--Ads--

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುರಕ್ಷಿತ ವಾಹನ ಚಾಲನೆಗೆ ನಾಮಫಲಕ ಅಳವಡಿಸಿ: ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

On: May 16, 2026 6:34 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುರಕ್ಷಿತ ವಾಹನ ಚಾಲನೆಗೆ ನಾಮಫಲಕ ಅಳವಡಿಸಿ: ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ:ಜಿಲ್ಲಾ ವ್ಯಾಪ್ತಿಗೆ ಒಳಪಡುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಡುಬ್ಬ, ತಿರುವುಗಳು, ಕೂಡು ರಸ್ತೆಗಳ ಬಗ್ಗೆ ವಾಹನ ಚಾಲಕರು, ಸವಾರರಿಗೆ ಮಾರ್ಗದರ್ಶನ ಮಾಡುವ ನಾಮಫಲಕಗಳನ್ನು ಅಳವಡಿ ಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇತ್ತೀಚೆಗೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಸುರಕ್ಷಿತ ಚಾಲನೆಗಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ಚಾಲಕರಿಗೆ ಮಾರ್ಗ ದರ್ಶನ ಮಾಡುವ ಫಲಕಗಳನ್ನು ಎದ್ದು ಕಾಣುವಂತೆ ಅಳವಡಿಸಬೇಕು. ಪಟ್ಟಣದ ಹೊರ ವಲಯದ ಹೆದ್ದಾರಿಗಳಲ್ಲಿ ವಿದ್ಯುತ್ ದೀಪ ವ್ಯವಸ್ಥೆ ಇರಬೇಕು. ಸುರಕ್ಷತಾ ದೃಷ್ಟಿ ಯಿಂದ ಈ ಕೆಲಸ ಆದ್ಯತೆ ಮೇರೆಗೆ ಅಗಬೇಕು. ಇದರಿಂದ ಅನೇಕ ಸಮಸ್ಯೆಗಳು ತಪ್ಪಲಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅಪಘಾತ ಪ್ರಕರಣಗಳ ತಡೆಗಾಗಿ ಚಾಲಕರಿಗೆ ವಿಶೇಷವಾದ ತರಬೇತಿ ನೀಡಬೇಕಿದೆ. ಕೆಎಸ್‌ಆರ್‌ಟಿಸಿ ವತಿಯಿಂದಲೂ ಸಂಸ್ಥೆಯ ಚಾಲಕರಿಗೆ ಸುರಕ್ಷಿತ ಚಾಲನೆಗಾಗಿ ತರಬೇತಿ ಮಾರ್ಗದರ್ಶನ ಮಾಡುವ ಕಾರ್ಯ ಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಬೇಕು. ಮಲೆಮಹದೇಶ್ವರಬೆಟ್ಟ ಭಾಗಕ್ಕೆ ತೆರಳುವ ಬಸ್ಸಿನ ಚಾಲಕರಿಗೆ ಜಾಗರೂಕವಾಗಿ ಚಾಲನೆ ಮಾಡಲು ಸೂಚಿಸಬೇಕು ಎಂದರು.

ಬಿಳಿಗಿರಿರಂಗನ ಬೆಟ್ಟದ ರಸ್ತೆಯ ಇಕ್ಕೆಲಗಳಲ್ಲಿ ಸಣ್ಣಪುಟ್ಟ ಗುಂಡಿಗಳನ್ನು ಮುಚ್ಚಬೇಕು. ಇದರಿಂದ ವಾಹನಗಳ ಸುರಕ್ಷಿತ ಸಂಚಾರಕ್ಕೆ ಅವಕಾಶವಾಗಲಿದೆ. ಲೋಕೋಪಯೋಗಿ ಇಲಾಖೆ, ಕೆ.ಎಸ್. ಆರ್.ಟಿಸಿ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.

ಹೆದ್ದಾರಿಗಳಲ್ಲಿ ಬರುವ ಜನಸಂದಣಿ ಗ್ರಾಮಗಳಲ್ಲಿ ರಸ್ತೆ ದಾಟುವುದರಿಂದ ಅಪಘಾತಕ್ಕೆ ಕಾರಣವಾಗುತ್ತದೆ. ಇದಕ್ಕಾಗಿ ನಿಗದಿತ ಸ್ಥಳ ಗುರುತು ಮಾಡಬೇಕು. ಎಲ್ಲೆಂದಲ್ಲಿ ರಸ್ತೆ ದಾಟದಿರಲು ರಸ್ತೆ ಬದಿಯಲ್ಲಿ ರೈಲಿಂಗ್ಸ್ ಬ್ಯಾರಿ ಕೇಡ್‌ಗಳನ್ನು ಹಾಕಬೇಕು. ಕೆಲವೆಡೆ ಕ್ರಾಸ್ ಬ್ಯಾರಿಯರ್‌ಗಳನ್ನು ಕಿತ್ತುಹಾಕಿ ರಸ್ತೆ ಸುರಕ್ಷತೆಗೆ ಅಡ್ಡಿಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಗೆ ತಿಳಿವಳಿಕೆ ನೀಡಬೇಕು ಎಂದರು.

ಗುಂಡ್ಲುಪೇಟೆ ಭಾಗದಲ್ಲಿ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರ ತಡೆಗಾಗಿ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಮಿತಿಮೀರಿದ ಸಾಗಾಣಿಕೆ ವಾಹನಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಆರ್.ಟಿ.ಒ, ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ತಂಡ ಜಂಟಿಯಾಗಿ ಕಾರ್ಯಾಚರಣೆ ನಡೆಸಬೇಕು. ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ನಗರ. ಪಟ್ಟಣ ಪ್ರದೇಶಗಳಲ್ಲಿ ವಾಹನಗಳ ನಿಲುಗಡೆ, ಫುಟ್ ಪಾತ್ ನಿರ್ಮಾಣ, ಸಂಚಾರಿ ವ್ಯವಸ್ಥೆಗಳನ್ನು ಕೈಗೊಳ್ಳುವಾಗ ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಬೇಕು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲೈಟ್ ಧರಿಸಿರುವ ಬಗ್ಗೆ ಪರಿಶೀಲನೆಯನ್ನು ಇನ್ನಷ್ಟು ಚುರುಕುಗೊಳಿಸಬೇಕು. ಇಬ್ಬರಿಗಿಂತ ಹೆಚ್ಚು ಸವಾರರು ವಾಹನಗಳಲ್ಲಿ ಸಂಚರಿಸುವುದನ್ನು ತಡೆಗಟ್ಟಿ ದಂಡ ವಿಧಿಸಬೇಕು. ಹೆದ್ದಾರಿಗಳಲ್ಲಿ ವಾಹನ ಸವಾರರ ಸುರಕ್ಷಿತ ಚಾಲನೆಗೆ ಮನವರಿಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್ ಅವರು ಮಾತನಾಡಿ ಗುಂಡ್ಲುಪೇಟೆ ಭಾಗದಲ್ಲಿ ಹೆಚ್ಚಾಗಿ ಅಪಘಾತ ಪ್ರಕರಣಗಳು ಸಂಭವಿಸುತ್ತಿವೆ. ಮಲೆ ಮಹದೇಶ್ವರಬೆಟ್ಟ ಭಾಗದಲ್ಲಿ ಕೆಎಸ್.ಆರ್.ಟಿಸಿ ಬಸ್ಸುಗಳು ಅಪಘಾತಕ್ಕೀಡಾಗುತ್ತಿವೆ. ಇಲ್ಲಿನ ವಾಹನ ಚಾಲಕರಿಗೆ ಹೆಚ್ಚಿನ ಜಾಗೃತಿ ತರಬೇತಿ ನೀಡುವ ಅಗತ್ಯವಿದೆ. ಹೆದ್ದಾರಿಗಳಲ್ಲಿ ಸೂಚನಾ ಫಲಕ ಅಳವಡಿಸಬೇಕು ಎಂದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್. ಗಾಯತ್ರಿ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರೇಣುಕಾ, ಕೆಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಪಿ. ನಾಗರಾಜು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ವಿ. ವೆಂಕಟೇಶ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಾಂತಮ್ಮ, ತಾಂತ್ರಿಕ ಸಹಾಯಕರಾದ ಬಿ. ಮಾದೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಎಂಜಿನಿಯರ್ ಎಂ.ಹೆಚ್. ರಿತೇಶ್, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now