--Ads--

ತನುಶ್ರೀ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಿದ ಶಾಸಕ ದರ್ಶನ ಧ್ರುವ ನಾರಾಯಣ

On: April 28, 2026 8:44 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ತನುಶ್ರೀ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಿದ ಶಾಸಕ ದರ್ಶನ ಧ್ರುವ ನಾರಾಯಣ

ತಾಂಡವಪುರ ಏಪ್ರಿಲ್ 27 ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಲ್ಲೂಕಿನ ಕುರಹಟ್ಟಿ ಗ್ರಾಮದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ತನೂಶ್ರೀ ಅವರು 444 ಅಂಕಗಳೊಂದಿಗೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದರೂ, ಅಂಕಗಳು ಕಡಿಮೆ ಬಂದಿವೆ ಎಂಬ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುರಹಟ್ಟಿ ಗ್ರಾಮದಲ್ಲಿ ನಡೆದಿತ್ತು
ಶಾಸಕ ದರ್ಶನ್ ದ್ರುವ ನಾರಾಯಣ್ ಇಂದು ತನುಶ್ರೀ ಅವರ ವಿಳಾಸಕ್ಕೆ ತೆರಳಿ ಅವರ ಕುಟುಂಬಕ್ಕೆ ಧೈರ್ಯ ತುಂಬಿ ಮಾತನಾಡಿ ಅತ್ಯಂತ ದುಃಖಕರ ಮತ್ತು ಮನಕಲಕುವಂತದ್ದು. ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿ ಧೈರ್ಯ ತುಂಬಿದರು. ಈ ದುರ್ಘಟನೆ ನಮ್ಮ ಸಮಾಜಕ್ಕೆ ಒಂದು ಎಚ್ಚರಿಕೆಯಾಗಿದೆ

 

ಒಂದು ಪರೀಕ್ಷೆಯ ಫಲಿತಾಂಶವೇ ಜೀವನದ ಅಂತಿಮ ತೀರ್ಮಾನವಲ್ಲ. ಅಂಕಗಳು ನಮ್ಮ ಸಾಮರ್ಥ್ಯವನ್ನು ಸಂಪೂರ್ಣವಾಗಿ ಅಳೆಯುವುದಿಲ್ಲ. ವಿದ್ಯಾರ್ಥಿಗಳು ನಿರಾಶೆಗೆ ಒಳಗಾಗದೆ, ತಮ್ಮ ಮುಂದೆ ಇರುವ ಅನೇಕ ಅವಕಾಶಗಳನ್ನು ಕಂಡು ಮುಂದುವರಿಯಬೇಕು.
ಪೋಷಕರು, ಶಿಕ್ಷಕರು ಹಾಗೂ ಸಮಾಜದ ಪ್ರತಿಯೊಬ್ಬರೂ ಮಕ್ಕಳ ಮನಸ್ಥಿತಿಯನ್ನು ಅರ್ಥಮಾಡಿಕೊಂಡು, ಅವರಿಗೆ ಬೆಂಬಲವಾಗಿ ನಿಲ್ಲುವುದು ಅತ್ಯಂತ ಮುಖ್ಯ. ಆತ್ಮವಿಶ್ವಾಸ ಮತ್ತು ಧೈರ್ಯ ತುಂಬುವ ವಾತಾವರಣವನ್ನು ನಿರ್ಮಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಶಿಕ್ಷಣಾಧಿಕಾರಿ ಮಹೇಶ್ ಮತ್ತು ಬ್ಲಾಕ್ ಅಧ್ಯಕ್ಷ ಕುರಹಟ್ಟಿ ಮಹೇಶ್ ಸೇರಿದಂತೆ ಗ್ರಾಮಸ್ಥರು ಮುಖಂಡರುಗಳು ಹಾಜರಿದ್ದರು

WhatsApp

Join Now

Telegram

Join Now

Instagram

Join Now