--Ads--

ಸರ್ಕಾರ ಕನ್ನಡಪರ, ರೈತ ಪರ ಹೋರಾಟಗಳ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು : ಕರ್ನಾಟಕ ರಾಜ್ಯ ಒಕ್ಕಲಿಗರ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಪೂಲಕುಂಟಹಳ್ಳಿ ರಘುನಾಥರೆಡ್ಡಿ 

On: May 25, 2026 3:28 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಸರ್ಕಾರ ಕನ್ನಡಪರ, ರೈತ ಪರ ಹೋರಾಟಗಳ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು : ಕರ್ನಾಟಕ ರಾಜ್ಯ ಒಕ್ಕಲಿಗರ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಪೂಲಕುಂಟಹಳ್ಳಿ ರಘುನಾಥರೆಡ್ಡಿ 

ಶಿಡ್ಲಘಟ್ಟ : ರಾಜ್ಯ ಸರ್ಕಾರವು ಕೇವಲ ಅಲ್ಪಸಂಖ್ಯಾತರಿಗೆ ಸಂಬಂಧಪಟ್ಟ ಗಲಭೆಗಳ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವ ಮೂಲಕ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿರುವುದು ಸರಿಯಲ್ಲ, ಬದಲಿಗೆ ಕನ್ನಡಪರ, ರೈತ ಪರ ಹೋರಾಟಗಳ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕೆಂದುಎಂದು ಕರ್ನಾಟಕ ರಾಜ್ಯ ಒಕ್ಕಲಿಗರ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಪೂಲಕುಂಟಹಳ್ಳಿ ರಘುನಾಥರೆಡ್ಡಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಕನ್ನಡಪರ ಮತ್ತು ರೈತ ಪರ ಹೋರಾಟಗಾರರ ವಿರುದ್ಧ ರಾಜ್ಯದ ವಿವಿಧ ಕಡೆ ದಾಖಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆದುಕೊಳ್ಳಬೇಕು ಎಂದರು.

ಅನೇಕ ಕನ್ನಡಪರ ಹೋರಾಟಗಾರರು ಕನ್ನಡದ ವಿಷಯವಾಗಿ ಬೀದಿಗೆ ಇಳಿದು ತಮ್ಮ ಮೇಲೆ ಒಂದಲ್ಲ ಎರಡಲ್ಲ ಹತ್ತಾರು ಕೇಸುಗಳನ್ನು ಹಾಕಿಸಿಕೊಂಡು ಜೀವನ ಪೂರ್ತಿ ಠಾಣೆ, ಕೋರ್ಟು ಅಂತ ಓಡಾಡಿ ವೈಯಕ್ತಿಕ ಬದುಕನ್ನು ನಾಶ ಮಾಡಿಕೊಂಡಿದ್ದಾರೆ,ಅಂಥವರ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳನ್ನು ರಾಜ್ಯ ಸರ್ಕಾರ ಕೈಬಿಡಬೇಕೆಂದು ಆಗ್ರಹಿಸಿದರು.

WhatsApp

Join Now

Telegram

Join Now

Instagram

Join Now