ವಿಜಯ ದರ್ಪಣ ನ್ಯೂಸ್…..
ರೈತರು ಜಾನುವಾರುಗಳಿಗೆ ಲಸಿಕೆ ಹಾಕಿಸುವುದರಿಂದ ರೋಗ ಬರದಂತೆ ತಡೆಯಬಹುದು :ಶಾಸಕ ಬಿ.ಎನ್. ರವಿಕುಮಾರ್

ಶಿಡ್ಲಘಟ್ಟ : ಕಾಲುಬಾಯಿ ಜ್ವರವು ಹಾಲಿನ ಉತ್ಪಾದನೆ, ಹೈನುಗಾರಿಕೆ ಆದಾಯ ಮತ್ತು ರೈತರ ಜೀವನದ ಮೇಲೆ ಗಂಭೀರ ಪ್ರಭಾವ ಬೀರುತ್ತದೆ ,ಜಾನುವಾರುಗಳಿಗೆ ನಿಯಮಿತವಾಗಿ ಲಸಿಕೆ ಹಾಕಿಸುವುದರಿಂದ ರೋಗ ಬರದಂತೆ ತಡೆಯಲು ಸಾಧ್ಯವಾಗಲಿದೆ ಎಂದು
ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು.
ತಾಲ್ಲೂಕಿನ ಮಳಮಾಚನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಚೇರಿ ಆವರಣದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಕಾಲುಬಾಯಿ ಜ್ವರ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೈನುಗಾರಿಕೆ ಕೃಷಿ ಮತ್ತು ನಮ್ಮ ಕುಟುಂಬದ ಜೀವನಾಧಾರ ರಕ್ಷಿಸುವ ಒಂದು ದೊಡ್ಡ ಹೆಜ್ಜೆಯಾಗಿದೆ ಎಂದು ಹೇಳಿದರು.
ಇದೇ ವೇಳೆ ಡಿಜಿಟಲ್ ಎಐ ಗನ್ ವಿತ್ ಕ್ಯಾಮೆರಾ, ರಾಸುಗಳ ವಿಮಾ ಚೆಕ್ ವಿತರಣೆ, ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಗಣಕ ಯಂತ್ರಗಳನ್ನು ವಿತರಿಸಲಾಯಿತು.
ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ಹುಜಗೂರು ರಾಮಯ್ಯ, ಚಿಮುಲ್ ಶಿಡ್ಲಘಟ್ಟ ಶಿಬಿರದ
ಉಪ ವ್ಯವಸ್ಥಾಪಕ ಡಾ. ಬಿ.ಆರ್.ರವಿಕಿರಣ್, ಸಹಾಯಕ ನಿರ್ದೇಶಕ ,ಶ್ರೀನಾಥ್ ರೆಡ್ಡಿ, ಸಂಘದ ಅಧ್ಯಕ್ಷ ದ್ಯಾವಪ್ಪ, ಸಿ.ಇ.ಒ ಎಂ.ವಿನಯ್ ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಜಯಮ್ಮ ,ಜಿ.ನವೀನ್, ಕುಮಾರ್ , ಗೋಪಾಲ್ ಹಾಗು ಮಳಮಾಚನಹಳ್ಳಿ ಗ್ರಾಮಸ್ಥರು ಹಾಜರಿದ್ದರು.










