--Ads--

ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನ.

On: June 20, 2023 10:41 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್ .
ಬೆಂಗಳೂರು ಗ್ರಾ. ಜಿಲ್ಲೆ, ಜೂನ್ 20

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.10,000/- ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2022-23 ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ ರೂ. 10,000/- ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು.

ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳು ಕಛೇರಿಯ ಅಧಿಕೃತ ಜಾಲತಾಣ : https.sevasindhuservices.karntaka.gov.in ಮೂಲಕ ಆನ್‌ಲೈನ್‌ನಲ್ಲಿ 2023ರ ಜುಲೈ 31 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸುವುದು.

ಷರತ್ತು ಹಾಗೂ ನಿಯಮಗಳು:
ಅರ್ಜಿದಾರರು 2022-23ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10ನೇ ತರಗತಿ) ಯಲ್ಲಿ ಓದುತ್ತಿರಬೇಕು.
ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು ದಿನಾಂಕ : 01.04.2022 ರಿಂದ 31.03.2023 ರ ವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ ದಿನಾಂಕ 01-04-2022 ರಿಂದ 31-03-2023 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.
ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.
ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.
ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ.
ವಿದ್ಯಾರ್ಥಿ ವೇತನದ ಮೊತ್ತವನ್ನು ವಾರ್ಷಿಕ ರೂ. 10,000-00 ಗಳನ್ನು ಮಾತ್ರ ಮಂಜೂರು ಮಾಡಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ತಾವರೆಕೆರೆಯಲ್ಲಿ ಅದ್ಧೂರಿಯಾಗಿ ಜೈ ಭೀಮ್ ವಿನಾಯಕ ಗೆಳೆಯರ ಬಳಗದ 27ನೇ ವರ್ಷದ ಗಣೇಶೋತ್ಸವ

ನಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ: ಸಚಿವ ಕೆ.ಹೆಚ್ ಮುನಿಯಪ್ಪ

ಹೊಸಕೋಟೆಯಲ್ಲಿ ಮತದಾರರ ಜಾಗೃತಿ ಮ್ಯಾರಾಥಾನ್ ಹಾಗೂ SIR ವಿಶೇಷ ಆಂದೋಲನಕ್ಕೆ ಜಿ. ಪಂ. ಸಿಇಒ ಡಾ.ವಾಸಂತಿ ಅಮರ್ ಚಾಲನೆ

ದೇವನಹಳ್ಳಿ ತಾಲ್ಲೂಕು ಆಡಳಿತ ಸೌಧದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ

ತಾವರೆಕೆರೆಯಲ್ಲಿ ಅದ್ಧೂರಿ ಗಣೇಶೋತ್ಸವ ಜೈ ಭೀಮ್ ವಿನಾಯಕ ಗೆಳೆಯರ ಬಳಗದಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ : ರಸಮಂಜರಿ ಕಾರ್ಯಕ್ರಮಕ್ಕೆ ಮೆರುಗು

ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗುವುದನ್ನು ಖಚಿತಪಡಿಸಿಕೊಳ್ಳಲು ವ್ಯಾಪಕ ಕ್ರಮಗಳನ್ನು ಕೈಗೊಳ್ಳಲಾಗಿದೆ: ಮತದಾರರ ನೋಂದಣಾಧಿಕಾರಿ (ERO)