನಾವಣೆ ಇನ್ನಷ್ಟು ಮುಂದಕ್ಕೆ ಹೋಗುವ ಸಾಧ್ಯತೆ ಹೆಚ್ಚಾಗಿವೆ. ವಿಧಾನಸಭೆ ಅಧಿವೇಶನ ಮುಗಿದ ಮೇಲೆ ಈ ಪ್ರಕ್ರಿಯೆ ಮುಗಿಸಲು ಸಿಎಂ ಸಿದ್ದರಾಮಯ್ಯ ಆಸಕ್ತ ರಾಗಿದ್ದರು. ರಾಜಕೀಯ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಎರಡೂ ಸಂಸ್ಥೆಗಳ ಅಧ್ಯಕ್ಷ ಸ್ಥಾನ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲು ಸಿಎಂ ನಿರ್ಧರಿಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಕೆಎಂಎಫ್ ಅಧ್ಯಕ್ಷ ಹುದ್ದೆ ತಮ್ಮ ಬೆಂಬಲಿಗರಿಗೆ ಬೇಕು ಎಂದು ಡಿಸಿಎಂ ಪಟ್ಟು ಹಿಡಿದರೆ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನವನ್ನು ಆಪ್ತ ಕೆ.ಎನ್.ರಾಜಣ್ಣಗೆ ನೀಡಲು ಸಾಧ್ಯವಾಗುತ್ತದೆ. ಒಂದು ವೇಳೆ ಅಪೆಕ್ಸ್ ಬ್ಯಾಂಕ್ ಹುದ್ದೆಗೆ ಡಿಸಿಎಂ ಪಟ್ಟು ಹಿಡಿದರೆ, ಕೆಎಂಎಫ್ ಅಧ್ಯಕ್ಷ ಹುದ್ದೆಗೆ ತಮ್ಮ ಬೆಂಬಲಿಗ ಕೊಪ್ಪಳದ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಗೆ ಕೊಡಲು ಸಾಧ್ಯವಾಗುತ್ತದೆ ಎನ್ನುವುದು ಸಿಎಂ ರಾಜಕೀಯ ಲೆಕ್ಕಾಚಾರವಾಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

WhatsApp

Join Now

Telegram

Join Now

Instagram

Join Now