--Ads--

ಶಿಕ್ಷಕರ ಸಮಸ್ಯೆ ಬಗೆಹರಿಸುವೆ: ಎಚ್  ಎನ್ ನಾಗೇಶ್

On: May 23, 2026 3:36 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಶಿಕ್ಷಕರ ಸಮಸ್ಯೆ ಬಗೆಹರಿಸುವೆ: ಎಚ್  ಎನ್ ನಾಗೇಶ್

 

ದೇವನಹಳ್ಳಿ: ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಎಚ್‌.ಎನ್‌.ನಾಗೇಶ್ ಸಲಹೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಅವರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯಮಟ್ಟದಲ್ಲಿ ಅತ್ಯುತ್ತಮ ಕೆಲಸ ನಿರ್ವಹಿಸುತ್ತಿದೆ. ಅದೇ ರೀತಿ ತಾಲೂಕು ಸಂಘಕ್ಕೆ ಆಯ್ಕೆಯಾಗಿರುವ ಪದಾಧಿಕಾರಿಗಳು ತಾಲೂಕಿನ ಶಿಕ್ಷಕರ ಸಮಸ್ಯೆ ಗಳಿಗೆ ಸ್ಪಂದಿಸತ್ತಾರೆಂಬ ನಂಬಿಕೆ ಇದೆ. ಯಾವುದೇ ಅಧಿಕಾರಿಗಳು ಶಿಕ್ಷಕರಿಗೆ ತೊಂದರೆ ನೀಡಿದಾಗ ಸರ್ಕಾರಿ ಆದೇಶಗಳು ಶಿಕ್ಷಕರ ವಿರುದ್ಧವಾಗಿದ್ದಾಗ ಆ ವಿರುದ್ಧ ಹೋರಾಟ ಮಾಡಿ ನ್ಯಾಯ ದೊರಕಿಸಿಕೊಡಬೇಕು. ಸಂಘದಲ್ಲಿ ಒಗ್ಗಟ್ಟಿನಿಂದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪ್ರಯತ್ನಿಸಬಾರದು. ಎಂದು ಹೇಳಿದರು.

ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಯತೀಶ್ ಕುಮಾ‌ರ್ ಮಾತನಾಡಿ, ಅನೇಕ ಅಡೆತಡೆಗಳ ಮಧ್ಯೆ ಚುನಾವಣೆ ನಡೆದು ಎಚ್.ಎನ್.ನಾಗೇಶ್ ತಂಡಕ್ಕೆ ಜಯ ಸಿಕ್ಕಿದೆ. ತಾಲೂಕಿನಲ್ಲಿಯೂ ಶಿಕ್ಷಕರ ಸಮಸ್ಯೆಗಳು ಸಾಕಷ್ಟಿವೆ. ಎನ್‌ಪಿಎಸ್ ಹೋರಾಟ, ಶಾಲಾ ಶಿಕ್ಷಕರನ್ನು ಸರ್ಕಾರ ಇತರೆ ಕೆಲಸಗಳಿಗೆ ನೇಮಿಸುವುದರಿಂದ ಅವರಲ್ಲಿ ಕೆಲಸದ ಒತ್ತಡ ಹೆಚ್ಚಾಗಿದೆ. ಇದನ್ನು ಕಡಿಮೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.

ಶಾಲೆಯ ಬಿಸಿಯೂಟ ಯೋಜನೆಯಲ್ಲಿ ಮೊಟ್ಟೆ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆ ಗಳನ್ನು ಬಗೆಹರಿಸಲು ರಾಜ್ಯ ಸಂಘದ ಮೂಲಕ ಸರ್ಕಾರದ ಮೇಲೆ ಒತ್ತಡ ತರಲಾಗುವುದು. ಶಿಕ್ಷಕರ ಹಿತರಕ್ಷಣೆ ಹಾಗೂ ಅವರ ಒಳಿತಿಗಾಗಿ ನಮ್ಮ ತಂಡ ಹಗಲಿರುಳು ಶ್ರಮಿಸುತ್ತದೆ. ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಘದ ಸಭೆಯಲ್ಲಿ ಅಧ್ಯಕ್ಷರ ಮೂಲಕ ಬಗೆಹರಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.

ನೂತನ ಪದಾಧಿಕಾರಿಗಳು: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಲ್.ಎಸ್. ಯತೀಶ್‌ ಕುಮಾ‌ರ್, ಉಪಾಧ್ಯಕ್ಷರಾಗಿ ಜಿ.ಗೀತಾ, ಕೆ.ಹರೀಶ್, ಪ್ರಧಾನ ಕಾರ್ಯದರ್ಶಿಯಾಗಿ ಎ.ಮಂಜುನಾಥ್, ಖಜಾಂಚಿಯಾಗಿ ಆರ್.ಪದ್ಮಾವತಿ, ಸಂಘಟನಾ ಕಾರ್ಯದರ್ಶಿಯಾಗಿ ಪುಷ್ಪಲತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾರ್ಯಕ್ರಮದಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಹನುಮಂತರಾಯಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಬಿ.ಆದರ್ಶ, ನಾಮಿನಿ ಸದಸ್ಯರಾದ ಕೆ. ಆರ್.ವೆಂಕಟೇಶ್, ಚಂದ್ರಪ್ಪ, ಆಂಜಿನಪ್ಪ, ಸುಜಾತ ಹಾಗೂ ಜಿಲ್ಲಾ ಸಂಘದ ಪದಾಧಿಕಾರಿಗಳು ಹಾಜರಿದ್ದು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

WhatsApp

Join Now

Telegram

Join Now

Instagram

Join Now