--Ads--

ರೈತ ಜಮೀನುಗಳ ಸರ್ವೆ ಕಾರ್ಯ ಶೀಘ್ರ ಮುಗಿಸಿ ರೈತ ಸಂಘದಿಂದ ಆಗ್ರಹ

On: May 29, 2026 6:20 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ರೈತ ಜಮೀನುಗಳ ಸರ್ವೆ ಕಾರ್ಯ ಶೀಘ್ರ ಮುಗಿಸಿ ರೈತ ಸಂಘದಿಂದ ಆಗ್ರಹ

ಶಿಡ್ಲಘಟ್ಟ : ಸದ್ಯದಲ್ಲೇ ಮುಂಗಾರು ಮಳೆ ಆರಂಭವಾಗಲಿದ್ದು ಬಿತ್ತನೆ ಕಾರ್ಯ ಶುರುವಾದ ನಂತರ ಜಮೀನುಗಳ ಅಳತೆ ಕಾರ್ಯ ಮಾಡುವುದು ಅಸಾಧ್ಯ ರೈತರು ತಮ್ಮ ಜಮೀನುಗಳ ಹದ್ದುಬಸ್ತು, 11-ಇ ಮತ್ತು ತತ್ಕಾಲ್ ಪೋಡಿ ಅರ್ಜಿಗಳಿಗಾಗಿ ಕಚೇರಿಗೆ ಅಲೆದಾಡುತ್ತಿದ್ದಾರೆ ಕೃಷಿ ಚಟುವಟಿಕೆಗಳು ಆರಂಭಕ್ಕೂ ಮುನ್ನವೇ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಿಕೊಡಬೇಕು ಎಂದು ರೈತ ಸಂಘದ ಮುಖಂಡರು ಆಗ್ರಹಿಸಿದರು.

ತಾಲ್ಲೂಕಿನಲ್ಲಿ ರೈತರು ಸಲ್ಲಿಸಿರುವ 5,823 ಸರ್ವೆ ಅರ್ಜಿಗಳು ಇನ್ನೂ ವಿಲೇವಾರಿಯಾಗದೆ ಬಾಕಿ ಉಳಿದಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ರೈತ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಗಗನಸಿಂಧು ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಭೂದಾಖಲೆಗಳ ಅಧಿಕಾರಿ ವಸಂತ್ ಕುಮಾರ್, ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬೆಳ್ಳೂಟಿ ಮುನಿಕೆಂಪಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್, ತಾಲ್ಲೂಕು ಅಧ್ಯಕ್ಷ ಮುನೇಗೌಡ ,ಜಿಲ್ಲಾ ಯುವ ಘಟಕದ ಅಧ್ಯಕ್ಷ ನಲ್ಲೇನಹಳ್ಳಿ ಸುಬ್ರಮಣಿ, ಕಾರ್ಯಾಧ್ಯಕ್ಷ ಎಚ್‌.ಎನ್. ಕದಿರೇಗೌಡ, ಜಿಲ್ಲಾ ಸಂಚಾಲಕ ಹುಸೇನ್ ಸಾಬ್‌, ತಾಲ್ಲೂಕು ಕಾರ್ಯದರ್ಶಿ ನವೀನ್ ಚಾರ್ಯ, ಉಪಾಧ್ಯಕ್ಷ ಡಿ.ವಿ. ನಾರಾಯಣಸ್ವಾಮಿ ಹಾಗೂ ವಿವಿಧ ಗ್ರಾಮಗಳ ರೈತ ಮುಖಂಡರು ಪಾಲ್ಗೊಂಡಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ರಾಜ್ಯದಲ್ಲಿ ಕರವೇ ಕನ್ನಡ ನಾಡು, ನುಡಿ, ನೆಲ ಮತ್ತು ಜಲದ ರಕ್ಷಣೆಗಾಗಿ ನಿರಂತರವಾಗಿ ಹೋರಾಟ : ಕರವೇ ಅಧ್ಯಕ್ಷ ಮುನಿರಾಜ್(ಕುಟ್ಟಿ)

ಬೆಸ್ಕಾಂ ಖಾಸಗೀಕರಣಕ್ಕೆ ನೌಕರರು ,ಗುತ್ತಿಗೆದಾರರಿಂದ ವಿರೋಧ !

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿದು 3 ವರ್ಷ ಮುಗಿದಿದೆ ತಾಲ್ಲೂಕಿನ ಅಭಿವೃದ್ಧಿಗೆ ಕಾಂಗ್ರೆಸ್ ಮುಖಂಡರ ಕೊಡುಗೆ ಏನು :  ಪೂಲಕುಂಟಲಹಳ್ಳಿ ರಘುನಾಥ್ ರೆಡ್ಡಿ

ರೈತರಿಗೆ ಹನಿ ನೀರಾವರಿ ಹಾಗು ಕೃಷಿ ಪರಿಕರಗಳನ್ನು ರಿಯಾಯಿತಿ ದರದಲ್ಲಿ ಸರ್ಕಾರ ನೀಡಬೇಕು :  ಹಿತ್ತಲಹಳ್ಳಿ ಗೋಪಾಲಗೌಡ ಒತ್ತಾಯ 

ಇಸ್ಕಾನ್ ಗೆ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಪೂರೈಸಲು ಅವಕಾಶ ನೀಡಿರುವುದರ ವಿರುದ್ಧ ಬಿಸಿಯೂಟ ನೌಕರರಿಂದ ತಾಲ್ಲೂಕು ಪಂಚಾಯಿತಿ ಎದುರು ಪ್ರತಿಭಟನೆ !

ನರೇಂದ್ರ ಮೋದಿ ಪ್ರದಾನಿಯಾಗಿ ೧೨ ವರ್ಷಗಳು ಪೂರೈಸಿದ್ದರಿಂದ ನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ