--Ads--

ಜೆಡಿಎಸ್‌ ಸಿದ್ಧಾಂತದಲ್ಲಿ ಬದಲಾವಣೆ ಇಲ್ಲ: ನಿಖಿಲ್ ಕುಮಾರಸ್ವಾಮಿ

On: April 22, 2026 3:00 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಜೆಡಿಎಸ್‌ ಸಿದ್ಧಾಂತದಲ್ಲಿ ಬದಲಾವಣೆ ಇಲ್ಲ: ನಿಖಿಲ್ ಕುಮಾರಸ್ವಾಮಿ 

ಚಿಕ್ಕಮಗಳೂರು: ಜಾತ್ಯತೀತ ಜನತಾದಳ ಎನ್ನುವುದುಅದರ ಘೋಷ ವಾಕ್ಯದಲ್ಲೇ ಇದೆ. ನಮ್ಮ ಸಿದ್ಧಾಂತದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಯಾವತ್ತಿದ್ರೂ ಜಾತ್ಯತೀತಾನೇ ಜಾತ್ಯತೀತವಾಗಿ ಉಳಿಯುತ್ತೇವೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಜೆಡಿಎಸ್ ಜತೆ ಮೈತ್ರಿ ಆಗಿ ರುವುದಕ್ಕೆ ಕಾರ್ಯಕರ್ತರು ಗೊಂದಲದಲ್ಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ, ನಾವು ಎನ್‌ಡಿಎ ಜೊತೆ ಮಿತ್ರ ಪಕ್ಷ ವಾಗಿ ಕೈ ಜೋಡಿಸಿದ್ದೇವೆ. ಆದರೆ ನಮ್ಮ ಸಿದ್ಧಾಂತವನ್ನ ಯಾರ ಜೊತೆಗೆ ಮರ್ಜ್ ಮಾಡಿಲ್ಲ. ನಮ್ಮದು ಬೇರೆ ರಾಜಕೀಯ ಪಕ್ಷವಾಗಿದೆ ಎಂದರು.

ಜೆಡಿಎಸ್ ಸರ್ವ ಜನಾಂಗದ ಶಾಂತಿಯ ತೋಟದ ಯಾವುದೇ ಧರ್ಮ, ಜಾತಿ, ಸಮುದಾಯದ ಆಧಾರದ ಮೇಲೆ ರಾಜ ಕಾರಣ ಮಾಡಿಕೊಂಡು ಬಂದಿಲ್ಲ. ಎಲ್ಲರನ್ನೂ ಸಮಾನ ವಾಗಿ ನೋಡುವ ಕೆಲಸವನ್ನು ಪಕ್ಷ ಮಾಡಿದೆ ಇದನ್ನ ಮುಂದುವರಿಸುತ್ತೇವೆ ಎಂದು ತಿಳಿಸಿದರು. ಆನೆ ದಾಳಿಯಿಂದ ಆಗುತ್ತಿರುವ ತೀವ್ರ ಹಾನಿ ಮತ್ತು ಪ್ರಾಣಾಪಾಯದ ಬಗ್ಗೆ ಕೇಂದ್ರ ಸಚಿವ ಕುಮಾರಣ್ಣ ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಶಾಶ್ವತ ಪರಿಹಾರಕ್ಕಾಗಿ ಚರ್ಚಿಸಿದ್ದಾರೆ. ತ್ವರಿತವಾಗಿ ಕ್ರಮ ಕೈಗೊಳ್ಳಲು ಚರ್ಚಿಸುತ್ತಿದ್ದಾರೆ ಎಂದರು. ದಾವಣಗೆರೆ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರ ಕಡೆಗಣನೆ ವಿಚಾರಕ್ಕೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಅಹಿಂದ ನಾಯಕರ ರಾಜಕೀಯ ಭವಿಷ್ಯ ಎಲ್ಲಿಗೆ ಹೋಗುತ್ತೆ ಎಂಬ ಆತಂಕ ನನಗಿದೆ. ಅಲ್ಪಸಂಖ್ಯಾತರನ್ನ ಕಾಂಗ್ರೆಸ್ ವೋಟ್ ಬ್ಯಾಂಕ್ ಆಗಿ ಮಾತ್ರ ಉಪಯೋಗಿಸಿ ಕೊಳ್ಳುತ್ತಿದೆ. ಅಲ್ಪಸಂಖ್ಯಾತರನ್ನ ಕಾಂಗ್ರೆಸ್ ಯಾವತ್ತೂ ಬೆಳೆಸಿಲ್ಲ ಎಂದು ಕಿಡಿಕಾರಿದರು.

ಕಡೂರು ಕ್ಷೇತ್ರದಲ್ಲಿ ನಿರಂತರವಾಗಿ ಜೆಡಿಎಸ್ ಗೆಲುವಾಗಿದೆ. ನಮ್ಮ ನಮ್ಮ ಪಕ್ಷಕ್ಕೆ ಪಕ್ಷಕ್ಕೆ ಜಿಲ್ಲೆಯಲ್ಲಿ ಒಂದು ಬಲವಿದೆ. ಪಕ್ಷಕ್ಕೆ ಹೊಸ ವೇಗ ನೀಡಬೇಕೆಂದು ಹೋರಾಟ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ನಗರಸಭಾ ಅಧ್ಯಕ್ಷೆ ಶೀಲಾ ದಿನೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್ ಇದ್ದರು.

 

WhatsApp

Join Now

Telegram

Join Now

Instagram

Join Now