ಹಾಸ್ಟೆಲ್ ಗಳಲ್ಲಿ ಉಚಿತ ಪ್ರವೇಶಕ್ಕಾಗಿ ಆನ್‌ಲೈನ್ ಎಸ್.ಎಚ್.ಪಿ ಪೊರ್ಟಲ್ ಮೂಲಕ ಅರ್ಜಿ ಆಹ್ವಾನ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ 
ಬೆಂಗಳೂರು ಗ್ರಾ. ಜಿಲ್ಲೆ, ಜೂನ್ 21 

ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ 2023-24ನೇ ಶೈಕ್ಷಣಿಕ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳಲ್ಲಿ ಉಚಿತ ಪ್ರವೇಶಕ್ಕಾಗಿ  ಆನ್‌ಲೈನ್ ಎಸ್.ಎಚ್.ಪಿ ಪೋಟಲ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ( ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್, ಪಾರ್ಸಿ, ಇತರೆ ವರ್ಗದ ಪ್ರವರ್ಗ-1. 2ಎ. 2ಬಿ. 3ಎ. 3ಬಿ ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು https//shp.karnataka.gov.in ಅನ್ನು ಸಂಪರ್ಕಿಸಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು 2023ರ ಜುಲೈ 15 ಕೊನೆಯ ದಿನವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರಕ್ಕಾಗಿ ಇಲಾಖೆಯ ವೆಬ್‌ಸೈಟ್ https://dom.karnataka.gov.in/bengaluru_rural/public ಅನ್ನು ನೋಡಬಹುದು.

ಹೆಚ್ಚಿನ ಮಾಹಿತಿಗಾಗಿ

ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯದ ನಿಯಮಪಾಲಕ ಅಕ್ರಂ ಪಾಷ ಮೊ.ಸಂ.: 8310397004

ನೆಲಮಂಗಲ ತಾಲ್ಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯದ ನಿಯಮ ಪಾಲಕ ಕೃಷ್ಣ ಎಂ.ಆರ್.ಮೊ.ಸಂ.: 8317403213

ದೊಡ್ಡಬಳ್ಳಾಪುರ ತಾಲ್ಲೂಕಿನ ಕಂಟನಕುಂಟೆ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯದ ನಿಯಮ ಪಾಲಕ ಸವಿತಾ ನಾಟಿಕಾರ್ ಮೊ .ಸಂ.:8310772041) ಅವರನ್ನು ಸಂಪರ್ಕಿಸಿ  ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.