--Ads--

ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ಬೇಡ : ಜಿಲ್ಲಾಧಿಕಾರಿ ಡಾ. ಅನುರಾಧ

On: May 15, 2026 12:25 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ಬೇಡ : ಜಿಲ್ಲಾಧಿಕಾರಿ ಡಾ. ಅನುರಾಧ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಮೇ. 15 :

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಕ್ಕಳ ರಕ್ಷಣಾ ಘಟಕದ ‘ಮಿಷನ್ ವಾತ್ಸಲ್ಯ’ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರು, ಅಧಿಕಾರಿಗಳ ಸಮನ್ವಯತೆ ಹಾಗೂ ಸಹಕಾರದಿಂದ ಬಾಲ್ಯ ವಿವಾಹ ಪ್ರಕರಣಗಳನ್ನು ಶೇ. ನೂರರಷ್ಟು ತಡೆಯಬಹುದು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ ಒಟ್ಟು 28 ಬಾಲ್ಯ ವಿವಾಹ ಪ್ರಕರಣಗಳಲ್ಲಿ 24 ಬಾಲ್ಯ ವಿವಾಹ ತಡೆಯಲಾಗಿದ್ದು, ಇನ್ನೂ 04 ಪ್ರಕರಣಗಳ ವಿರುದ್ಧ ಎಫ್.ಆರ್.ಐ ದಾಖಲಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಅನುಷ್ಠಾನದ ಭಾಗವಾಗಿರುವ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಬಾಲ್ಯ ವಿವಾಹ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಬೇಕು, ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಶಾಲಾ ಕಾಲೇಜು, ಕೈಗಾರಿಕೆ, ಕಾರ್ಖಾನೆಗಳಲ್ಲಿ ಆಗಿಂದಾಗ್ಗೆ ಪರಿಶೀಲನೆ ನಡೆಸಿ ಬಾಲ್ಯ ವಿವಾಹದ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

*ಸಾರ್ವಜನಿಕರು ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ-1098, ಪೊಲೀಸ್ ಸಹಾಯವಾಣಿ 112 ಕರೆ ಮಾಡಿ ಹಾಗೂ ಸಂಬಂಧಪಟ್ಟ ಪೊಲೀಸ್‌ ಠಾಣೆ ಅವರ ಗಮನಕ್ಕೆ ತುರ್ತಾಗಿ ತರಬಹುದಾಗಿದೆ- ಡಿ.ಸಿ*

ಜಿಲ್ಲೆಯಲ್ಲಿ 2025-26 ನೇ ಸಾಲಿನಲ್ಲಿ 70 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.

ಭಾರತ ಸರ್ಕಾರವು ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಲ್ಲಿ ಮಕ್ಕಳು. ಕುಟುಂಬದ ವ್ಯವಸ್ಥೆಯಲ್ಲಿ ಬೆಳೆಯಲು ಸಹಾಯವಾಗಲು ಆರಂಭಿಸಿದ ಏಕ ಪೋಷಕತ್ವ ಪ್ರಾಯೋಜಕತ್ವ ಕಾರ್ಯಕ್ರಮದಡಿ ಪ್ರತಿ ತಿಂಗಳು 4 ಸಾವಿರ ರೂ. ರಂತೆ ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ 623 ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಡಿಬಿಟಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪಾವತಿಸಲಾಗಿದೆ.

2025-26ನೇ ಸಾಲಿನಲ್ಲಿ ಪೋಷಕತ್ವ ಯೋಜನೆಯಡಿ 08 ಮಕ್ಕಳನ್ನು ಪೋಷಕತ್ವಕ್ಕೆ ನೀಡುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಕೇಂದ್ರ ಕಚೇರಿಯಿಂದ ಅಭಿನಂದನಾ ಪತ್ರ ಸ್ವೀಕರಿಸಲಾಗಿದೆ ಎಂದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಜಿಲ್ಲೆಯಾದ್ಯಂತ 8274 ಶಿಬಿರಾರ್ಥಿಗಳ ಒಳಗೊಂಡು 79 ಅರಿವು ಕಾರ್ಯಕ್ರಮ ಹಾಗೂ 12 ತರಬೇತಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಪ್ರಸ್ತುತ 09 ಮಕ್ಕಳು ದತ್ತು ಸಂಸ್ಥೆಯಲ್ಲಿದ್ದು, 05 ಮಕ್ಕಳು ಪಾಲನೆ ಮತ್ತು ಪೋಷಣೆಯಲ್ಲಿದ್ದು, 04 ಮಕ್ಕಳು ದತ್ತು ಪ್ರಕ್ರಿಯೆಯಲ್ಲಿದ್ದಾರೆ. ಇನ್ನೂ ವಿಶೇಷ ಪಾಲನಾ ಯೋಜನೆಯಡಿ ಹೆಚ್.ಐ.ವಿ ಸೋಂಕಿತ ಹಾಗೂ ಭಾದಿತ ಮಕ್ಕಳಿಗೆ ಮತ್ತು ಏಡ್ಸ್ ರೋಗದಿಂದ ಪಾಲಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಪೌಷ್ಠಿಕ ಆಹಾರ, ಶಿಕ್ಷಣ, ಆರೋಗ್ಯಕ್ಕಾಗಿ ಪ್ರತಿ ಮಾಹೆ 2000/- ರೂ. ವಿಶೇಷ ಪಾಲನಾ ಸಹಾಯಧನವಾಗಿ 130 ಮಕ್ಕಳಿಗೆ 31,20,000 ರೂ. ಡಿಬಿಟಿ ಮುಖಾಂತರ ಪಾವತಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಬಾಲನ್ಯಾಯ ನಿಧಿ ಯೋಜನೆಯಡಿ 45 ಫಲಾನುಭವಿಗಳಿಗೆ ಒಟ್ಟು 2.95 ಲಕ್ಷ ರೂ. ಸೌಲಭ್ಯವನ್ನು ಒದಗಿಸಿಕೊಡಲಾಗಿದೆ. ಜತೆಗೆ ಬಾಲನ್ಯಾಯ ಮಂಡಳಿ ಬಳಿ ಒಟ್ಟು 503 ಪ್ರಕರಣಗಳಲ್ಲಿ 2025-26 ನೇ ಸಾಲಿನ 259 ಪ್ರಕರಣಗಳು, ಹೊಸದಾಗಿ ದಾಖಲಾದ 244 ಪ್ರಕರಣಗಳು ದಾಖಲಾಗಿದ್ದು, 204 ಪ್ರಕರಣ ಇತ್ಯರ್ಥವಾಗಿದ್ದು, 299 ಪ್ರಕರಣಗಳು ಬಾಕಿ ಉಳಿದಿವೆ ಎಂದು ಮಕ್ಕಳ ರಕ್ಷಣಾಧಿಕಾರಿ ಅನಿತಾ ಲಕ್ಷ್ಮೀ ಅವರು ಮಾಹಿತಿ ನೀಡಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಬೈಲಾಂಜಿನಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now