--Ads--

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಡಾ.ಶಿವಶಂಕರ.ಎನ್ ಅಧಿಕಾರ ಸ್ವೀಕಾರ.

On: June 20, 2023 8:57 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್                               ಬೆಂಗಳೂರು ಗ್ರಾ. ಜಿಲ್ಲೆ, ಜೂನ್ 20…

 ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಡಾ. ಶಿವಶಂಕರ.ಎನ್ ಅವರು ವರ್ಗಾವಣೆಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.
ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.

ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಎಂ.ಶ್ರೀನಿವಾಸ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶಿಲ್ದಾರ್‌ಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಆಗಿಯೂ ಕಾರ್ಯ ನಿರ್ವಹಿಸಿದ್ದರು.

WhatsApp

Join Now

Telegram

Join Now

Instagram

Join Now