--Ads--

ಇಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ

On: June 3, 2026 5:26 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಇಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ

ಲೋಕವನ್ನು ಬೆಂಗಳೂರು, ಜೂನ್ 03 :

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಸನ್ಮಾನ್ಯ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದಲ್ಲಿ ಸಾರ್ವಜನಿಕರು ವೀಕ್ಷಣೆ ಮಾಡಿದರು..

ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಈ ಐತಿಹಾಸಿಕ ಮತ್ತು ಮಹತ್ವದ ಕ್ಷಣವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ರಾಜ್ಯದ ಆಯ್ದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು.

ರಾಜ್ಯದ ಜನತೆಗೆ ಈ ಮಹತ್ವದ ಕಾರ್ಯಕ್ರಮವನ್ನು ತಲುಪಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ‘ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್’ ಸಂಸ್ಥೆಯ ಸಹಯೋಗದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.

ರಾಜ್ಯಾದ್ಯಂತ ಇರುವ ಪ್ರಮುಖ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಲಾಗಿರುವ ಡಿಜಿಟಲ್ ಡಿಸ್‍ಪ್ಲೇ ಪರದೆಗಳ ಮೂಲಕ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಂಪೂರ್ಣ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಯಿತು.

ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರು ಹಾಗೂ ಸಾಮಾನ್ಯ ಜನರು ಈ ಐತಿಹಾಸಿಕ ಸಮಾರಂಭದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಈ ತಂತ್ರಜ್ಞಾನ ಆಧಾರಿತ ಉಪಕ್ರಮವನ್ನು ಕೈಗೊಳ್ಳಲಾಗಿದೆ. ಇದರಿಂದಾಗಿ ಸಾರ್ವಜನಿಕರು ತಮ್ಮ ಹತ್ತಿರದ ಬಸ್ ನಿಲ್ದಾಣಗಳಲ್ಲೇ ನಿಂತು ಮುಖ್ಯಮಂತ್ರಿಗಳು ಹಾಗೂ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ನೋಡಿ ಕಣ್ತುಂಬಿಸಿಕೊಂಡರು.

 

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಶ್ರೀ ಮಹಾ ತಪಸ್ವಿ ಫೌಂಡೇಶನ್ ವತಿಯಿಂದ ಶಿವ ಪಂಚಾಕ್ಷರಿ  ಮಹಾ ಮಂತ್ರ  ಪುಸ್ತಕ  ವಿತರಣೆ 

ಶಾಸಕ ವಿಜಯಾನಂದ್ ಎಸ್.ಕಾಶಪ್ಪನವರ್ ಸಚಿವ ಸ್ಥಾನ ನೀಡಿ ಎಂದು ಒತ್ತಾಯಿಸಿ-ಇಲಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಒತ್ತಾಯ

ಭರವಸೆ” ತಂಡದ ಡಿಜಿಟಲ್ಅಲೆ ಹಾವೇರಿಯ ಶೀಗಿಹಳ್ಳಿಗೂ ತಲುಪಿತು.

ವಿಜಯಾನಂದ್ ಕಾಶಪ್ಪನವರ್ ಸಚಿವ ಸ್ಥಾನ: ವೀರಶೈವ ಲಿಂಗಾಯಿತ- ಪಂಚಮಸಾಲಿ ಸಮಾಜ ಒತ್ತಾಯ

AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್

ಕಾಯಿನ್‌ಸ್ವಿಚ್‌ನಿಂದ ಆರನೇ ಪ್ರೂಫ್ ಆಫ್ ರಿಸರ್ವ್ಸ್ (PoR) ವರದಿ ಬಿಡುಗಡೆ; ಗ್ರಾಹಕರ ಒಟ್ಟು ಆಸ್ತಿಗಿಂತ ₹613 ಕೋಟಿ ಅಧಿಕ ಮೀಸಲು ನಿಧಿ ನಿರ್ವಹಣೆ ಮಾಡುತ್ತಿರುವ ಕಾಯಿನ್‌ಸ್ವಿಚ್