ವಿಜಯ ದರ್ಪಣ ನ್ಯೂಸ್…..
ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಬಗೆಹರಿಸಿದ ಶಾಸಕ ದರ್ಶನ್

ತಾಂಡವಪುರ ಮೇ 12 ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಶಾಸಕರುಇಂದು ಆಸ್ಪತ್ರೆಗೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಭೇಟಿ ನೀಡಿ ವೀಕ್ಷಣೆ ಮಾಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಸಮಸ್ಯೆಗೆ ಕಾರಣಕರ್ತರಾದ ಸಿಬ್ಬಂದಿಯನ್ನು ಸ್ಥಳದಲ್ಲೇ ಅಮಾನತುಗೊಳಿಸಿ, ಇಂತಹ ನಿರ್ಲಕ್ಷ್ಯ ಮರುಕಳಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದರು.
ಈ ವೇಳೆ ಮಾಜಿ ಶಾಸಕ ಕಳಲೆ ಕೇಶವಮೂರ್ತಿ DHO ಡಾ. ಕುಮಾರಸ್ವಾಮಿ AMO ನಾಗರಾಜ್ THO ಈಶ್ವರ್ ರವರು ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು











