--Ads--

ಮುತ್ಸಂದ್ರದಲ್ಲಿ ವಿಜೃಂಭಣೆಯಿಂದ ನಡೆದ ಕರಗ ಮಹೋತ್ಸವ

On: April 28, 2026 5:23 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಮುತ್ಸಂದ್ರದಲ್ಲಿ ವಿಜೃಂಭಣೆಯಿಂದ ನಡೆದ ಕರಗ ಮಹೋತ್ಸವ

ಆನೇಕಲ್ ತಾಲೂಕಿನ ಮಾಯಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ಸಂದ್ರ ಗ್ರಾಮದಲ್ಲಿ ಕರಗ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಸಂಪ್ರದಾಯದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು ಬೆಳಗ್ಗೆಯಿಂದ ಸಂಜೆವರೆಗೂ ಸುತ್ತಮುತ್ತಲ ಗ್ರಾಮಗಳ ಭಕ್ತರು ಭೇಟಿ ನೀಡಿ ಕರಗ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಊರ ಹಬ್ಬ ಪ್ರಯುಕ್ತ ಗ್ರಾಮ ದೇವತೆಗಳ ಪಲ್ಲಕ್ಕಿ ಉತ್ಸವ ನಡೆಯಿತು ಅಲಂಕೃತ ಪಲ್ಲಕ್ಕಿಗಳಲ್ಲಿ ಗ್ರಾಮ ದೇವತೆಗಳ ಉತ್ಸವ ಮೂರ್ತಿಗಳನ್ನು ಕುಳ್ಳಿರಿಸಿ ವಿಜೃಂಭಣೆಯಿಂದ ಮೆರವಣಿಗೆ ನಡೆಯಿತು. ವಿವಿಧ ಜನಪದ ಕಲಾತಂಡಗಳು ವಿವಿಧ ಬಂಗಿಗಳ ಪ್ರದರ್ಶನ ನೀಡಿದವು. ಮಹಿಳೆಯರು ಗ್ರಾಮ ದೇವತೆಗಳಿಗೆ ಸಂಭ್ರಮ ಸಡಗರದಿಂದ ದೀಪಾರತಿಗಳನ್ನು ಬೆಳಗಿದರು.

ಕರಗವು ಮುತ್ಸಂದ್ರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು, ವೀರಕುಮಾರರು ಕತ್ತಿಗಳಲ್ಲಿ ಹಲಗು ಸೇವೆ ಸಲ್ಲಿಸಿದರು. ಗ್ರಾಮದ ಎಲ್ಲರೂ ಒಗ್ಗೂಡಿ ಊರ ಹಬ್ಬವನ್ನು ಆಚರಿಸುತ್ತಿರುವುದರಿಂದ ಗ್ರಾಮದಲ್ಲಿ ಸುಖ ಶಾಂತಿ ನೆಮ್ಮದಿ ಮೂಡುತ್ತದೆ ಎಂದು ಗ್ರಾಮಸ್ಥರು ತಿಳಿಸಿದರು

WhatsApp

Join Now

Telegram

Join Now

Instagram

Join Now