--Ads--

ನೀಟ್‌ ಪರೀಕ್ಷೆ: ಕೇಂದ್ರ ಬಿಜೆಪಿ ವೈಪಲ್ಯ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

On: May 14, 2026 5:37 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ನೀಟ್‌ ಪರೀಕ್ಷೆ: ಕೇಂದ್ರ ಬಿಜೆಪಿ ವೈಪಲ್ಯ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ತಾಂಡವಪುರ ಮೇ 13 ನೀಟ್ ಪರೀಕ್ಷೆ ನಡೆಯುವ ಮೊದಲೇ ಪ್ರಶ್ನೆಪತ್ರಿಕೆ ಸೋರಿಕೆ ಆಗಲು ಕೇಂದ್ರ ಸರ್ಕಾರದ ವೈಫಲ್ಯ ಕಾರಣವೆಂದು ಆರೋಪಿಸಿ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆಗೊಳಿಸಿದರು

ಮೈಸೂರಿನ ಅರಮನೆ ಮುಂಭಾಗದಲ್ಲಿರುವ.
ಕಾಡಾ ಕಚೇರಿ ಮುಖ್ಯ ದ್ವಾರದ ಬಳಿ ಪ್ರತಿಭಟನೆ ನಡೆಸಿ ಸಂಸದ ಯದವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಚೇರಿಯತ್ತ ನುಗ್ಗಲು ಯತ್ನಿಸಿ ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಡ್ಡ ಇಟ್ಟು ಪ್ರತಿಭಟನಾಕಾರರನ್ನು ತಡೆದರು.

ಈ ವೇಳೆ ದಾರಿಯಲ್ಲೇ ಕುಳಿತು ಪ್ರತಿಭಟನೆಗೆ ಮುಂದಾದ ಪ್ರತಿಭಟನಾಕರನ್ನು ವಶಕ್ಕೆ ಪಡೆದ ಪೊಲೀಸರು ವಾಹನದಲ್ಲಿ ಕರೆದೊಯ್ದರು.

ಯುವ ಕಾಂಗ್ರೆಸ್ ಮುಖಂಡ ಹೊಯ್ಸಳ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಕ್ಕಳ ಭವಿಷ್ಯದ ಜತೆ ಆಟ ಆಡುತ್ತಿದೆ. ಕೇಂದ್ರ ಸರ್ಕಾರದ ವೈಪಲ್ಯದಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಕೇಂದ್ರ ಶಿಕ್ಷಣ ಸಚಿವರು ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ ನೀಡಬೇಕು. ಮರು ಪರೀಕ್ಷೆ ಮುಂದಾಗಿರುವ ಕೇಂದ್ರದ ನಡೆ ಖಂಡನೀಯ ಎಂದು ಕಿಡಿಕಾರಿದರು.

ಯುವ ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಶಶಾಂಕ್ ಗೌಡ, ರೋಹಿತ್ ಸಿಂಗ್, ಬಸವಣ್ಣ, ರಹಿಮ್, ಚಾಮರಾಜ ಕ್ಷೇತ್ರ ಉಪಾಧ್ಯಕ್ಷ ಮನೋಜ್, ಬ್ಲಾಕ್ ಅಧ್ಯಕ್ಷ ಸಯ್ಯದ್ ಸಕ್ಲೇನ್, ವಾರ್ಡ್ ಅಧ್ಯಕ್ಷರಾದ ಕರಣ್ ಶ್ರೀಕಂಠಯ್ಯ, ವಿವೇಕ್, ನಿತಿನ್, ರವೀಶ್, ಸಾಯೀದ್, ಅಭಿ ಇನ್ನಿತರರು ಇದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ