--Ads--

ಜೂನ್.7ರಂದು ಶಿಡ್ಲಘಟ್ಟದಲ್ಲಿ ಶ್ರೀರಾಮ ಶೋಭಾಯಾತ್ರೆ ಆಚರಣೆ

On: May 8, 2026 6:19 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಜೂನ್.7ರಂದು ಶಿಡ್ಲಘಟ್ಟದಲ್ಲಿ ಶ್ರೀರಾಮ ಶೋಭಾಯಾತ್ರೆ ಆಚರಣೆ

ಶಿಡ್ಲಘಟ್ಟ : ನಗರದ ಹೊರವಲಯದ ದಿಬ್ಬೂರಹಳ್ಳಿ ರಸ್ತೆಯಲ್ಲಿ ಹನುಮಂತಪುರ ಗೇಟ್ ಬಳಿಯ ಆಂಜನೇಯಸ್ವಾಮಿ ದೇವಾಲಯದಲ್ಲಿ ಮುಂದಿನ ತಿಂಗಳು ಜೂನ್.7ರಂದು ಬೆಳಗ್ಗೆ 11ಗಂಟೆಗೆ ಶೋಭಾಯಾತ್ರೆ ಪ್ರಾರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆಯು ಸಂಚರಿಸಲಿದೆ ಎಂದು
ಶ್ರೀರಾಮ ಶೋಭಾಯಾತ್ರೆ ಆಚರಣಾ ಟ್ರಸ್ಟ್‌ನ
ಅಧ್ಯಕ್ಷ ಬಿ.ವೆಂಕಟೇಶ್ ತಿಳಿಸಿದರು.

ನಗರದ ಕೋಟೆ ವೃತ್ತದ ಶ್ರೀರಾಮ ದೇವಸ್ಥಾನದ ಆವರಣದಲ್ಲಿ ಶೋಭಾಯಾತ್ರೆ ಕರಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಶೋಬಾಯಾತ್ರೆ ಮೆರವಣಿಗೆಯಲ್ಲಿ ಜನಪದ ಕಲಾ ತಂಡಗಳು ಇರಲಿವೆ ,12 ಅಡಿ ಎತ್ತರ ಶ್ರೀಕೋದಂಡರಾಮ ಮೂರ್ತಿ, 6 ಅಡಿ ಎತ್ತರದ ಬಾಲರಾಮನ ವಿಗ್ರಹ, ಕುರುಕ್ಷೇತ್ರ ರಥ ಹನುಮ ವೇಷಧಾರಿಗಳು, ಕೇರಳದ ಚಂಡೆ ವಾದ್ಯ ಇರಲಿದೆ ಎಂದು ಹೇಳಿದರು.

ಮೆರವಣಿಗೆ ನಂತರ ಬಸ್ ನಿಲ್ದಾಣದ ಬಳಿ ವೇದಿಕೆ ಕಾರ್ಯಕ್ರಮವಿದೆ ಗ್ರಾಮಾಂತರ ಪ್ರದೇಶದ ಅನೇಕ ಹಳ್ಳಿಗಳಿಂದ ಸ್ವಯಂಪ್ರೇರಿತರಾಗಿ ಪಲ್ಲಕ್ಕಿಗಳನ್ನು ತಂದು ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಶ್ರೀರಾಮ ಶೋಭಾಯಾತ್ರೆ ಆಚರಣಾ
ಟ್ರಸ್ಟ್‌ನ ಗೌರವಾಧ್ಯಕ್ಷ ಎಸ್.ಪ್ರಕಾಶ್, ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಜಿ.ಕೆ.
ಅನಿಲ್‌ಕುಮಾ‌ರ್,ರವಿಚಂದ್ರ, ಭರತ್,ಲಕ್ಷ್ಮಿಪತಿ,
ಜೀವನ್ ,ನಾಗೇಶ್, ಕಿರಣ್, ರಾಮಾಂಜಿನೇಯ ಮತ್ತಿತರರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now