ವಿಜಯ ದರ್ಪಣ ನ್ಯೂಸ್….
ಜಿಲ್ಲಾಡಳಿತ ಭವನದಲ್ಲಿ ಏ.24 ರಂದು ಡಾ. ರಾಜ್ ಕುಮಾರ್ ಜನ್ಮದಿನಾಚರಣೆ ಆಚರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಏ.24:
“ವರನಟ ಡಾ. ರಾಜ್ ಕುಮಾರ್ ಅವರ 97 ನೇ ಜನ್ಮದಿನಾಚರಣೆಯನ್ನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ಇವರ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ..
ಏ.24 ರಂದು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, “ಡಾ. ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಪುಷ್ಪಾ ನಮನ ಸಲ್ಲಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷವಾಗಿ ಡಾ. ರಾಜ್ ಕುಮಾರ್ ಅವರ ಗೀತೆಗಳ ಗಾಯನ ವನ್ನು ಏರ್ಪಡಿಸಲಾಗಿದೆ.

ಮುಖ್ಯ ಅತಿಥಿಗಳು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ವಾಸಂತಿ ಅಮರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಅಶೋಕ್ ಕುಮಾರ್ ಡಿ ಉಪಸ್ಥಿತರಿರಲಿದ್ದಾರೆ.









