ಒತ್ತಡದಲ್ಲಿರುವ ಪತ್ರಕರ್ತರಿಗೆ ಆರೋಗ್ಯ ಕಾಳಜಿಯೂ ಅತ್ಯಗತ್ಯ: ಸಚಿವ ದಿನೇಶ್ ಗುಂಡೂರಾವ್

ವಿಜಯ ದರ್ಪಣ ನ್ಯೂಸ್                              ಬೆಂಗಳೂರು ಜೂನ್ 24

ಪತ್ರಕರ್ತರು ಸದಾ ಒತ್ತಡದಲ್ಲಿರುತ್ತಾರೆ. ವೃತ್ತಿಯಲ್ಲಿ ಕ್ರಿಯಾಶೀಲರಾಗಿ ಇರಬೇಕಾದರೆ ಸದಾ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಮತ್ತು ಬಿಬಿಎಂಪಿ ಸಹಯೋಗ ದೊಂದಿಗೆ ಕೆಯುಡಬ್ಲ್ಯುಜೆ ಸಭಾಂಗಣದಲ್ಲಿ ಪತ್ರಕರ್ತರಿಗಾಗಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಕರ್ತರು ಸಮಾಜ ಮತ್ತು ಸರ್ಕಾರದ ನಡುವಿನ ಸಂಪರ್ಕ ಸೇತುವೆಯಂತೆ ಕಾರ್ಯವೆಸಗುತ್ತಿರುವ ಕಾರಣ ಶಿಸ್ತಿನ ಜೀವನವನ್ನು ಪಾಲಿಸಬೇಕಾಗುತ್ತದೆ. ಹಾಗಾಗಿ ನಿರಂತರ ಆರೋಗ್ಯ ತಪಾಸಣೆಗಳೂ ಅವರಿಗೆ ಅತ್ಯಗತ್ಯ ಎಂದು ಅವರು ಹೇಳಿದರು.